ಸಂವಿಧಾನ ಬದಲಾಯಿಸ್ತೀರಲ್ಲ!;ಸಭಿಕನ ಪ್ರಶ್ನೆಗೆ ಬಿಎಸ್‌ವೈ ಉತ್ತರವೇನು?
Team Udayavani, Apr 14, 2018, 12:40 PM IST
ನೆಲಮಂಗಲ: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು ಅಂಬೇಡ್ಕರ್ ಜನ್ಮದಿನಾಚರಣೆಯ ಹಿನ್ನಲೆಯಲ್ಲಿ ದಲಿತ ಸಮುದಾಯದವರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಸಭಿಕರ ಸಾಲಿನಲ್ಲಿದ್ದ ವ್ಯಕ್ತಿಯೊಬ್ಬರು ಸಂವಿಧಾನ ಬದಲಾವಣೆ ಬಗ್ಗೆ ಪ್ರಶ್ನಿಸಿ ಯಡಿಯೂರಪ್ಪ ಅವರನ್ನು ತಬ್ಬಿಬ್ಬು ಮಾಡುವಂತೆ ಮಾಡಿದ್ದಾರೆ.
ನೆಲಮಂಗಲದ ಮೈಲನಹಳ್ಳಿಯಲ್ಲಿ ದಲಿತರ ಮನೆಯಲ್ಲಿ ಉಪಹಾರ ಸೇವಿಸಿ ದ ಬಳಿಕ ಯಡಿಯೂರಪ್ಪ ಅವರು ಮಾತುಕತೆ ನಡೆಸಿದರು.
ಸಮಾರಂಭದಲ್ಲಿ ಯಡಿಯೂರಪ್ಪ ಅವರು ಭಾಷಣ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ವೇದಿಕೆ ಮುಂಭಾಗಕ್ಕೆ ಬಂದು ‘ನೀವು ಇಲ್ಲಿ ಹೀಗೆ ಹೇಳ್ತೀರಿ, ಆದ್ರೆ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂತ ಹೇಳಿದ್ದಾರಲ್ಲ ‘ ಎಂದು ಏರು ಧ್ವನಿಯಲ್ಲಿ ಕೇಳಿದರು. ಅಷ್ಟರಲ್ಲೆ ಸ್ಥಳದಲ್ಲಿದ್ದ ಪೊಲೀಸರು ವ್ಯಕ್ತಿಯನ್ನು ಹಿಡಿದಿದ್ದರು.
ನಿಲ್ಲಪ್ಪಾ.. ಏನು ನಿನ್ನ ಹೆಸರು ಎಂದು ಕೇಳಿದ ಯಡಿಯೂರಪ್ಪ ಅವರು ಪೊಲೀಸರ ಬಳಿ ಅವರನ್ನು ಬಿಡಿ ಎಂದರು.
‘ನೋಡಪ್ಪಾ.. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಲ್ಲಿ ನಮಗೆ ಸಂಪೂರ್ಣ ನಂಬಿಕೆ ಇದೆ. ನಾವು ಸಂವಿಧಾನವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ.ಬದಲಾವಣೆ ಮಾಡುವುದು ತಪ್ಪು’ ಎಂದರು.
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ನಾವು ಸಂವಿಧಾನ ಬದಲಾವಣೆ ಮಾಡುತ್ತೇವೆ. ಅದನ್ನು ಬದಲಾಯಿಸಲೆಂದೇ ನಾವು ಬಂದಿರುವುದು ಎಂದು ಹೇಳಿಕೆ ನೀಡಿದ್ದರು. ಈ ಕುರಿತು ದಲಿತ ಸಂಘಟನೆಗಳು ಸೇರಿದಂತೆ ಹಲವರು ವ್ಯಾಪಕ ಆಕ್ರೋಶ ಹೊರ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.