ರಾಜ್ಯಾದ್ಯಂತ ಸೆ.144; ಶಾಲೆ-ಕಾಲೇಜು, ಚಿತ್ರಮಂದಿರ, ಬಾರ್- ಪಬ್ ಬಂದ್?
Team Udayavani, Apr 16, 2021, 10:01 AM IST
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ರಾಜ್ಯದ ಏಳು ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ಕಠಿಣ ನೈಟ್ ಕರ್ಫ್ಯೂ ಮಾಡುವಂತೆ ಸಲಹೆ ನೀಡಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಉದ್ಯೋಗ ಕ್ಷೇತ್ರದ ಮೇಲೆ ಮತ್ತೆ ಕೋವಿಡ್ ಪರಿಣಾಮ : ನಿರುದ್ಯೋಗ ಪ್ರಮಾಣ ಶೇ.8 ಏರಿಕೆ
ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಬೇಕು, ಜನ ಜಂಗುಳಿ ಸೇರುವ ಕಾರ್ಯಕ್ರಮಗಳು ಬಂದ್ ಮಾಡಬೇಕು, ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್ ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.
ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ ವಿಧಿಸಬೇಕು, ಸೋಂಕು ಹೆಚ್ಚಿರುವ ಇತರ ಜಿಲ್ಲೆಗಳಲ್ಲೂ ಕಠಿಣ ಕ್ರಮ ಜಾರಿ ಮಾಡಬೇಕು, ಬಾರ್- ಪಬ್ ಬಂದ್ ಮಾಡಬೇಕು ಎಂದು ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ.
ಸಿಎಂ ತುರ್ತು ಸಭೆ: ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿದರು. ಆರೋಗ್ಯ ಸಚಿವ ಡಾ| ಕೆ.ಸುಧಾಕರ್, ಸಿಎಸ್ ರವಿ ಕುಮಾರ್ ಮುಂತಾದವರು ಭಾಗವಹಿಸಿದ್ದಾರೆ.
ಇದನ್ನೂ ಓದಿ: ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.