ಅಲಾರವಾಡ ಎಸ್‌ಟಿಪಿ ಘಟಕ ನಿರ್ಮಾಣ ವಿವಾದ: ಲೋಕಾಯುಕ್ತ ತನಿಖೆಗೆ ವಹಿಸಿದ ಹೈಕೋರ್ಟ್
Team Udayavani, Sep 27, 2021, 9:30 AM IST
ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ (ಎಸ್‌ಟಿಪಿ) ಎರಡು ಕೋಟಿ ರೂ. ಖರ್ಚು ಮಾಡಿದ ನಂತರ ಕಾಮಗಾರಿ ಸ್ಥಗಿತಗೊಳಿಸಿ, ಮತ್ತೂಂದು ಪ್ರದೇಶದಲ್ಲಿ ಹೊಸದಾಗಿ ಘಟಕ ಸ್ಥಾಪಿಸಲು ಕಾಮಗಾರಿ ಕೈಗೊಂಡ ಪ್ರಕರಣದ ತನಿಖೆಯನ್ನು ಹೈಕೋರ್ಟ್ ಲೋಕಾಯುಕ್ತಕ್ಕೆ ವಹಿಸಿದೆ.
ಈ ವಿಚಾರವಾಗಿ ನಾರಾಯಣ ಬೈರು ಸಾವಂತ್ ಸೇರಿ ಐವರು ಸ್ಥಳೀಯರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪಾಲಿಕೆ ಆಯುಕ್ತರು ಸಲ್ಲಿಸಿದ ಪ್ರಮಾಣಪತ್ರದಲ್ಲಿ ಹಣ ವೆಚ್ಚ ಮಾಡಿಲ್ಲ ಎಂದು ಹೇಳಲಾಗಿದೆ. ಆದರೆ, ಬೇರೆ ದಾಖಲೆಗಳನ್ನು ಪರಿಶೀಲಿಸಿದರೆ ಹಣ ಖರ್ಚಾಗಿರುವುದು ಗೊತ್ತಾಗುತ್ತಿದೆ. ಇದೊಂದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿ, ಹಣ ಖರ್ಚಾಗಿದ್ದರೆ ಎಷ್ಟು ಹಣ ಖರ್ಚಾಗಿದೆ ಎಂಬ ಬಗ್ಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ನ.25ಕ್ಕೆ ಮುಂದೂಡಿತು.
ಅಲ್ಲದೇ ಯೋಜನೆಯನ್ನು ಅಲಾರವಾಡದಿಂದ ಹಲಗೆ ಗ್ರಾಮಕ್ಕೆ ಸ್ಥಳಾಂತರ ಮಾಡಿದ್ದು ಏಕೆ ಎಂಬ ಬಗ್ಗೆ ಪಾಲಿಕೆ ಆಯುಕ್ತರು ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು.
ಅಲರವಾಡದಲ್ಲಿ ಕಾಮಗಾರಿಗೆ 2.28 ಕೋಟಿ ರೂ.ಖರ್ಚು ಮಾಡಿದ ನಂತರ ಯೋಜನೆ ಸ್ಥಗಿತಗೊಳಿಸಿರುವುದನ್ನು ಆಕ್ಷೇಪಿಸಿದ್ದ ನ್ಯಾಯಪೀಠ, ಏಕೆ ಯೋಜನೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಯಿತು, ಆ 2.28 ಕೋಟಿ ರೂ. ಸರ್ಕಾರದ ಹಣ ವ್ಯರ್ಥವಾಗಲಿಲ್ಲವೇ. ಸಾರ್ವಜನಿಕರ ಹಣವನ್ನು ಹೀಗೆ ಪೋಲು ಮಾಡುವುದು ಎಷ್ಟು ಸೂಕ್ತ, ಘಟಕ ಸ್ಥಾಪನೆಗೆ ಯಾವುದು ಸೂಕ್ತ ಸ್ಥಳ ಎಂಬ ಬಗ್ಗೆ ಪರಿಶೀಲಿಸದೆ ಯೋಜನೆ ಕೈಗೊಳ್ಳಲಾಯಿತೇ, ಆ ಬಗ್ಗೆ ಪಾಲಿಕೆ ವಿವೇಚನೆ ಬಳಸಲಿಲ್ಲವೇ ಎಂದು ಪ್ರಶ್ನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.