ಭ್ರಷ್ಟಾಚಾರ ಆರೋಪ: ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Team Udayavani, Jun 22, 2023, 7:25 AM IST
ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿನ ಟೆಂಡರ್ ಸ್ಥಗಿತಗೊಳಿಸಿರುವುದರಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಬಿಜೆಪಿ ನಾಯಕರಿಗೆ ಜೋರಾಗಿ ಟೀಕೆ ಮಾಡಲು ಹೇಳಿ. ಸರ್ಕಾರದ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ರೇಟ್ ಫಿಕ್ಸ್ ಆಗಿದ್ದರೆ ಲೋಕಾಯುಕ್ತಕ್ಕೆ ತಡ ಮಾಡದೇ ದೂರು ಕೊಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರಿಗೆ ಜೋರಾಗಿ ಟೀಕೆ ಮಾಡಲು ಹೇಳಿ. ಎಲ್ಲವನ್ನೂ ಬಿಚ್ಚಿಡುತ್ತೇನೆ. ನಾನು ಅವರ ಸಲಹೆ ಕೇಳುತ್ತಿದ್ದೇನೆ. ರಾಜರಾಜೇಶ್ವರಿನಗರದಲ್ಲಿ ಯಾವುದೇ ಕೆಲಸ ಮಾಡದೇ 123 ಕೋಟಿ ಬಿಲ್ ಪಡೆದಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬಿಡಿಎಯಲ್ಲೂ ಎಸ್ಐಟಿ ನಿರ್ಮಾಣ ಮಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಪಾಲಿಕೆಯಲ್ಲೂ ಆಗಲಿದೆ. ಈ ಬಗ್ಗೆ ಪ್ರತ್ಯೇಕವಾಗಿ ಚರ್ಚೆ ಮಾಡೋಣ ಎಂದರು.
ನಾನು ಎಲ್ಲಾ ಯೋಜನೆ ಡಬಲ್ ಚೆಕ್ ಮಾಡಿಸುತ್ತೇನೆ. ಕಾಮಗಾರಿ ಅಂದಾಜು ಪರಿಶೀಲನೆ ಮಾಡಿಸುತ್ತೇನೆ. ಎಲ್ಲವೂ ಸರಿಯಾಗಿದ್ದರೆ ಮಾತ್ರ ಪುನಾರಂಭವಾಗಲಿದೆ. ಈ ವಿಚಾರವಾಗಿ ನಾನು ಚುನಾವಣೆಗೂ ಆರು ತಿಂಗಳು ಮುಂಚೆ ಎಚ್ಚರಿಕೆ ನೀಡಿದೆ. ಗುತ್ತಿಗೆದಾರರಿಗೂ ಹೇಳಿದ್ದೆ. ಯಾರು ಎಷ್ಟಾದರೂ ಕೂಗಿಕೊಳ್ಳಲಿ ನಾವು ನಮ್ಮ ನಿರ್ಧಾರಕ್ಕೆ ಬದ್ಧವಾಗಿದ್ದೇವೆ ಎಂದು ತಿಳಿಸಿದರು.
ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ತಡ ಮಾಡದೇ ಲೋಕಾಯುಕ್ತಕ್ಕೆ ದೂರು ನೀಡಲಿ. ನಾವು ತನಿಖೆ ಮಾಡಿಸುತ್ತೇವೆ. ಕೆಂಪಣ್ಣನವರ ವಿಚಾರದ ಬಗ್ಗೆಯೂ ಮಾತಾಡೋಣ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.