ಉಪ ಚುನಾವಣೆಗೆ ಸಮಾಲೋಚನೆ
Team Udayavani, Aug 6, 2019, 3:04 AM IST
ಬೆಂಗಳೂರು: ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಲ್ಲಿ ಉಪ ಚುನಾವಣೆ ಸಿದ್ಧತೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೋಮವಾರ ವೀಕ್ಷಕರು ಹಾಗೂ ಉಸ್ತುವಾರಿಗಳ ಜತೆ ಸಮಾಲೋಚನೆ ನಡೆಸಿದರು.
ಕೆ.ಆರ್. ಪುರದ ವೀಕ್ಷಕ ಕೆ.ಜೆ.ಜಾರ್ಜ್, ಹೊಸಕೋಟೆ ವೀಕ್ಷಕ ಕೃಷ್ಣ ಬೈರೇಗೌಡ, ರಾಣಿಬೆನ್ನೂರು ವೀಕ್ಷಕ ಜಮೀರ್ ಅಹಮದ್ ಜತೆ ಆಯಾ ಕ್ಷೇತ್ರಗಳ ಸ್ಥಿತಿಗತಿ, ಪರ್ಯಾಯ ಅಭ್ಯರ್ಥಿ ಸಂಬಂಧ ಚರ್ಚಿಸಿದರು. ಅನರ್ಹತೆ ಕುರಿತು ನ್ಯಾಯಾಲಯದ ತೀರ್ಪು ಬಂದ ನಂತರ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭವಾಗಬಹುದು. ಆದರೆ, ಈಗಿನಿಂದಲೇ ಎಲ್ಲ ಕ್ಷೇತ್ರಗಳಲ್ಲಿ ಸಿದ್ಧತೆ ನಡೆಸಬೇಕು.
ಅಭ್ಯರ್ಥಿ ಗುರುತಿಸಿ ಪಕ್ಷ ಸಂಘಟನೆಯಲ್ಲೂ ತೊಡಗಲು ನಿರ್ಧರಿಸಲಾಯಿತು ಎಂದು ಹೇಳಲಾಗಿದೆ. ಮೂರೂ ಕ್ಷೇತ್ರಗಳಲ್ಲಿ ಈಗಾಗಲೇ ಪಕ್ಷದ ವತಿಯಿಂದ ಉಸ್ತುವಾರಿಗಳನ್ನು ನೇಮಿಸಲಾಗಿದೆ. ವೀಕ್ಷಕರನ್ನು ನಿಯೋಜಿಸಲಾಗಿದೆ. ಅವರು ಕೊಡುವ ವರದಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿಫಾರಸು ಪಡೆದು ಹೈಕಮಾಂಡ್‌ಗೆ ಕಳುಹಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.