ಕೊರೊನಾ ಭೀತಿ: ಪರೀಕ್ಷೆ ಮುಗಿಸಲು ಸೂಚನೆ
Team Udayavani, Mar 12, 2020, 3:05 AM IST
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ 1-9ನೇ ತರಗತಿ ಪರೀಕ್ಷೆಯನ್ನು ಮಾ.14 ರಿಂದ 23ರೊಳಗೆ ಮುಗಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ವಿಡಿಯೋ ಕಾನ್ಫರೆನ್ಸ್ ಮೂಲಕ ಆಯಾ ಜಿಲ್ಲಾ ಉಪನಿರ್ದೇಶಕರು ಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ.
ಜಿಲ್ಲಾ ಉಪನಿರ್ದೇಶಕರಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಕುರಿತು ಚರ್ಚಿಸಿ, ಪರೀಕ್ಷೆ ಮುಗಿದ ತಕ್ಷಣ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ರಜೆ ನೀಡುವಂತೆ ಸೂಚಿಸಿದ್ದಾರೆ. 1-3ನೇ ತರಗತಿ ಮಕ್ಕಳಿಗೆ ಮಾ.14ರಂದು, 4 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.17 ರಂದು, 7ನೇ ತರಗತಿಗೆ ಮಾ.21ರಂದು ಹಾಗೂ 8 ರಿಂದ 9ನೇ ತರಗತಿಗೆ ಮಾ.23ರಂದು ಪರೀಕ್ಷೆ ಮುಗಿಯುತ್ತದೆ. ಮಕ್ಕಳಿಗೆ ಮಾತ್ರ ರಜೆ ನೀಡಲಾಗಿದ್ದು, ಶಿಕ್ಷಕರಿಗೆ ರಜೆಯಿಲ್ಲ. ಆ ಸಮಯದಲ್ಲಿ ಶಿಕ್ಷಕರು ಮೌಲ್ಯಮಾಪನ, ಅಂಕವಹಿಗಳ ನಿರ್ವಹಣೆ ಇತ್ಯಾದಿ ಕಾರ್ಯ ಮುಗಿಸಬೇಕು ಎಂದು ನಿರ್ದೇಶಿಸಲಾಗಿದೆ.
ಸಂಜ್ಞಾ ಭಾಷೆ ಶಿಕ್ಷಕರ ನಿಯೋಜನೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶ್ರವಣದೋಷವುಳ್ಳ ಮಕ್ಕಳಿಗೆ ಪರೀಕ್ಷಾ ಕೊಠಡಿಯಲ್ಲಿ ಉಂಟಾಗುವ ಸಂದೇಹ, ಗೊಂದಲಗಳಿಗೆ ಸ್ಪಂದಿಸಲು ಸಂಜ್ಞಾ ಭಾಷೆಯನ್ನು ಅರಿತಿರುವ ಹಾಗೂ ವಿದ್ಯಾರ್ಥಿಯು ಬರೆಯುತ್ತಿರುವ ವಿಷಯ ತಜ್ಞರಲ್ಲದ ವಿಶೇಷ ಶಿಕ್ಷಕರನ್ನು ನಿಯೋಜಿಸಲು ಪ್ರಸ್ತುತ ಸಾಲಿನಿಂದ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಶ್ರವಣ ದೋಷದಿಂದ ಬಳಲುತ್ತಿರುವುದನ್ನು ಖಚಿತಪಡಿಸಿಕೊಂಡು ಸಂಜ್ಞ ಭಾಷಾ ಶಿಕ್ಷಕರನ್ನು ನಿಯೋಜಿಸುವಂತೆ ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಹೈಕೋರ್ಟ್ ಸಿಬ್ಬಂದಿಗೆ ಬಯೋಮೆಟ್ರಿಕ್ ನಿರ್ಬಂಧ
ಬೆಂಗಳೂರು: ಕೊರೊನಾ ವೈರಸ್ (ಕೋವಿಡ್-19) ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೈಕೋರ್ಟ್ ಸಿಬ್ಬಂದಿಗೆ ಬಯೋಮೆಟ್ರಿಕ್ ಬದಲು ಹಾಜರಿ ಪುಸ್ತಕದಲ್ಲಿ ಸಹಿ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿದೆ. ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸೂಚನೆ ಮೇರೆಗೆ ರಿಜಿಸ್ಟ್ರಾರ್ ಜನರಲ್ ಮಾ.11ರಂದು ಸುತ್ತೋಲೆ ಹೊರಡಿಸಿದ್ದು, ಮುಂದಿನ ಸೂಚನೆವರೆಗೆ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠದಲ್ಲಿ ಸಿಬ್ಬಂದಿ ಬಯೋಮೆಟ್ರಿಕ್ ಬದಲು ಹಾಜರಿ ಪುಸ್ತಕದಲ್ಲಿ ಸಹಿ ಮಾಡಲು ನಿರ್ದೇಶನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.