Temple; ಮುಜರಾಯಿ ದೇಗುಲಗಳಲ್ಲಿ ಶಿಶು ಆರೈಕೆ ಕೊಠಡಿ ನಿರ್ಮಾಣ
6 ದೇಗುಲದಲ್ಲಿ ಪ್ರತ್ಯೇಕ ಶಿಶು ಆರೈಕೆ ಕೇಂದ್ರ ನಿರ್ಮಾಣ
Team Udayavani, Feb 6, 2024, 7:45 AM IST
ಬೆಂಗಳೂರು: ದೇಗುಲಗಳಿಗೆ ಭೇಟಿ ನೀಡುವ ತಾಯಂದಿರು ಶಿಶು ಆರೈಕೆಗೆ ಎದುರಿಸುವ ಸಮಸ್ಯೆಗಳಿಗೆ ಇತಿಶ್ರೀ ಇಡಲು ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಇಲಾಖೆ ಮುಂದಾಗಿದೆ.
ಮುಜರಾಯಿ ಇಲಾಖೆಯ ದೇಗುಲಕ್ಕೆ ಬರುವ ತಾಯಂದಿರಿಗೆ ಮಗುವಿಗೆ ಹಾಲುಣಿಸಲು ಅನುಕೂಲವಾಗುವಂತೆ ದೇಗುಲದ ಆವರಣದಲ್ಲಿ ಪ್ರತ್ಯೇಕ ಕೊಠಡಿ ನಿರ್ಮಿಸಲು ಮುಂದಾಗಿದೆ.
ಆರು ಕಡೆ ಪೂರ್ಣ
ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ 6 ದೇಗುಲದಲ್ಲಿ ಪ್ರತ್ಯೇಕ ಶಿಶು ಆರೈಕೆ ಕೇಂದ್ರ ನಿರ್ಮಿಸಲಾಗಿದೆ. ಬೆಂಗಳೂರಿನ ಶ್ರೀ ಬನಶಂಕರಿ ದೇಗುಲ, ವಸಂತಪುರದ ವಸಂತವಲ್ಲಭರಾಯ ಸ್ವಾಮಿ ದೇಗುಲ, ಚಾಮುಂಡಿಬೆಟ್ಟ, ಮಹಾಲಕ್ಷ್ಮೀ ಲೇಔಟ್‌ನ ಮಹಾಲಕ್ಷ್ಮೀ, ನಂಜನಗೂಡಿನ ದೇವಾಲಯದಲ್ಲಿ ಪ್ರತ್ಯೇಕ ಕೊಠಡಿ ನಿರ್ಮಾಣವಾಗಿದೆ.
500 ಕಡೆ ಕೇಂದ್ರಗಳು
ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ 35,000 ದೇಗುಲಗಳಿವೆ. ಅದರಲ್ಲಿ ಎ ಮತ್ತು ಬಿ ಶ್ರೇಣಿಯಲ್ಲಿ ಸುಮಾರು 500 ಹಾಗೂ ಸಿ 34,500 ದೇಗುಲಗಳಿವೆ. ಈಗ ಎ ಹಾಗೂ ಬಿ ಶ್ರೇಣಿಯ ದೇಗುಲದಲ್ಲಿ ಪ್ರತ್ಯೇಕ ಕೊಠಡಿ ನಿರ್ಮಾಣವಾಗಲಿದೆ. ಇವುಗಳಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ದೇಗುಲಗಳಲ್ಲಿ ಮೊದಲ ಆದ್ಯತೆಯಲ್ಲಿ ಕೊಠಡಿ ನಿರ್ಮಿಸಲು ಮುಂದಾಗಿದೆ.
ಎಲ್ಲೆಡೆ ಮಾಹಿತಿ ಇರಲಿದೆ
ರಾಜ್ಯದ ಎಲ್ಲ ಎ ಹಾಗೂ ಬಿ ವರ್ಗ ಸೇರಿದ ದೇಗುಲದಲ್ಲಿ ಶಿಶು ಆರೈಕೆ ಕೇಂದ್ರ ನಿರ್ಮಿಸಬೇಕು. ಪ್ರತಿಯೊಂದು ಕಡೆಯಲ್ಲಿಯೂ ಶಿಶು ಆರೈಕೆಗೆ ಪ್ರತ್ಯೇಕ ಕೊಠಡಿ ಇರುವ ಮಾಹಿತಿಯನ್ನು ದೇವಸ್ಥಾನದ ಪ್ರಾಂಗಣದಲ್ಲಿ ಉಲ್ಲೇಖೀಸಬೇಕು. ಜತೆಗೆ ಕೊಠಡಿಯ ಸ್ವತ್ಛತೆಯತ್ತ ದೇಗಲುಗಳ ಆಡಳಿತ ಮಂಡಳಿ ಜತೆಗೆ ಭಕ್ತರೂ ಗಮನ ಹರಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಸೆ.
ಶೀಘ್ರದಲ್ಲಿ ರಾಜ್ಯಾದ್ಯಂತ ಪ್ರಾರಂಭ
ರಾಜ್ಯಾದ್ಯಂತ ಮುಜರಾಯಿ ಇಲಾಖೆ ವ್ಯಾಪ್ತಿಯ ಭಕ್ತರು ಅಧಿಕವಾಗಿ ಆಗಮಿಸುವ ದೇಗಲುದಲ್ಲಿ ಶಿಶು ಆರೈಕೆಗೆ ಪ್ರತ್ಯೇಕ ಕೊಠಡಿ ನಿರ್ಮಿಸುವಂತೆ ಆದೇಶಿಸಲಾಗಿದೆ. ನಿರ್ಮಾಣ ಕೆಲಸವಾಗುತ್ತಿದೆ. ಶೀಘ್ರದಲ್ಲಿ ರಾಜ್ಯಾದ್ಯಂತ ಪ್ರಾರಂಭವಾಗಲಿದೆ.
-ಬಸವರಾಜೇಂದ್ರ ಎಚ್., ಆಯುಕ್ತರು, ಮುಜರಾಯಿ ಇಲಾಖೆ
-ತೃಪ್ತಿ ಕುಮ್ರಗೋಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.