ಕಂಟೈನರ್ ನಲ್ಲಿ ಕೋವಿಡ್ ಐಸಿಯು! ಡಿಸಿಎಂ ಅಶ್ವಥ್ ನಾರಾಯಣ್ ಪರಿಶೀಲನೆ
Team Udayavani, Jul 18, 2020, 4:06 PM IST
ಬೆಂಗಳೂರು: ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಆಗದಂತೆ ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಬೆನ್ನಲ್ಲಿಯೇ, ಖಾಸಗಿ ಕಂಪನಿಯೊಂದು ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ ’ಮಾಡ್ಯೂಲರ್ ಐಸಿಯು’ಗಳನ್ನು ಅಭಿವೃದ್ಧಿಪಡಿಸಿದೆ. ಸಾಮಾನ್ಯವಾಗಿ ಹಡಗುಗಳಲ್ಲಿ ಸರಕು ಸಾಗಣೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನರುಗಳಲ್ಲಿ ಈ ಐಸಿಯುಗಳನ್ನು ಅಭಿವೃದ್ಧಿಪಡಿಸಿದ್ದು, ಬೆಂಗಳೂರಿನಲ್ಲಿ ಶನಿವಾರ, ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಇವುಗಳನ್ನು ಪರಿಶೀಲನೆ ಮಾಡಿದರು.
ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ರಿನ್ಯಾಕ್ ಎಂಬ ಕಂಪನಿ ಇವುಗಳನ್ನು ಅಭಿವೃದ್ಧಿಪಡಿಸಿದ್ದು, ಈ ಬಗ್ಗೆ ಕಂಪನಿಯ ತಜ್ಞರಿಂದ ಉಪ ಮುಖ್ಯಮಂತ್ರಿ ಮಾಹಿತಿ ಪಡೆದರಲ್ಲದೆ, ಕಂಟೈನರುಗಳಲ್ಲಿನ ಐಸಿಯುಗಳನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದರು.
ಸರಕು ಸಾಗಣೆ ಮಾಡುವ ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನವಾಗಿದೆ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂಥ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ. ನಮ್ಮ ಸಂಶೋಧಕರು, ತಜ್ಞರ ಸೃಜನಶೀಲತೆಗೆ ಇದೊಂದು ಉತ್ತಮ ಉದಾಹರಣೆ. ಪ್ರಸಕ್ತ ಕಾಲದ ಅಗತ್ಯಕ್ಕೆ ತಕ್ಕಂತೆ ಇವುಗಳನ್ನು ಅತ್ಯಾಧುನಿಕವಾಗಿ ರೂಪಿಸಲಾಗಿದೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಳಸಲಾಗಿರುವ ಎಲ್ಲ ಉಪಕರಣಗಳು ಉತ್ತಮವಾಗಿವೆ ಎಂದು ಡಿಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಯೋಗಿಕವಾಗಿ ಮೊದಲು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಗೆ ಹತ್ತು ಕಂಟೈನರುಗಳನ್ನು ಒದಗಿಸಲಾಗುವುದು. ಅಲ್ಲಿನ ವೈದ್ಯರೇ ಇವುಗಳಲ್ಲಿ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆ ನೀಡುವರು. ಪ್ರತಿ ಕಂಟೈನರಲ್ಕಿ 5 ಹಾಸಿಗೆಗಳು ಇರುತ್ತವೆ. ಕೋವಿಡ್ ನಂತರವೂ ಇವುಗಳನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಬಳಸಬಹುದು ಎಂದು ಡಿಸಿಎಂ ಹೇಳಿದರು.
ಇದರಲ್ಲಿ ಏನೇನಿರುತ್ತದೆ?
ಜಾಗತಿಕ ಗುಣಮಟ್ಟವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿದೆ. ಆಮ್ಲಜನಕ ವ್ಯವಸ್ಥೆ ಇರುತ್ತದೆ. ಹವಾನಿಯಂತ್ರಿತ ವ್ಯವಸ್ಥೆ ಮಾಡಲಾಗಿದೆ. ಕ್ಯಾಮೆರಾ ಕೂಡ ಇದ್ದು, ಆನ್ಲೈನ್ ಚಿಕಿತ್ಸೆ ನೀಡಲು ಬೇಕಾದ ಎಲ್ಲ ಪರಿಕರಗಳನ್ನು ಅಳವಡಿಸಲಾಗಿದೆ. ಪ್ರತಿ ಕಂಟೈನರ್’ಗೆ 5 ಬೆಡ್ ಇದ್ದು, ಅದಕ್ಕೆ ಇನ್ನೊಂದು ಕಂಟೈನರ್ ಸೇರಿದರೆ 10 ಬೆಡ್’ಗಳಾಗುತ್ತವೆ. ಆಗ ಅದನ್ನು ಪ್ರತ್ಯೇಕ ನರ್ಸಿಂಗ್ ಹಾಗೂ ಮಾನಿಟರಿಂಗ್ ಸ್ಟೇಷನ್ ಎಂದು ಪರಿಗಣಿಸಿ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ. ಅದು ಪ್ರತ್ಯೇಕವಾಗಿರುತ್ತದೆ. ಎಲ್ಲಿಗೆ ಬೇಕಾದರೂ ಈ ಐಸಿಯುಗಳನ್ನು ಸುಲಭವಾಗಿ ಸಾಗಿಸಿ ಇಡಬಹುದು. ಆಯಾ ಆಸ್ಪತ್ರೆಗಳ ವೈದ್ಯರೇ ಇವುಗಳಲ್ಲಿ ದಾಖಲಾಗಿರುವ ರೋಗಿಗಳಿಗೂ ಚಿಕಿತ್ಸೆ ನೀಡಬಹುದು ಎಂದು ರಿನ್ಯಾಕ್ ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.