ಪರಿಷತ್ ಚುನಾವಣೆ: ಬಿಜೆಪಿ ಪಟ್ಟಿ ಬಿಡುಗಡೆ
Team Udayavani, Nov 20, 2021, 6:20 AM IST
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನಪರಿಷತ್‌ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ 20 ಅಭ್ಯ ರ್ಥಿಗಳ ಪಟ್ಟಿ ಪ್ರಕಟಗೊಂಡಿದ್ದು, ಹಾಲಿ ಆರು ಸದಸ್ಯರ ಪೈಕಿ ಐವರಿಗೆ ಟಿಕೆಟ್ ಲಭಿಸಿದೆ.
ಕೊಡಗು ಕ್ಷೇತ್ರದ ಹಾಲಿ ಸದಸ್ಯ ಸುನಿಲ್ ಸುಬ್ರಮಣಿ ಬದಲು ಸುಜಾ ಕುಶಾಲಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗದಿಂದ ಮಾಜಿ ಸಭಾಪತಿ ಡಿ.ಎಚ್. ಶಂಕರ ಮೂರ್ತಿ ಅವರ ಪುತ್ರ ಡಿ.ಎಸ್. ಅರುಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಅವರಿಗೂ ಟಿಕೆಟ್ ನೀಡಲಾಗಿದೆ.
ಆದರೆ ಬೆಳಗಾವಿ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿಗೆ ಟಿಕೆಟ್ ಸಿಕ್ಕಿಲ್ಲ. ಬೆಂಗ ಳೂರು ನಗರ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ನಂದೀಶ್ ರೆಡ್ಡಿಗೂ ಟಿಕೆಟ್ ಸಿಕ್ಕಿಲ್ಲ.
ಉಳಿದಂತೆ, ದಕ್ಷಿಣ ಕನ್ನಡ- ಕೋಟ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರು- ಎಂ.ಕೆ.ಪ್ರಾಣೇಶ್, ಶಿವಮೊಗ್ಗ- ಡಿ.ಎಸ್. ಅರುಣ್, ಧಾರವಾಡ- ಪ್ರದೀಪ್ ಶೆಟ್ಟರ್, ಬೆಳಗಾವಿ- ಮಹಾಂತೇಶ್ ಕವಟಗಿ ಮಠ, ಕಲಬುರಗಿ- ಬಿ.ಜಿ. ಪಾಟೀಲ್, ಚಿತ್ರದುರ್ಗ- ಕೆ.ಎಸ್. ನವೀನ್, ಮೈಸೂರು- ರಘು ಕೌಟಿಲ್ಯ, ಹಾಸನ- ವಿಶ್ವನಾಥ್, ಉತ್ತರ ಕನ್ನಡ- ಗಣಪತಿ ಉಳ್ವೆಕರ್, ಬೀದರ್- ಪ್ರಕಾಶ್ ಖಂಡ್ರೆ, ಬೆಂಗಳೂರು- ಎಚ್.ಎಸ್. ಗೋಪಿನಾಥ್ ರೆಡ್ಡಿ, ಮಂಡ್ಯ- ಮಂಜು ಕೆ.ಆರ್. ಪೇಟೆ, ಕೋಲಾರ- ಡಾ| ಕೆ.ಎನ್. ವೇಣುಗೋಪಾಲ್, ರಾಯಚೂರು- ವಿಶ್ವನಾಥ್ ಎ. ಬನಹಟ್ಟಿ, ಬೆಂಗಳೂರು ಗ್ರಾಮಾಂತರ – ಬಿ.ಎಂ.ನಾರಾಯಣಸ್ವಾಮಿ, ಬಳ್ಳಾರಿ- ವೈ.ಎನ್.ಸತೀಶ್, ತುಮಕೂರು- ಎನ್.ಲೋಕೇಶ್, ವಿಜಯಪುರ- ಪಿ.ಎಚ್.ಪೂಜಾರ.
ಇದನ್ನೂ ಓದಿ:ಸಮಾನ ನಾಗರಿಕ ಸಂಹಿತೆ ಜಾರಿ ಮಾಡಿ: ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬೆಳಗಾವಿ, ವಿಜಯಪುರ, ಮೈಸೂರು, ಧಾರವಾಡ, ದಕ್ಷಿಣ ಕನ್ನಡದ ದ್ವಿಸದಸ್ಯ ಕ್ಷೇತ್ರಗಳಲ್ಲಿ ಒಂದೇ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ ಪಟ್ಟಿ ಇಂದು ಬಿಡುಗಡೆ?
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶನಿವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮ ಗೊಳಿಸಲು ದಿಲ್ಲಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಉಸ್ತು ವಾರಿ ರಣದೀಪ್ ಸಿಂಗ್ ಸುಜೇì ವಾಲಾ ಸೇರಿ ವರಿಷ್ಠರ ಜತೆ ಸಮಾ ಲೋಚನೆ ಯಲ್ಲಿದ್ದು, ಅಭ್ಯರ್ಥಿಗಳ ಪಟ್ಟಿ ಶನಿವಾರ ಬಿಡುಗಡೆ ಯಾಗ ಲಿದೆ ಎಂದು ತಿಳಿಸಿದ್ದಾರೆ.
ಇದರ ನಡುವೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಸೋನಿಯಾ ಗಾಂಧಿ ಯವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಅಭ್ಯರ್ಥಿಗಳ ಆಯ್ಕೆ ವಿಚಾರವೂ ಪ್ರಸ್ತಾವವಾಗಿದೆ ಎನ್ನಲಾಗಿದೆ. ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸೋಮವಾರ ಬಿಡುಗಡೆ ಮಾಡುವುದಾಗಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.