Covid ಅಕ್ರಮ ವರದಿ: ಬಿಜೆಪಿಗೆ ಮತ್ತೊಂದು ಸಂಕಷ್ಟ?
1,722 ಪುಟಗಳ ಮಧ್ಯಾಂತರ ವರದಿ ಸಲ್ಲಿಕೆ, ಬಹಿರಂಗಗೊಂಡರೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ
Team Udayavani, Sep 1, 2024, 6:48 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಕಾಲಾ ವಧಿಯಲ್ಲಿ ಕೋವಿಡ್-19 ನಿಯಂತ್ರಣ ಸಾಮಗ್ರಿ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ನೇಮಕ ಮಾಡಿದ್ದ ಏಕ ಸದಸ್ಯ ಆಯೋಗ ತನ್ನ ಮಧ್ಯಾಂತರ ವರದಿಯನ್ನು ಶನಿವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ನ್ಯಾ| ಜಾನ್ ಮೈಕಲ್ ಕುನ್ಹಾ ಅವರು
ಮುಚ್ಚಿದ ಪೆಟ್ಟಿಗೆಯಲ್ಲಿ 1,722 ಪುಟಗಳ ವರದಿಯನ್ನು ಸಲ್ಲಿಸಿ ದ್ದಾರೆ. ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಯವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ರಾಜಕೀಯ ಕಾರ್ಯ ದರ್ಶಿಗಳಾದ ಗೋವಿಂದರಾಜ್, ನಸೀರ್ ಅಹ್ಮದ್ ಜತೆಗಿದ್ದರು. ವರದಿಯ ಸಾರ ಸೋರಿಕೆಯಾಗದಂತೆ ಸಿದ್ದರಾಮಯ್ಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ವರದಿ ಸಲ್ಲಿಕೆಯಾಗುತ್ತಿದ್ದಂತೆ ತಮ್ಮ ಕೊಠಡಿಯಲ್ಲಿ ಇರಿಸುವಂತೆ ಸೂಚನೆ ನೀಡಿದ್ದಾರೆ. ವರದಿ ಸಲ್ಲಿಕೆ ಯಾಗುವ ಸಂದರ್ಭದಲ್ಲಿ ಕೆಲವು ಸಚಿವರಿಗೂ ಒಳಗೆ ಪ್ರವೇಶ ಅವಕಾಶ ಕಲ್ಪಿಸಿರಲಿಲ್ಲ ಎಂದು ಗೊತ್ತಾಗಿದೆ.
ಈ ವರದಿ ಬಹಿರಂಗಗೊಂಡರೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂಬುದು ಕಾಂಗ್ರೆಸ್ ನಾಯಕರ ವಾದವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಂದಿನ ಎರಡು ದಿನಗಳ ಕಾಲ ವರದಿಯ ಬಗ್ಗೆ ಸುದೀರ್ಘ ಅಧ್ಯಯನ ನಡೆಸ ಲಿದ್ದಾರೆ. ಆ ಬಳಿಕ ಸೆ. 5ರಂದು ನಡೆ ಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡಿಸುವ ಸಾಧ್ಯತೆಗಳು ದಟ್ಟವಾಗಿದ್ದು, ವರದಿಯ ಆಧಾರದ ಮೇಲೆ ಆದಷ್ಟು ಬೇಗ ಶಿಸ್ತುಕ್ರಮಕ್ಕೆ ಮುಂದಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಆಯೋಗ ಸ್ಥಾಪನೆ ಯಾವಾಗ?
2023ರ ಆ. 26ರಂದು ರಾಜ್ಯ ಸರಕಾರವು ನ್ಯಾ| ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದ ಅವ್ಯವಹಾರಗಳ ತನಿಖೆ ಏಕ ಸದಸ್ಯ ತನಿಖಾ ಆಯೋಗ ವನ್ನು ನೇಮಿಸಿತ್ತು. ಮೂರು ತಿಂಗಳೊಳಗಾಗಿ ವರದಿ ನೀಡು ವಂತೆ ಆಯೋಗಕ್ಕೆ ಗಡುವು ನೀಡಲಾಗಿತ್ತು. ಕುಮಾರಕೃಪಾ ಅತಿಥಿ ಗೃಹದಲ್ಲಿ ಆಯೋಗಕ್ಕೆ ಕಚೇರಿ ಹಾಗೂ ಸಿಬಂದಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.