ಕೋವಿಡ್ ನಿಂದ ಬಿತ್ತನೆ ಬೀಜ, ಯೂರಿಯಾ ಗೊಬ್ಬರ ಪೂರೈಕೆಗೆ ತೊಂದರೆಯಾಗದು: ಬಿ.ಸಿ.ಪಾಟೀಲ್
Team Udayavani, Jul 24, 2020, 3:39 PM IST
ಬೆಂಗಳೂರು: ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಲ ಜಿಲ್ಲೆಗಳಲ್ಲಿ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರೆಯುವುದರಿಂದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲು ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಕೋವಿಡ್ ಸೋಂಕಿನ ಕಾರಣದಿಂದ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆ ಬೀಜ ಹಾಗೂ ಯೂರಿಯಾ ಗೊಬ್ಬರ ಪೂರೈಕೆಗೆ ಕೊರತೆಯಾಗದಂತೆ ಸೂಕ್ತ ಕ್ರಮ ವಹಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.
2020-21 ನೇ ಸಾಲಿನ ಮುಂಗಾರು ಹಂಗಾಮಿನ 2020 ಏಪ್ರಿಲ್ 1 ರಿಂದ ಜುಲೈ ಅಂತ್ಯದವರೆಗೆ ಒಟ್ಟು 13.99 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು ಇದರಲ್ಲಿ ಯೂರಿಯಾ 4.98 ಲಕ್ಷ ಡಿಎಪಿ 3.06 ಲಕ್ಷ ಮೆಟ್ರಿಕ್ ಟನ್ ಎಂಒಪಿ 1.37 ಲಕ್ಷ ಮೆಟ್ರಿಕ್ ಟನ್ ಮತ್ತು ಕಾಂಪ್ಲೆಕ್ಸ್ 4.58 ಲಕ್ಷ ಮೆಟ್ರಿಕ್ ಟನ್ ಗೆ ಬೇಡಿಕೆಯಿದೆ. ಈ ಪೈಕಿ ಜುಲೈ 23 ರವರೆಗೆ ಒಟ್ಟು 13.50 ಲಕ್ಷ ಮೆಟ್ರಿಕ್ ಟನ್ ಅಂದರೆ 5.36 ಮೆಟ್ರಿಕ್ ಟನ್ ಯೂರಿಯಾ ಡಿ ಎ ಪಿ- 2.49 ಲಕ್ಷ ಮೆ.ಟನ್ , ಎಂಒಪಿ . 1.03 ಲಕ್ಷ ಮೆ.ಟನ್ ಮತ್ತು ಕಾಂಪ್ಲೆಕ್ಸ್ , 4.62 ಲಕ್ಷ ಮೆ.ಟನ್ ಸರಬರಾಜಾಗಿರುತ್ತದೆ .ಕಳೆದ ಬಾರಿಗೆ ಹೋಲಿಸಿದರೆ ಶೇ.5.4 ರಷ್ಟು 13.50 ಲಕ್ಷ ಮೆಟನ್ ವಿವಿಧ ರಸಗೊಬ್ಬರಗಳು ಸರಬರಾಜಾಗಿವೆ. ವಿಶೇಷವಾಗಿ 30.8%ರಷ್ಟು ಯೂರಿಯಾ ರಸಗೊಬ್ಬರ ಹೆಚ್ಚುವರಿ ಸರಬರಾಜಾಗಿದೆ ಎಂದರು.
ಮುಂಗಾರು ಚಟುವಟಿಕೆಗಳಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ಸಹ ಅಗತ್ಯಕ್ಕೆ ತಕ್ಕಂತೆ ಪೂರೈಸಲಾಗುತ್ತಿದೆ. 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 5.97 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ಬೇಡಿಕೆ ಇದ್ದು, ರಾಜ್ಯದ್ಯಂತ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಇದುವರೆಗೂ 3,29,862.8 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ 52110 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಇದೆ. ರಾಜ್ಯದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ಬಿತ್ತನೆ ಬೀಜ ಹಾಗೂ ಯೂರಿಯಾ ರಸಗೊಬ್ಬರಕ್ಕೆ ಯಾವುದೇ ಕೊರತೆಯಾಗಿಲ್ಲ. ರೈತರ ಬೇಡಿಕೆಗಳನ್ನು ಪೂರೈಸಲು ಇಲಾಖೆ ಬದ್ಧವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.