ಕೋವಿಡ್ 19 ಪರೀಕ್ಷೆ ನಡೆಸದ ಕೊಲೆಗಡುಕ ಸರ್ಕಾರ
Team Udayavani, Jul 7, 2020, 9:37 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸಾಮುದಾಯಿಕವಾಗಿ ಹರಡಿದ್ದರೂ ಸರಿಯಾಗಿ ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಬಿಜೆಪಿ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರ ಹೆಚ್ಚು ಪರೀಕ್ಷೆ ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ.
ಸೋಂಕಿತರ ಸಂಖ್ಯೆಗನುಗುಣವಾಗಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರ ಸಮರ್ಪಕವಾಗಿ ಹೆಚ್ಚು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕೇವಲ 59 ಕೋವಿಡ್ ಪರೀಕ್ಷಾ ಕೇಂದ್ರಗಳಿದ್ದು, ಅವುಗಳ ದಿನದ ಪರೀಕ್ಷಾ ಸಾಮರ್ಥ್ಯ 31,116 ಮಾತ್ರ. ರಾಜ್ಯದಲ್ಲಿ ಪ್ರತಿದಿನ ಕೇವಲ 13, 910 ಪರೀಕ್ಷೆ ನಡೆಸಲಾಗುತ್ತಿದೆ.
ಅಂದರೆ ಒಟ್ಟು ಸಾಮರ್ಥ್ಯದ ಶೇ.44.7ರಷ್ಟು ಮಾತ್ರ ಬಳಕೆಯಾಗುತ್ತಿದೆ. ಇದು ರಾಜ್ಯ ಸರ್ಕಾರದ ಅಯೋಗ್ಯತೆಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ. ಕೋವಿಡ್ 19 ನಿಯಂತ್ರಣಕ್ಕೆ ಸೋಂಕು ಪರೀಕ್ಷೆ ಒಂದೇ ಏಕೈಕ ಮಾರ್ಗ ಎಂದು ವಿಶ್ವದಾದ್ಯಂತ ವೈದ್ಯರು ಹೇಳುತ್ತಲೇ ಇದ್ದಾರೆ. ಕೋವಿಡ್ 19 ಓಡಿಸಲು ಜಾಗಟೆ ಬಾರಿಸಿದ ಅಯೋಗ್ಯ ಸರ್ಕಾರಕ್ಕೆ ಸೋಂಕು ಪರೀಕ್ಷೆಯನ್ನು ಸರಿಯಾಗಿ ನಡೆಸಬೇಕೆಂದು ಮಾತ್ರ ಗೊತ್ತಾಗಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.