ಹಾಲಿ ಕಾಂಗ್ರೆಸ್ ಸರಕಾರದ ಕೊನೆಯ ಬಜೆಟ್‌ಗೆ ಕ್ಷಣಗಣನೆ
Team Udayavani, Feb 14, 2018, 8:56 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ, ಹಾಲಿ ಕಾಂಗ್ರೆಸ್ ಸರಕಾರದ ಕೊನೆಯ ಬಜೆಟ್ ಮಂಡನೆಗೆ ಅಂತಿಮ ಕಸರತ್ತು ಆರಂಭವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಮಂಡಿಸುವ ಬಜೆಟ್ ಇದಾಗಿರುವುದರಿಂದ ಜನಪ್ರಿಯ ಯೋಜನೆಗಳಿಗೆ ಆದ್ಯತೆ ನೀಡಲೇ ಬೇಕಾಗಿದ್ದು, ಇವುಗಳಿಗೆ ಅನುದಾನ ಹೊಂದಾಣಿಕೆ ಮುಖ್ಯಮಂತ್ರಿಗಳ ಪಾಲಿಗೆ ದೊಡ್ಡ ಸವಾಲಾಗಿದೆ.
ಫೆ. 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು, ಈ ಬಾರಿ ಬಜೆಟ್ ಗಾತ್ರ 2.10ಲ.ಕೋ.ರೂ. ಮೀರುವ ಸಾಧ್ಯತೆ ಇದೆ. ಚುನಾವಣೆ ಕಾರಣಕ್ಕಾಗಿ ಜನಪ್ರಿಯ ಕಾರ್ಯಕ್ರಮಗಳು ಘೋಷಣೆಯಾಗುವುದು ಖಚಿತವಾಗಿದ್ದು, ಇದರೊಂದಿಗೆ ರಾಜ್ಯ ಸರಕಾರದ ಸಾರ್ವತ್ರಿಕ ವಿಮಾ ಯೋಜನೆಗೂ ಅನುದಾನ ಒದಗಿಸಬೇಕಾಗುತ್ತದೆ. ಆದರೆ ಸರಕು ಮತ್ತು ಸೇವಾ ತೆರಿಗೆ ಜಾರಿಯಲ್ಲಿರುವುದರಿಂದ ಅದಕ್ಕೆ ತಕ್ಕಂತೆ ರಾಜ್ಯದ ಆದಾಯ ಹೆಚ್ಚಿಸಿಕೊಳ್ಳಲು ಸರಕಾರ ಅಬಕಾರಿ, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನೇ ಹೆಚ್ಚಾಗಿ ನೆಚ್ಚಿಕೊಳ್ಳಬೇಕು. ಆದರೂ ಜನಪ್ರಿಯ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕಾದರೆ ಸಾಲದ ಪ್ರಮಾಣ ಹೆಚ್ಚಿಸುವುದು ಅನಿವಾರ್ಯ ಎನ್ನಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಆದಾಯ ಸಂಗ್ರಹ ಕುರಿತಂತೆ ಸಾಕಷ್ಟು ಗೊಂದಲ ಕಾಣಿಸಿಕೊಂಡರೂ ಇದೀಗ ಸಮಸ್ಯೆ ಬಹುತೇಕ ಬಗೆಹರಿದಿರುವುದರಿಂದ ತೆರಿಗೆ ಸಂಗ್ರಹ ಪ್ರಮಾಣ ಏರಿಕೆಯಾಗಿದ್ದು, ವರ್ಷದ ಕೊನೆಯ ಮೂರು ತಿಂಗಳಲ್ಲಿ ಆದಾಯ ಸಂಗ್ರಹ ಮತ್ತಷ್ಟು ಸುಧಾರಣೆ ಕಾಣುವ ಸಾಧ್ಯತೆ ಇದೆ. ಕೇಂದ್ರ ಸರಕಾರ ಜಿಎಸ್‌ಟಿ ನಷ್ಟವನ್ನು ಪೂರ್ಣ ಪ್ರಮಾಣದಲ್ಲಿ (ವಾರ್ಷಿಕ ಶೇ. 15ರಷ್ಟು ಪ್ರಮಾಣದಲ್ಲಿ ತೆರಿಗೆ ಏರಿಕೆ ಅಂದಾಜಿನಂತೆ) ನೀಡಿದರೆ ವರ್ಷಾಂತ್ಯಕ್ಕೆ ತೆರಿಗೆ ಸಂಗ್ರಹ ಗುರಿ 89,957 ಕೋ.ರೂ. ಮೀರಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.