ಪ್ರವಾಸೋದ್ಯಮಕ್ಕೆ ಬಂಡವಾಳ ಆಕರ್ಷಿಸಲು ಸಮಾವೇಶ
Team Udayavani, Mar 19, 2020, 3:05 AM IST
ವಿಧಾನಸಭೆ: ರಾಜ್ಯದಲ್ಲಿನ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗೆ ಇಲಾಖೆಯಲ್ಲಿ ಅನುದಾನ ಕಡಿಮೆ ಇದೆ. ಹೀಗಾಗಿ, ಖಾಸಗಿ-ಸಾರ್ವಜನಿಕ ಸಹಭಾಗಿತ್ವ, ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ, ದತ್ತು ನೀಡುವುದು ಸೇರಿದಂತೆ ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಇರುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆದಿದೆ.
ಪ್ರವಾಸೋದ್ಯಮ ವಲಯದಲ್ಲಿ ಬಂಡವಾಳ ಹೂಡಿಕೆಗಾಗಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದರು. ಅಲ್ಲದೆ, ಜಿಲ್ಲೆ ಮತ್ತು ತಾಲೂಕು ಕ್ರೀಡಾಂಗಣಗಳ ಅಭಿವೃದ್ಧಿಗೆ 381 ಕೋಟಿ ರೂ.ಅಗತ್ಯವಿದ್ದು, ಇಲಾಖೆಯಲ್ಲಿ 11 ಕೋಟಿ ರೂ.ಮಾತ್ರ ಅನುದಾನವಿದೆ. ಇರುವುದರಲ್ಲೇ ಆದ್ಯತೆ ಮೇಲೆ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.
ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡನೆ
ವಿಧಾನಸಭೆ: ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಧಿಯನ್ನು 30 ತಿಂಗಳಿಗೆ ಇಳಿಸುವುದು, ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು 15 ತಿಂಗಳಿಗೆ ಮುಂಚೆ ಮಾಡದಿರುವುದು ಸೇರಿದಂತೆ ಹಲವು ತಿದ್ದುಪಡಿಯೊಳಗೊಂಡ “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2020’ನ್ನು ಸದನದಲ್ಲಿ ಮಂಡಿಸಲಾಗಿದೆ.
ಸಚಿವ ಕೆ.ಎಸ್. ಈಶ್ವರಪ್ಪ ವಿಧೇಯಕ ಮಂಡಿಸಿದರು. ಕೈಗಾರಿಕೆಗಳು, ಕಾರ್ಖಾನೆಗಳು, ಐಟಿ ಪಾರ್ಕ್, ಹಾರ್ಡ್‌ವೇರ್ ಪಾರ್ಕ್, ವಾಣಿಜ್ಯ ಕಟ್ಟಡ, ವಸತಿ ಕಟ್ಟಡ ಹಾಗೂ ಖಾಲಿ ಜಮೀನುಗಳ ಆಸ್ತಿ ತೆರಿಗೆ ಪರಿಷ್ಕರಣೆ ಕೂಡ ವಿಧೇಯಕದಲ್ಲಿ ಸೇರಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.