ಕೊರೊನಾ ವೈರಸ್; ಮತ್ತೆ 5 ಮಂದಿ ಆಸ್ಪತ್ರೆಗೆ
Team Udayavani, Jan 29, 2020, 3:03 AM IST
ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಇತ್ತೀಚೆಗೆ ಚೀನಾಕ್ಕೆ ಭೇಟಿ ನೀಡಿದ್ದ ಐವರು ಮಂಗಳವಾರ ರಾಜೀವ್ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಈವರೆಗೆ ಎಂಟು ಶಂಕಿತರನ್ನು ಪತ್ತೆ ಹಚ್ಚಲಾಗಿದ್ದು, ಎಲ್ಲರ ರಕ್ತ ಪರೀಕ್ಷೆ ಮಾಡಲಾಗುತ್ತಿದೆ.
ಸೋಮವಾರ ತಡರಾತ್ರಿ ಒಬ್ಬರು, ಮಂಗಳವಾರ ಬೆಳಗ್ಗೆ ಇಬ್ಬರು ಮತ್ತು ಸಂಜೆ ಇಬ್ಬರು ಶೀತ, ಜ್ವರ ಎಂದು ಆಸ್ಪತ್ರೆಗೆ ಬಂದಿದ್ದು, ಇವರೆಲ್ಲರ ರಕ್ತ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ (ಎನ್ಐವಿ) ಕಳುಹಿಸಲಾಗಿದೆ. ವರದಿ ಬರುವವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯಲ್ಲೆ ದಾಖಲು ಮಾಡಲಾಗಿದೆ. ಈ ಪೈಕಿ ಒಬ್ಬ ಆಸ್ಪತ್ರೆಯಲ್ಲಿರಲು ಆಗುತ್ತಿಲ್ಲ ಎಂದು ಮನೆಗೆ ತೆರಳಿದ್ದು, ಮನೆಯಲ್ಲೇ ನಿಗಾವಹಿಸಲಾಗಿದೆ.
ಇದಕ್ಕೂ ಮುನ್ನ ಚೀನಾಗೆ ಭೇಟಿ ನೀಡಿ ಅನಾರೋಗ್ಯ ಹಿನ್ನೆಲೆ ಶುಕ್ರವಾರ ಒಬ್ಬ, ಭಾನುವಾರ ಇಬ್ಬರು ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಂಡಿದ್ದರು. ಶುಕ್ರವಾರ ಆಗಮಿಸಿದ್ದ ವ್ಯಕ್ತಿಯ ರಕ್ತದ ವರದಿ ನೆಗೆಟಿವ್ ಬಂದ ಹಿನ್ನೆಲೆ ಆತ ಮನೆಗೆ ತೆರಳಿದ್ದಾನೆ. ಇನ್ನು ಭಾನುವಾರ ಆಗಮಿಸಿದ್ದ ಇಬ್ಬರು ಹಾಗೂ ಮಂಗಳವಾರ ಆಗಮಿಸಿರುವ 4-5 ಮಂದಿಯ ರಕ್ತ ಮಾದರಿ ವರದಿ ಬರಬೇಕಾಗಿದೆ ಎಂದು ರಾಜೀವ್ ಗಾಂಧಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.