ಐವರು ಸಚಿವರಿಗೆ ನಿರ್ವಹಣೆ ಅಧಿಕಾರ
Team Udayavani, May 5, 2021, 6:40 AM IST
ಬೆಂಗಳೂರು: ಉಪ ಮುಖ್ಯಮಂತ್ರಿ ಸಹಿತ ಐವರು ಸಚಿವರಿಗೆ ಕೋವಿಡ್ನಿಭಾಯಿಸುವ ಹೊಣೆಗಾರಿಕೆ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ರೆಮಿಡಿಸಿವಿರ್ ಮತ್ತಿತರ ಔಷಧ ಪೂರೈಕೆ ನಿಗಾ ವಹಿಸಲು ಡಾ| ಸಿ.ಎನ್. ಅಶ್ವತ್ಥನಾರಾಯಣ, ಆಮ್ಲಜನಕ ಪೂರೈಕೆ ಕುರಿತು ಕೇಂದ್ರ ಸರಕಾರದ ಜತೆ ಸಮನ್ವಯ ಸಾಧಿಸಲು ಜಗದೀಶ್ ಶೆಟ್ಟರ್, ಹಾಸಿಗೆ ವ್ಯವಸ್ಥೆ ನೋಡಿಕೊಳ್ಳಲು ಬಸವರಾಜ ಬೊಮ್ಮಾಯಿ ಮತ್ತು ಆರ್. ಅಶೋಕ್ ಅವರನ್ನು ನೇಮಿಸಲಾಗಿದ್ದರೆ, ಕೋವಿಡ್ ವಾರ್ ರೂಂ ಮತ್ತು ಸಹಾಯವಾಣಿ ಉಸ್ತುವಾರಿಯನ್ನು ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.ಯ ಅಂತಿಮ ವರ್ಷದ ವೈದ್ಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್ ಸೇವೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.
ಜಿಲ್ಲಾ ಉಸ್ತವಾರಿ ಸಚಿವರು ತತ್‌ಕ್ಷಣ ತಮ್ಮ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಸ್ಥಳೀಯವಾಗಿ ಸಮಸ್ಯೆ ನಿವಾರಿಸುವಂತೆ ಸಿಎಂ ಕಟ್ಟಪ್ಪಣೆ ಮಾಡಿದ್ದಾರೆ. ಜಿಲ್ಲಾ ಮಟ್ಟದ ವೈಫಲ್ಯಗಳಿಗೆ ನೀವೇ ಹೊಣೆಗಾರರು ಎಂದು ಎಚ್ಚರಿಸಿದ್ದಾರೆ.
ಹೊಣೆಗಾರಿಕೆ ಹಂಚಿಕೆ :
ಕೋವಿಡ್ ನಿರ್ವಹಣೆಯ ಹೊಣೆಯನ್ನು ಐವರು ಸಚಿವರಿಗೆ ವಹಿಸಲಾಗಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಸ್ವತಃ ಸಿಎಂ ವಿವರ ನೀಡಿದರು.
ಯಾರಿಗೆ ಯಾವ ಹೊಣೆ? :
ರೆಮಿಡಿಸಿವಿರ್- ಡಾ| ಸಿ.ಎನ್. ಅಶ್ವತ್ಥನಾರಾಯಣ
ಆಮ್ಲಜನಕ- ಜಗದೀಶ್ ಶೆಟ್ಟರ್
ಹಾಸಿಗೆ ನಿರ್ವಹಣೆ- ಬಸವರಾಜ ಬೊಮ್ಮಾಯಿ, ಆರ್. ಅಶೋಕ್
ವಾರ್‌ರೂಂ, ಸಹಾಯವಾಣಿ- ಅರವಿಂದ ಲಿಂಬಾವಳಿ
ಕೇಂದ್ರದ ಜತೆ ಸಂಪರ್ಕ :
ರಾಜ್ಯದ ಆಮ್ಲಜನಕ ಸರಬರಾಜನ್ನು 350 ಟನ್‌ಗಳಿಂದ 850 ಟನ್‌ಗೆ ಹೆಚ್ಚಿಸಲಾಗಿದೆ. ಜಿಂದಾಲ್‌ನಿಂದ ಮಹಾರಾಷ್ಟ್ರಕ್ಕೆ ಹೋಗು ತ್ತಿದ್ದ ಆಮ್ಲಜನಕವನ್ನು ರಾಜ್ಯಕ್ಕೆ ನೀಡಲು ಕೇಂದ್ರ ಸಚಿವರ ಜತೆ ಮಾತನಾಡಿದ್ದು, ಒಪ್ಪಿ ದ್ದಾರೆ. 5 ಲಕ್ಷ ರೆಮಿಡಿಸಿವಿರ್ ಆಮದಿಗೆ ನಿರ್ಧರಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯ ಲಾಗುವುದು ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.