Constitution ಎಷ್ಟೇ ಕಷ್ಟವಾದರೂ ಉಳಿಸಿಕೊಳ್ಳುವ ಅಗತ್ಯವಿದೆ: ಸಿದ್ದರಾಮಯ್ಯ


Team Udayavani, Aug 12, 2023, 4:25 PM IST

1-sddsadsa

ಮೈಸೂರು : ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ 10ನೇ ವಕೀಲರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು ಎಂದರು

ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ
ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತ ವಾದ ನ್ಯಾಯದಾನ ನೀಡಲು ಸಾಧ್ಯ ಎಂದು ತಿಳಿಸಿದರು.

ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು
ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಭಿನ್ನವಾಗಿದೆ. ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಭಿನ್ನವಾಗಿದೆ. ಅದಕ್ಕೂ ಮುನ್ನ ರಾಜಮಹಾರಾಜರು ನ್ಯಾಯ ತೀರ್ಮಾನ ಮಾಡುತ್ತಿದ್ದರು. ಅವರ ತೀರ್ಮಾನ ಮನುವಾದದ ರೀತಿಯ ಮೇಲೆ ತೀರ್ಮಾನವಾಗುತ್ತಿದ್ದವು. ಜಾತಿ ವ್ಯವಸ್ಥೆ ಬಲವಾಗಿದ್ದುದರಿಂದ ಒಂದೇ ರೀತಿಯ ತಪ್ಪಿಗೆ ಬೇರೆ ಬೇರೆ ಶಿಕ್ಷೆಗಳಿದ್ದವು. ಶ್ರೀಮಂತರಿಗೆ, ಮೇಲ್ಜಾತಿಯವರಿಗೆ, ಕೆಳವರ್ಗದವರಿಗೆ, ಬಡವರಿಗೆ ಬೇರೆ ರೀತಿಯ ಶಿಕ್ಷೆ ಆಗುತ್ತಿತ್ತು. ಸಂವಿಧಾನ ಬಂದ ನಂತರ ಆರ್ಟಿಕಲ್ 14 ರಲ್ಲಿ Equality before Law, Equal Protection of Law ಎಂದು ಒಪ್ಪಿಕೊಂಡಿದ್ದೇವೆ. ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು ಎಂದರು.

ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ
ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ರಾಗಿದ್ದಾರೆ, ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ. ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರತವರು ಬುದ್ಧಿವಂತರು. ಸಂವಿಧಾನ ಎಲ್ಲರಿಗೂ ಅವಕಾಶ ದೊರೆತಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ ಎಂದು ಮುಖ್ಯ ಮಂತ್ರಿಗಳು ಸ್ಮರಿಸಿದರು.

ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ
ಎಲ್ಲಾ ಮೇಲ್ವರ್ಗದವರೇ ವಕೀಲರಾಗಿದ್ದರು . ಕಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ ಎಂದರು. ಶಾನುಭೋಗರೊಬ್ಬರು ಮಗನನ್ನು ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು. ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವನ್ನು ವಿರೋಧಿಸುವವರೂ ಇದ್ದಾರೆ ಸಮಾಜದಲ್ಲಿ. ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳ ತಲೆ ಕೆಡಿಸುವ ಕೆಲಸ ಮಾಡುತ್ತಿದ್ದಾರೆ.ಎಳೆ ವಯಸ್ಸಿನಲ್ಲಿ ಸಂವಿಧಾನದ ವಿರುದ್ಧ ದಾರಿತಪ್ಪಿಸುತ್ತಾರೆ. ಬಡವರಿಗೆ , ದಲಿತರಿಗೆ, ಅವಕಾಶ ವಂಚಿತರಿಗೆ ನ್ಯಾಯ ಸಿಗಬೇಕು. ಸಂವಿಧಾನದ ವಿರುದ್ಧ ಇರುವವರಿಂದ ನ್ಯಾಯ, ಬಡವರಿಗೆ ರಕ್ಷಣೆ ಸಿಗಲು ಸಾಧ್ಯವೇ? ಈ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಬೇಕಿದೆ. ಇಂಥ ಸಮಾವೇಶ ಗಳನ್ನು ಮಾಡುವಾಗ ಈ ವಿಚಾರಗಳ ಬಗ್ಗೆ ಚರ್ಚಿಸಬೇಕು ಎಂದರು.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು

Kharge (2)

Karnataka Politics; ದಲಿತ ಸಿಎಂ ಚರ್ಚೆಗೆ ಮತ್ತೆ ರೆಕ್ಕೆಪುಕ್ಕ

1-vara

Dowry; ವರದಕ್ಷಿಣೆ ಕಿರುಕುಳ: ಕುಂದಾಪುರ ಮೂಲದ ಮಹಿಳಾ ಟೆಕಿ ಆತ್ಮಹ *ತ್ಯೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.