ರಾಜ್ಯದ 100 ತಾಲೂಕಿಗೆ ವಿಸ್ತರಿಸಿದ ಕೋವಿಡ್ ಪಾಸಿಟಿವಿಟಿ 


Team Udayavani, Dec 30, 2021, 9:15 PM IST

ರಾಜ್ಯದ 100 ತಾಲೂಕಿಗೆ ವಿಸ್ತರಿಸಿದ ಕೋವಿಡ್ ಪಾಸಿಟಿವಿಟಿ 

ಬೆಂಗಳೂರು: ಕೊರೊನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲಿಯೇ ಕಳೆದ 10 ದಿನಗಳಲ್ಲಿ ಕೊರೊನಾ ಪಾಸಿಟಿವಿಟಿ ರಾಜ್ಯದ‌ 100 ತಾಲೂಕುಗಳಲ್ಲಿ ವ್ಯಾಪ್ತಿಸುವ ಮೂಲಕ ಆತಂಕ ಮೂಡಿಸಿದೆ.

ರಾಜ್ಯದ ಅತ್ಯಧಿಕ ಕೊರೊನಾ ಪಾಸಿಟಿವ್‌ ಪತ್ತೆಯಾದ 178 ತಾಲೂಕುವಾರು ಪಟ್ಟಿಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಶೇ.1.63 ಪಾಸಿಟಿವ್‌ ಪತ್ತೆಯಾಗುವ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅನಂತರ ಸ್ಥಾನದಲ್ಲಿ ಕೊಡಗು ತಾಲೂಕಿನ ಸೋಮವಾರಪೇಟೆ ಶೇ.1.2, ವಿರಾಜಪೇಟೆ ಶೇ.0.98, ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ತಾಲೂಕಿನಲ್ಲಿ ಶೇ.0.85ರಷ್ಟು ಪಾಸಿಟಿವ್‌ ಪತ್ತೆಯಾಗಿದೆ. ಡಿ.19ರಿಂದ 29ರ ವರೆಗೆ ಒಟ್ಟು 9,60,992 ಮಂದಿ ಸ್ವಾéಬ್‌ ಪರೀಕ್ಷೆಗೆ ಒಳಪಡಿಸಿದ್ದು, ಅದರಲ್ಲಿ 3,620 ಮಂದಿಯಲ್ಲಿ ಪಾಸಿಟಿವ್‌ ಪತ್ತೆಯಾಗಿದೆ.

78 ತಾಲೂಕಿನಲ್ಲಿ ಶೂನ್ಯ ದರ :

ರಾಜ್ಯದ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್‌, ವಿಜಯಪುರ, ಚಾಮರಾಜ ನಗರ, ದ.ಕ., ಚಿತ್ರದುರ್ಗ, ಧಾರವಾಡ, ದಾವಣಗೆರೆ,ಗದಗ, ಕಲಬುರಗಿ, ಹಾವೇರಿ, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಮನಗರ, ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 70 ತಾಲೂಕುಗಳಲ್ಲಿ ಕೊರೊನಾ ಪಾಸಿಟಿವ್‌ ದರ ಶೂನ್ಯವಿದೆ.

ಗಡಿ ಜಿಲ್ಲೆಯಲ್ಲಿ ಸೋಂಕು ಅಧಿಕ :

ಹೊರರಾಜ್ಯದೊಂದಿಗೆ ಗಡಿ ಹಂಚಿಕೊಂಡ ಕರ್ನಾಟಕದ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗುತ್ತಿದೆ. ಆಂಧ್ರ ಪ್ರದೇಶದ ಗಡಿಯ ಬಳ್ಳಾರಿಯಲ್ಲಿ 97,847 ಪಾಸಿಟಿವ್‌, ಚಿತ್ರದುರ್ಗದಲ್ಲಿ 36,770 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ. ತೆಲಂಗಾಣದ ಗಡಿಯಲ್ಲಿರುವ ಕಲಬುರಗಿ 61,980, ಬೀದರ್‌ 24,352 ಪಾಸಿಟಿವ್‌, ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿ 80,124, ವಿಜಯಪುರ 36295 ಹಾಗೂ ತಮಿಳುನಾಡಿನ ಗಡಿಯಲ್ಲಿರುವ ಚಾಮರಾಜ ನಗರ 33,118, ಬೆಂಗಳೂರು ನಗರ 1262397, ರಾಮನಗರ 24222 ಹಾಗೂ ಕೇರಳದ ಗಡಿಭಾಗದ ದ.ಕ. 1,16,341 , ಕೊಡಗು 37742 , ಗೋವಾದ ಗಡಿ ಭಾಗದಲ್ಲಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ 56662 ಪಾಸಿಟಿವ್‌ ಪತ್ತೆಯಾಗಿದೆ. ಆ ಮೂಲಕ 30 ಜಿಲ್ಲೆಗಳಲ್ಲಿ ಪತ್ತೆಯಾದ ಒಟ್ಟು 30 ಲಕ್ಷ ಕೊರೊನಾ ಪಾಸಿಟಿವ್‌ ಪ್ರಕರಣದಲ್ಲಿ ಗಡಿ ಹಂಚಿಕೊಂಡ ಜಿಲ್ಲೆಯಲ್ಲಿ 12 ಜಿಲ್ಲೆಯಲ್ಲಿ 15.30 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದಾರೆ.

ರಾಜ್ಯದಲ್ಲಿ ಒಮಿಕ್ರಾನ್‌ ಭೀತಿ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ವಿವಿಧ ವಲಯದಲ್ಲಿ 15ದಿನಗಳಿಗೊಮ್ಮೆ ರ್‍ಯಾಂಡಮ್‌ ಪರೀಕ್ಷೆ ಮಾಡಲಾಗುತ್ತಿದೆ. ಸೋಂಕು ಪತ್ತೆಯಾದ ತತ್‌ಕ್ಷಣವೇ ಅವರ ಸಂಪರ್ಕಿತರನ್ನು ಪತ್ತೆ ಮಾಡಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.  ರಂದೀಪ್‌ಆಯುಕ್ತರು ಆರೋಗ್ಯ ಇಲಾಖೆ.

ರಾಜ್ಯದಲ್ಲಿ ಪಾಸಿಟವ್‌ ದರ ಅಧಿಕವಿರುವ ತಾಲೂಕು ಪಟ್ಟಿ :

ತಾಲೂಕು          /              ಟೇಸ್ಟ್‌ ಸಂಖ್ಯೆ  ಪಾಸಿಟಿವ್‌/       ಶೇಕಡವಾರು

ಸಕಲೇಶಪುರ     1592                       26                           1.63

ಸೋಮವಾರಪೇಟೆ         5925                       71                           1.2

ವಿರಾಜಪೇಟೆ     6843                       67                           0.98

ಬೆ.ದಕ್ಷಿಣ                            98665                    843                         0.85

ಕೋಲಾರ                           4659                       39                           0.84

ವಾರದ ಜಿಲ್ಲಾ ಪಾಸಿಟಿವ್‌ ದರಪಟ್ಟಿ

ಜಿಲ್ಲೆ                     ಶೇಕಡವಾರು

ಕೊಡಗು                              1.04

ಬೆ. ನಗರ                              0.86

ಕೋಲಾರ                           0.54

ಬೆ. ಗ್ರಾಮಾಂತರ              0.44

ಉಡುಪಿ                               0.44

 

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.