ಬರಲಿದೆ “ನಿರ್ಬಂಧ ಪಕ್ಷ “
ಡಿ. 20ರಿಂದ ಜ. 3ರ ವರೆಗೆ ಗರಿಷ್ಠ ಎಚ್ಚರ
Team Udayavani, Dec 5, 2020, 5:58 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಜನವರಿ ಅಥವಾ ಫೆಬ್ರವರಿಗೆ ಕೋವಿಡ್ ಎರಡನೇ ಅಲೆ ಬರಲಿದೆ. ಹೀಗಾಗಿ ಡಿಸೆಂಬರ್ 20ರಿಂದ ಜನವರಿ 3ರ ವರೆಗಿನ 15 ದಿನಗಳ ಕಾಲ ಗರಿಷ್ಠ ಎಚ್ಚರಿಕೆ ವಹಿಸಿ!
ವರ್ಷಾಂತ್ಯ ಮತ್ತು ಹೊಸ ವರ್ಷದ ಆರಂಭದ 15 ದಿನಗಳ ಅವಧಿಯಲ್ಲಿ ತೀವ್ರ ಎಚ್ಚರಿಕೆ ವಹಿಸಬೇಕು. ಮದುವೆಗೆ 100, ರಾಜಕೀಯ-ಧಾರ್ಮಿಕ ಸಮಾರಂಭಗಳಿಗೆ 200, ಅಂತ್ಯಕ್ರಿಯೆಗಳಲ್ಲಿ 50ಕ್ಕಿಂತ ಹೆಚ್ಚು ಜನರ ಸೇರುವಂತಿಲ್ಲ. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.
ಎರಡನೇ ಅಲೆ ಬರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಅವರು ಗುರುವಾರ ಬೆಂಗಳೂರಿನಲ್ಲಿ ತಾಂತ್ರಿಕ ಸಮಿತಿ ಜತೆಗೆ ಸಭೆ ನಡೆಸಿದರು.
ಡಿಸೆಂಬರ್, ಜನವರಿ, ಫೆಬ್ರವರಿ ಚಳಿಗಾಲವಾದ್ದರಿಂದ ನಿರ್ಣಾಯಕ. ಸೋಂಕಿಗೆ ಚಿಕಿತ್ಸೆ ನೀಡಲು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸದಾ ಸಿದ್ಧವಿವೆ. ಫೆಬ್ರವರಿ ಅಂತ್ಯದವರೆಗೂ ಹೆಚ್ಚು ಪರೀಕ್ಷೆ ನಡೆಸಬೇಕು ಎಂದರು.
ಸಿಎಂ ಜತೆ ಚರ್ಚಿಸಿ ನಿರ್ಧಾರ: ಬೊಮ್ಮಾಯಿ
ರಾತ್ರಿ ಕರ್ಫ್ಯೂ ಬಗ್ಗೆ ರವಿವಾರ ಸಿಎಂ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೊಸ ವರ್ಷಾಚರಣೆ ಅರ್ಥಹೀನ
ಹೊಸ ವರ್ಷ ನಮಗೆ ಹಬ್ಬವಲ್ಲ ಎಂದಿರುವ ಸಚಿವ ಸುಧಾಕರ್, ಈ ಸಂದರ್ಭದಲ್ಲಿ ಹೊಸ ವರ್ಷಾಚರಣೆ ಅರ್ಥಹೀನ. ಜನರು ಜವಾಬ್ದಾರಿಯುತವಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.