ಕೋವಿಡ್ 19 ಸಹಾಯ: ಚಾಲಕರಿಗೆ ಮತ್ತೊಂದು ಅವಕಾಶ
Team Udayavani, Sep 25, 2020, 6:37 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.
ಸರಕಾರವು 4,008 ಕೋ. ರೂ. ಪೂರಕ ಅಂದಾಜುಗಳ 2020ನೇ ಸಾಲಿನ ಕರ್ನಾಟಕ ಧನ ವಿನಿಯೋಗ ಮಸೂದೆಗೆ ಸದನದ ಒಪ್ಪಿಗೆ ಪಡೆಯುವ ಸಂದರ್ಭದಲ್ಲಿ ಈ ಭರವಸೆ ನೀಡಿದೆ.
ಗುರುವಾರ ಭೋಜನ ಬಳಿಕದ ಕಲಾಪದಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರವಾಗಿ ಮಸೂದೆಯನ್ನು ಪರ್ಯಾಲೋಚಿಸಿದ ಸಚಿವ ಜೆ. ಸಿ. ಮಾಧುಸ್ವಾಮಿಯವರು, ಪೂರಕ ಅಂದಾಜು ಬಗ್ಗೆ ವಿವರ ನೀಡಿದರು.
ಆಗ ಸಿದ್ದರಾಮಯ್ಯ ಅವರು, ರಾಜ್ಯದ 7.50 ಲಕ್ಷ ಚಾಲಕರಿಗೆ ತಲಾ 5,000 ರೂ. ಪರಿಹಾರವನ್ನು ಸರಕಾರ ಘೋಷಿಸಿತ್ತು. ಆದರೆ ಈವರೆಗೆ ಎರಡೂವರೆ ಲಕ್ಷ ಚಾಲಕರಿಗಷ್ಟೇ ಪರಿಹಾರ ಸಿಕ್ಕಿದೆ. ಸಂಕಷ್ಟದಿಂದ ಸಾಕಷ್ಟು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ರೀತಿ ಸವಿತಾ ಸಮಾಜ, ಮಡಿವಾಳರಿಗೂ ಪೂರ್ಣ ಪ್ರಮಾಣದಲ್ಲಿ ಪರಿಹಾರ ದೊರಕಿಲ್ಲ ಎಂದರು.
ಬ್ಯಾಡ್ಜ್ ಸಮಸ್ಯೆ: ಭಟ್
ಬಿಜೆಪಿಯ ಶಾಸಕ ರಘುಪತಿ ಭಟ್ ಅವರು ಪ್ರತಿಕ್ರಿಯಿಸಿ, ಬಹಳಷ್ಟು ಚಾಲಕರಲ್ಲಿ ಬ್ಯಾಡ್ಜ್ ಇಲ್ಲ. ಆದರೆ ಬ್ಯಾಡ್ಜ್ ಕಡ್ಡಾಯ ಮಾಡಲಾಗಿದೆ. ಇನ್ನೊಂದೆಡೆ ಮಾಲಕರಾಗಿರುವ ಚಾಲಕರು ಅರ್ಜಿ ಸಲ್ಲಿಸಿದರೆ ಆನ್‌ಲೈನ್‌ನಲ್ಲಿ ಸ್ವೀಕರಿಸುತ್ತಿಲ್ಲ. ಈ ಸಮಸ್ಯೆ ನಿವಾರಿಸಿದರೆ ಚಾಲಕರು ನೆರವು ಪಡೆಯಬಹುದು ಎಂದು ಸಲಹೆ ನೀಡಿದರು.
ಬಳಿಕ ಜೆ.ಸಿ. ಮಾಧುಸ್ವಾಮಿ ಅವರು, ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಅರ್ಹ ಚಾಲಕರಿಗೆ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಮಸೂದೆಗೆ ಅನುಮೋದನೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.