Constitution ರಾಷ್ಟ್ರೀಯ ಏಕತಾ ರ‍್ಯಾಲಿ; ಸರ್ವಾಧಿಕಾರ ಜಾರಿಗೆ ಹುನ್ನಾರ:ಖರ್ಗೆ
Team Udayavani, Feb 26, 2024, 1:08 AM IST
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲದಿದ್ದರೆ ದೇಶದಲ್ಲಿ ಸರ್ವಾಧಿಕಾರತ್ವ ಬರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಸಿದ್ದಾರೆ.
ರವಿವಾರ ಬೆಂಗಳೂರಿನ ಅರಮನೆ ಮೈದಾನ ದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಸಮಾನತೆ ತೆಗೆದುಹಾಕಬೇಕೆಂಬ ಸಂವಿ ಧಾನದ ಆಶಯ ಹಾಗೂ ನಮ್ಮ ಬೇಡಿಕೆಯನ್ನು ತಿರುಚಿ ಜನರ ದಿಕ್ಕು ತಪ್ಪಿಸುವ ಕೆಲಸ ಆಗುತ್ತಿದೆ, ಎಲ್ಲರೂ ಎಚ್ಚರದಿಂದ ಇರಬೇಕು ಎಂದು ಖರ್ಗೆ ಹೇಳಿದ್ದಾರೆ. ದೇಶದಲ್ಲಿ ಪ್ರತ್ಯೇಕ ಸಂವಿಧಾನ ಸ್ಥಾಪಿಸುವ ಚಿಂತನೆಗಳು ಒಳಗೊಳಗೆ ನಡೆಯುತ್ತಿವೆ. ಶರೀರದಲ್ಲಿ ಕೊನೆಯ ಹನಿ ರಕ್ತ ಇರುವವರೆಗೆ ಇದಕ್ಕೆ ಅವಕಾಶ ಕೊಡದೆ ಸಂವಿಧಾನವನ್ನು ರಕ್ಷಣೆ ಮಾಡಬೇಕು. ಪ್ರಧಾನಿ ಮೋದಿ ರಕ್ತ ಹೀರುವ ಕೆಲಸ ಮಾಡುತ್ತಿದ್ದಾರೆ. ಜನರ ತೆರಿಗೆ ಹಣದಲ್ಲಿ ಜಾರಿಯಾದ ಯೋಜನೆಗಳನ್ನು ತನ್ನದೆಂದು ಹೇಳಿಕೊಳ್ಳುವ ಮೂಲಕ ಸರ್ವಾಧಿ ಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾಳಜಿಯುಳ್ಳ ಸರಕಾರವಿಲ್ಲ
ಹೆಣ್ಣು ಮತ್ತು ಗಂಡಿಗೆ ಮತದಾನದ ಸಮಾನ ಹಕ್ಕು ಕೊಟ್ಟಿರುವುದು ನಮ್ಮ ಸಂವಿಧಾನ ಮಾತ್ರ ಎಂದು ಖರ್ಗೆ ಹೇಳಿದ್ದಾರೆ. ಸಂವಿಧಾನ ಉಳಿದರೆ ದೇಶದಲ್ಲಿ ಏಕತೆ ಇರುತ್ತದೆ. ಪ್ರಜಾಪ್ರಭುತ್ವ ಉಳಿದರೆ ಶಾಂತಿ, ನೆಮ್ಮದಿಯಿಂದ ಬಾಳಲು ಸಾಧ್ಯ. ನಾವೆಲ್ಲರೂ ಸಂವಿಧಾನದ ಆಶಯಕ್ಕೆ ತಕ್ಕಂತೆ ಬದುಕಬೇಕು ಎಂದರು.
ಸಂವಿಧಾನ ಬದಲಿಸುವವರನ್ನು ಕಿತ್ತೂಗೆಯಿರಿ: ಸಿಎಂ
ಬೆಂಗಳೂರು: ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೂಗೆಯ ದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರವಿವಾರ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಈ ಹಿಂದೆ ಪ್ರಧಾನಿ ಮೋದಿ ಸಚಿವ ಸಂಪುಟ ದಲ್ಲಿ ಇದ್ದ ಅನಂತಕುಮಾರ ಹೆಗಡೆ ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಘೋಷಿಸಿದ್ದರು. ಅದನ್ನು ಪ್ರಧಾನಿ ಮೋದಿಯವರಾಗಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಯಾಗಲಿ, ಆರೆಸ್ಸೆಸ್ ಆಗಲಿ ಖಂಡಿಸಲಿಲ್ಲ. ವಿರೋಧಿಸಲೂ ಇಲ್ಲ ಎಂದು ವಾಗ್ಧಾಳಿ ನಡೆಸಿದರು.
ಬಿಜೆಪಿ ಮತ್ತು ಆರೆಸ್ಸೆಸ್ ಅಜೆಂಡಾವನ್ನು ಸಂಸದ ಅನಂತಕುಮಾರ ಹೆಗಡೆ ಬಾಯಿಯಲ್ಲಿ ಹೇಳಿಸಿದರು. ಈ ಬಗ್ಗೆ ಇಡೀ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು. ಇಲ್ಲದೆ ಹೋದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದರು.
ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣ ಗುರು, ವಿವೇಕಾನಂದ ಮುಂತಾ ದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನ ಎಂದು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ವಿಶ್ವದ ಸಂವಿಧಾನಗಳನ್ನೆಲ್ಲ ಅಧ್ಯಯನ ಮಾಡಿ ಎಲ್ಲದರ ಅತ್ಯುತ್ತಮ ಸಾರವನ್ನು ತೆಗೆದು ಡಾ| ಅಂಬೇಡ್ಕರ್ ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ ಎಂದರು.
ಐಎನ್‌ಡಿಐಎ ಒಕ್ಕೂಟದ ಮುಖಂಡರಾದ ಫಾರೂಕ್ ಅಬ್ದುಲ್ಲಾ, ಸೀತಾರಾಮ್ ಯೆಚೂರಿ ಸೇರಿ 18 ರಾಜ್ಯಗಳ 40 ಮಂದಿ ಮುಖಂಡರು, 12 ಪಕ್ಷಗಳ ನಾಯಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.