ತರಗತಿಗೆ ರಜೆ? : ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಜ್ಞರ ಶಿಫಾರಸು
Team Udayavani, Mar 21, 2021, 6:50 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಎರಡು ವಾರಗಳ ಮಟ್ಟಿಗೆ ಶಾಲೆ – ಕಾಲೇಜು, ಜಿಮ್, ಈಜುಕೊಳ ಬಂದ್ ಸಹಿತ ಹಲವು ಕಠಿನ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆರೋಗ್ಯ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಹೊಸ ಕೋವಿಡ್ ಪ್ರಕರಣ ಗಳು ಏರಿಕೆ ಹಾದಿಯಲ್ಲಿಯೇ ಸಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಕೋವಿಡ್ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದೆ. ಈ ಸಂದರ್ಭ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಅವ ರಿಗೆ ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಜ್ಞರ ಶಿಫಾರಸುಗಳ ಬಗ್ಗೆ ಸಿಎಂ ಮತ್ತು ಸಂಬಂಧಪಟ್ಟ ಇಲಾಖೆಗಳ ಸಚಿವರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.
ಮುಖ್ಯವಾಗಿ ಶಾಲೆ – ಕಾಲೇಜುಗಳು, ಜಿಮ್, ಈಜುಕೊಳಗಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, 2 ವಾರ ಬಂದ್ ಮಾಡಬೇಕು. ಒಳಾಂಗಣ ಕಾರ್ಯಕ್ರಮಗಳಿಗೆ 100 ಮತ್ತು ಹೊರಾಂಗಣ ಕಾರ್ಯಕ್ರಮಗಳಿಗೆ 200 ಮಂದಿಗೆ ಮಾತ್ರ ಅವಕಾಶ ನೀಡಬೇಕು. ಸಿನೆಮಾ ಮಂದಿರಗಳಲ್ಲಿ ಶೇ. 50ರಷ್ಟು ಆಸನ ಮಿತಿ ವಿಧಿಸಬೇಕು ಎಂಬ ಶಿಫಾರಸು ಮಾಡಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ತಜ್ಞರೊಬ್ಬರು ತಿಳಿಸಿದರು.
ಮುಂದಿನ ವಾರ ಜಾರಿ? :
ಮತ್ತೆ ಸೋಂಕು ಹೆಚ್ಚಳವಾದ ಮಾರ್ಚ್ ಆರಂಭ ದಿಂದೀಚೆಗೆ ವಾರಕ್ಕೆ ಒಂದು ಅಥವಾ ಎರಡು ಬಾರಿ ತಜ್ಞರ ತಾಂತ್ರಿಕ ಸಲಹಾ ಸಮಿತಿ ಸಭೆಯು ನಡೆಯುತ್ತಿದೆ. ಸಭೆಯ ಬಳಿಕ ನೀಡುವ ಶಿಫಾರಸನ್ನು ಒಂದೆರಡು ದಿನಗಳಲ್ಲಿ ಸರಕಾರ ಜಾರಿಗೊಳಿಸುತ್ತದೆ. ಶುಕ್ರವಾರ ರಾತ್ರಿ ಸಭೆ ನಡೆದಿದ್ದು, ಶಿಫಾರಸು ಜಾರಿ ಸಾಧ್ಯತೆಗಳನ್ನು ಅವಲೋಕಿಸಿ, ಸುತ್ತೋಲೆ ಹೊರಡಿಸಲಾಗುತ್ತದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಸೋಂಕು ಪ್ರಕರಣಗಳು ದುಪ್ಪಟ್ಟಾಗಿವೆ. ಹೀಗಾಗಿ ಮುಂದಿನ ವಾರ ಈ ಕಠಿನ ಕ್ರಮಗಳು ಜಾರಿಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ.
ವಾರದಲ್ಲಿ ಹೊಸ ಪ್ರಕರಣ ದುಪ್ಪಟ್ಟು ! :
ಕಳೆದ ವಾರ ನಿತ್ಯ ಹೊಸ ಪ್ರಕರಣಗಳು 900 ಆಸುಪಾಸಿನಲ್ಲಿದ್ದವು. ಈ ವಾರ ದುಪ್ಪಟ್ಟಾಗಿವೆ. ಶನಿವಾರ 1,798 ಮಂದಿಗೆ ಸೋಂಕು ತಗಲಿದ್ದು, ಏಳು ಮಂದಿ ಸಾವಿಗೀಡಾಗಿದ್ದಾರೆ. ಮಾಸಾರಂಭದಲ್ಲಿ ಶೇ. 1ಕ್ಕಿಂತ ಕಡಿಮೆ ಇದ್ದ ಪಾಸಿಟಿವಿಟಿ ದರ ಶೇ. 2ಕ್ಕೆ ಏರಿದೆ. ಅಂದರೆ ಪರೀಕ್ಷೆ ಗೊಳಗಾಗುವ 100 ಮಂದಿಯಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗುತ್ತಿದೆ. ರಾಜ್ಯದಲ್ಲಿ 12,828 ಸಕ್ರಿಯ ಸೋಂಕುಪೀಡಿತರಿದ್ದಾರೆ.
ಮಹಾರಾಷ್ಟ್ರದಲ್ಲಿ ದಾಖಲೆ ಪ್ರಕರಣ :ಶನಿವಾರವೂ ಮಹಾರಾಷ್ಟ್ರದಲ್ಲಿ ದಾಖಲೆ ಪ್ರಮಾಣದಲ್ಲಿ, 27,126 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಎಂ ಉದ್ಧವ್ ಠಾಕ್ರೆ ಪುತ್ರ, ಸಚಿವ ಆದಿತ್ಯ ಠಾಕ್ರೆಗೂ ಸೋಂಕು ತಗಲಿದೆ. ಮಹಾರಾಷ್ಟ್ರದಲ್ಲಿ ಮಾಲ್‌ಗಳು, ಬಸ್ ಸ್ಟಾಂಡ್‌ಗಳು, ರೈಲು ನಿಲ್ದಾಣ, ಮಾರುಕಟ್ಟೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ದೇಶಾದ್ಯಂತ ಶನಿವಾರ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ.
ಮಹಾರಾಷ್ಟ್ರ , ಕೇರಳ ಬಿಟ್ಟರೆ ನಮ್ಮಲ್ಲೇ ಹೆಚ್ಚು ! :
ಸದ್ಯ ದೇಶದಲ್ಲಿ ನಿತ್ಯ ಹೊಸದಾಗಿ ಕಾಣಿಸಿ ಕೊಳ್ಳುತ್ತಿರುವ ಕೋವಿಡ್ ಪ್ರಕರಣಗಳ ಪೈಕಿ ಅತೀ ಹೆಚ್ಚು ಮಹಾರಾಷ್ಟ್ರ (25 ಸಾವಿರಕ್ಕಿಂತ ಹೆಚ್ಚು ), ಕೇರಳದಲ್ಲಿ (2,000ಕ್ಕಿಂತ ಹೆಚ್ಚು) ಕಾಣಿಸಿಕೊಳ್ಳುತ್ತಿವೆ. ಇವುಗಳನ್ನು ಬಿಟ್ಟರೆ ಮೂರನೇ ಅತೀ ಹೆಚ್ಚು ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.