ಬಿಜೆಪಿ ಕೋರ್ ಕಮಿಟಿ ಸಭೆಗೆ ಕ್ಷಣಗಣನೆ
ಫಲಿತಾಂಶದ ಪರಾಮರ್ಶೆಗೆ ವೇದಿಕೆಯಾಗಲಿರುವ ಸಭೆ
Team Udayavani, Nov 8, 2021, 6:54 AM IST
ಬೆಂಗಳೂರು: ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬೆನ್ನಲ್ಲೇ ಬಿಜೆಪಿ ಕೋರ್ ಕಮಿಟಿ ಸಭೆಗೆ ಕ್ಷಣಗಣನೆ ಶುರುವಾಗಿದ್ದು, ಮಂಗಳವಾರ (ನ. 9) ನಡೆಯುವ ಸಭೆ ವೇದಿಕೆ ಆಗಲಿದೆ.
ಉಪ ಚುನಾವಣೆ ಫಲಿತಾಂಶದ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆಯಲಿದೆ. ಅದರಲ್ಲೂ ಸಾಕಷ್ಟು ಶ್ರಮ ಹಾಕಿದ್ದ ಹಾನಗಲ್‌ನಲ್ಲಿ ಪಕ್ಷದ ಸೋಲಿನ ಬಗ್ಗೆ ಗಂಭೀರ ಚಿಂತನ ಮಂಥನ ನಡೆಯುವ ನಿರೀಕ್ಷೆಯಿದೆ.
ವಿಧಾನ ಪರಿಷತ್ ಟಿಕೆಟ್ ಚರ್ಚೆ
ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾ ಗುವ 25 ಸ್ಥಾನಗಳಿಗೆ ಜನವರಿಯಲ್ಲಿ ಚುನಾವಣೆ ನಡೆಯಲಿದ್ದು, ಇದರ ಅಭ್ಯರ್ಥಿಗಳ ಆಯ್ಕೆ, ಜಿಲ್ಲಾ ಮತ್ತು ತಾ. ಪಂ. ಚುನಾವಣೆಗಾಗಿ ಪಕ್ಷದ ಕಾರ್ಯತಂತ್ರ, ಸಂಘಟನೆಗಳ ರೂಪುರೇಷೆ ಹಾಗೂ ಜನ ಸ್ವರಾಜ್ ಯಾತ್ರೆಯನ್ನು ಪರಿಣಾಮಕಾರಿಯಾಗಿಸುವ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಗಳಿವೆ.
ಈ ಮಧ್ಯೆ ನ. 19ರಿಂದ ಆರಂಭ ಗೊಳ್ಳಲಿರುವ ಬಿಜೆಪಿಯ ಜನ ಸ್ವರಾಜ್ ಯಾತ್ರೆಯ ಪಟ್ಟಿಯಿಂದ ಕೊನೆಯ ಕ್ಷಣದಲ್ಲಿ ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದ ಗೌಡರಿಗೆ ಕೊಕ್ ಕೊಡಲಾಗಿದೆ.
ಇದನ್ನೂ ಓದಿ:ಮುಸ್ಲಿಮೇತರರಿಗೆ ಕೌಟುಂಬಿಕ ಕಾನೂನು ಸವಲತ್ತು : ಅಬುಧಾಬಿ ಸರ್ಕಾರದಿಂದ ಮಹತ್ವದ ನಿರ್ಧಾರ
ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲು ಮತ್ತು ಸದಾನಂದ ಗೌಡ ಸೇರಿದಂತೆ ನಾಲ್ವರು ನಾಯಕರ ನೇತೃತ್ವದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಲಾಗಿತ್ತು. ಆದರೆ, ಈಗ ಸದಾನಂದ ಗೌಡರ ಬದಲಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸೇರಿಸಲಾಗಿದೆ. ಇದರ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ನಿಗಮ-ಮಂಡಳಿ: ಅಧ್ಯಕ್ಷ-ಉಪಾಧ್ಯಕ್ಷರ ಚರ್ಚೆ
ನಿಗಮ-ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮತ್ತಷ್ಟು ಕಗ್ಗಂಟಾಗಿದ್ದು, ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ದಿಟ್ಟ ನಿರ್ಧಾರ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ ಆಗಲಿದೆ. ವಿರೋಧದ ನಡುವೆಯೂ ಬದಲಾವಣೆ ಮಾಡಿದಲ್ಲಿ, ಪಕ್ಷದ ಮೇಲಾಗುವ ಪರಿಣಾಮಗಳ ಬಗ್ಗೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು