ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ -19 ಸೋಂಕಿತೆ ಸಾವು
Team Udayavani, May 10, 2020, 8:39 AM IST
ಬೆಂಗಳೂರು: ಕೋವಿಡ್-19 ವೈರಸ್ ಸೋಂಕಿನ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮಹಿಳೆ ಸಾವಿಗೀಡಾಗಿದ್ದಾರೆ. ಈ ಮೂಲಕ ಸೋಂಕಿತರ ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ.
ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ನಗರದ ಹೆಣ್ಣೂರು ಬಳಿಯ ನಾರ್ಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಮೃತ ಮಹಿಳೆಗೆ ಖಾಸಗಿ ಪ್ರಯೋಗಾಲಯದಲ್ಲಿ ಕೋವಿಡ್-19 ಸೋಂಕು ಪಾಸಿಟಿವ್ ಬಂದಿತ್ತು.
ಬೆಂಗಳೂರು ನಗರ ಜಿಲ್ಲಾ ವೈದ್ಯಾಧಿಕಾರಿ ಡಾ. ಗೂಳೂರು ಶ್ರೀನಿವಾಸ ತಂಡವು ಎಚ್.ಬಿ.ಆರ್ ಬಡಾವಣೆಯ ಬೆಂಗಳೂರು ನಾರ್ಥ್ ಹಾಸ್ಪಿಟಲ್ ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ರವರ ಆದೇಶದಂತೆ ಬೀಗ ಹಾಕಲಾಗಿದೆ. ಅಲ್ಲಿದ್ದ 6 ಜನ ಒಳರೋಗಿಗಳನ್ನು ಬೇರೆಡೆಗೆ ಸ್ಥಳಾಂತರ, ಆಸ್ಪತ್ರೆ ಸಿಬ್ಬಂದಿ ಹಾಗೂ ಮೃತಳ ಸಂಬಂಧಿಗಳು ಸೇರಿ 25 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.