ರಾಷ್ಟ್ರ ಕವಿ ಜಿ.ಎಸ್.ಶಿವರುದ್ರಪ್ಪಪತ್ನಿ ರುದ್ರಾಣಿ ವಿಧಿವಶ
Team Udayavani, Jul 21, 2017, 11:17 AM IST
ಬೆಂಗಳೂರು: ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಪತ್ನಿ ರುದ್ರಾಣಿ ಶಿವರುದ್ರಪ್ಪ (86) ನಿಧನರಾಗಿದ್ದು, ಗುರುವಾರ ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಗುರುವಾರ ಮುಂಜಾನೆ 2.45ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಅವರೊಂದಿಗಿದ್ದ ಸಹಾಯಕರು ಬನಶಂಕರಿ 2ನೇ ಹಂತದ ಬಡಾವಣೆ ಸಮೀಪದಲ್ಲೇ ವಾಸವಿರುವ ಮಗಳು ಜಯಂತಿ ಅವರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಆ್ಯಂಬುಲೆನ್ಸ್‌ಗೆ ಕರೆ ಮಾಡಿ ವೈದ್ಯರನ್ನು ಕರೆದುಕೊಂಡು ಬರುವಷ್ಟರಲ್ಲಿ ರುದ್ರಾಣಿ ಮೃತಪಟ್ಟಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಪತಿ ಶಿವರುದ್ರಪ್ಪ ಕಳೆದ 4 ವರ್ಷಗಳ ಹಿಂದೆ ನಿಧನರಾಗಿದ್ದರು. ಪತಿಯ ನಿಧನ ನಂತರ ರುದ್ರಾಣಿ ಅವರು ತಾವು ನಡೆಸುತ್ತಿದ್ದ ಸಂಧ್ಯಾದೀಪ ವೃದ್ಧಾಶ್ರಮದ ಕಾರ್ಯಚಟುವಟಿಕೆ ಸೇರಿ ಸಂಗೀತ, ಸಾಹಿತ್ಯ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದರು. ಕೆಲವು ದಿನಗಳಿಂದ ವಯೋಸಹಜ ಬಳಲಿಕೆ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.
ಅಂತ್ಯಕ್ರಿಯೆ: ಲಂಡನ್‌ನಲ್ಲಿ ವೈದ್ಯರಾಗಿರುವ ಜಿ.ಎಸ್.ಶಿವರುದ್ರಪ್ಪ ಅವರ ಕಿರಿಯ ಮಗ ಡಾ.ಜಿ.ಎಸ್.ಪ್ರಸಾದ್‌ಗೆ ತಾಯಿ ನಿಧನ ಸುದ್ದಿಯನ್ನು ತಲುಪಿಸಲಾಗಿದೆ. ಆದರೆ, ಅಲ್ಲಿಂದ ಭಾರತಕ್ಕೆ ಬರಲು ತಡವಾಗುವ ಹಿನ್ನೆಲೆಯಲ್ಲಿ ಜಿ.ಎಸ್.ಶಿವರುದ್ರಪ್ಪ ಹಿರಿಯ ಮಗ ಜಿ.ಎಸ್.ಜಯದೇವ ಅವರು ಬನಶಂಕರಿಯ 2ನೇ ಹಂತದಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಗುರುವಾರ ಸಂಜೆ 5.20ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಿದರು. ಅಂತ್ಯಕ್ರಿಯೆ ವೇಳೆ ಕಸಾಪ ಅಧ್ಯಕ್ಷ ಮನುಬಳಿಗಾರ್, ಕಸಾಪ ಮಾಜಿ ಅಧ್ಯಕ್ಷ ಅಗ್ರಹಾರ ಕೃಷ್ಣಮೂರ್ತಿ, ಹಿರಿಯ ಚಿಂತಕ ಕೆ.ಮರುಳಸಿದ್ದಪ್ಪ, ಶೂದ್ರ ಶ್ರೀನಿವಾಸ್, ವೈ. ಕೆ.ಮುದ್ದುಕೃಷ್ಣ, ಪ.ರೆಡ್ಡಿ, ಜಿ.ಎಸ್.ಶಿವರುದ್ರಪ್ಪ ಮಗಳು ಜಯಂತಿ, ಮೊಮ್ಮಗ ಕೆ.ಎಂ. ಚೈತನ್ಯ ಇತರರಿದ್ದರು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವೆ ರಾಣಿ ಸತೀಶ್, ಲೇಖಕಿ ಶಾಂತದೇವಿ ಕಣವಿ ಸೇರಿ ಅನೇಕ ಸಾಹಿತಿಗಳು, ಜಿಎಸ್‌ಎಸ್ ಅಭಿಮಾನಿಗಳು, ಶಿಷ್ಯಂದಿರು ನಿವಾಸಕ್ಕೆ ಭೇಟಿ ನೀಡಿ, ಮೃತರ ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.