ಕೋವಿಡ್ 19 ಕಾರಣ: ಮತ್ತೆ ಲಾಕ್‌ಡೌನ್ ಬೇಡವೇ ಬೇಡವೆಂದ ಜನತೆ
Team Udayavani, Sep 25, 2020, 6:21 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕರ್ನಾಟಕವೂ ಸೇರಿದಂತೆ ದೇಶದ 7 ರಾಜ್ಯಗಳಲ್ಲಿ ಕೋವಿಡ್ 19 ಸೋಂಕು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.
ಇದರ ಮಧ್ಯೆ ಸೋಂಕಿನ ನಿಯಂತ್ರಣಕ್ಕೆ ಮತ್ತೆ ಲಾಕ್‌ಡೌನ್ ಸೂಕ್ತ ಎಂಬ ಮಾತೂ ಕೇಳಿಬರುತ್ತಿದೆ. ಆದರೆ ಸರಕಾರ, ತಜ್ಞ ವೈದ್ಯರು, ಜನತೆ ಮತ್ತೆ ಲಾಕ್ ಡೌನ್ ಬೇಡ ಎಂದಿದ್ದಾರೆ.
ಗುರುವಾರ ಬೆಳಗ್ಗೆಯೇ ಈ ಕುರಿತ ಸುದ್ದಿಗಳನ್ನು ಅಲ್ಲಗಳೆದ ಡಿಸಿಎಂ ಡಾ| ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ್, ಡಾ| ಸುಧಾಕರ್ ಮತ್ತೆ ಲಾಕ್‌ಡೌನ್ ಹೇರುವುದಿಲ್ಲ ಎಂದರು. ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಅವರಂತೂ ಸರಕಾರ ಈಗಲಾದರೂ ಸೋಂಕು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾಜ್ಯಾದ್ಯಂತ ಲಾಕ್‌ಡೌನ್ ಬೇಡ ಎಂಬ ಅಭಿಪ್ರಾಯವೇ ಕೇಳಿಬರುತ್ತಿದೆ.
ಸಾಮಾಜಿಕ ಜಾಲತಾಣದಲ್ಲೂ ವಿರೋಧ
‘ಉದಯವಾಣಿ’ಯ ಫೇಸ್‌ಬುಕ್ ಪೇಜ್ ಮತ್ತು ಟ್ವಿಟರ್‌ನಲ್ಲಿ “ಮತ್ತೆ ಲಾಕ್‌ಡೌನ್ ಜಾರಿಗೆ ತರುವ ಅಗತ್ಯವಿದೆಯೇ?’ ಎಂಬ ಬಗ್ಗೆ ಜನರಿಂದ ಅಭಿಪ್ರಾಯ ಕೇಳಲಾಗಿತ್ತು. ಬಹುತೇಕರು ಬೇಡ ಎಂದಿದ್ದಾರಲ್ಲದೆ, ಚಿಕಿತ್ಸಾ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಈಗ ಉದ್ಯಮಗಳು ಹಗ್ಗದ ಮೇಲೆ ನಡೆಯುತ್ತಿವೆ. ಈಗ ಮತ್ತೆ ಲಾಕ್‌ಡೌನ್ ಮಾಡಿದರೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
– ಸಿ.ಆರ್. ಜನಾರ್ದನ್, ಅಧ್ಯಕ್ಷ, FKCCI
ಲಾಕ್‌ಡೌನ್ ಶಾಶ್ವತ ಪರಿಹಾವಲ್ಲ. ಮೊದಲು ಸರಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಿರ್ಗತಿಕರಿಗೆ, ಕೆಲಸ ಕಳೆದುಕೊಂಡವರಿಗೆ ಸಹಾಯ ಮಾಡಬೇಕು.
– ಕಿರಣ್ ಲೋಬೋ
ಲಾಕ್‌ಡೌನ್‌ನಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಜನ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ನಿಯಮ ಪಾಲಿಸುವಂತೆ ಕಠಿನ ನಿಯಮ ರೂಪಿಸಬೇಕು.
– ರಾಘವೇಂದ್ರ ಉಪಾಧ್ಯ
ತಜ್ಞರು ಹೇಳಿದ್ದೇನು?
ಮತ್ತೆ ಲಾಕ್‌ಡೌನ್ ಪರಿಹಾರವಲ್ಲ. ಬದಲಾಗಿ ಪರೀಕ್ಷೆ ಇನ್ನಷ್ಟು ಹೆಚ್ಚಿಸಬೇಕು. ಜನದಟ್ಟಣೆ ಹೆಚ್ಚಿರುವ ಪ್ರದೇಶಗಳನ್ನು ಸಂಜೆ ಬಳಿಕ ಬಂದ್ ಮಾಡಬಹುದು.
– ಡಾ| ಸಿ.ಎನ್. ಮಂಜುನಾಥ್, ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನ ಸಂಸ್ಥೆ ನಿರ್ದೇಶಕ
ಒಂದೆರಡು ವಾರಗಳ ಲಾಕ್‌ಡೌನ್‌ನಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಸೋಂಕು ಪರೀಕ್ಷೆ ಹೆಚ್ಚಿಸಿ ಸೋಂಕಿತರನ್ನು ಪತ್ತೆ ಹಚ್ಚಿ ಹರಡುವಿಕೆ ನಿಯಂತ್ರಿಸಬೇಕು.
– ಡಾ| ವಿ. ರವಿ, ನಿಮ್ಹಾನ್ಸ್‌ನ ವೈರಾಲಜಿ ವಿಭಾಗದ ಮುಖ್ಯಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.