ರಾಮನಗರ: ಎಲ್ಲಾ 68 ಸಿಬ್ಬಂದಿಗೆ ಕೋವಿಡ್ ಪರೀಕ್ಷೆ, ನೆಗೆಟಿವ್ ವರದಿ
Team Udayavani, Apr 28, 2020, 9:13 AM IST
ಬೆಂಗಳೂರು: ಪಾದರಾಯನಪುರ ಗಲಭೆಯ ಆರೋಪಿಗಳನ್ನು ರಾಮನಗರ ಆಸ್ಪತ್ರೆಯಲ್ಲಿ ನೋಡಿಕೊಂಡ ವಿವಿಧ ಇಲಾಖೆಗಳ ಸಿಬ್ಬಂದಿ ಸೇರಿ ಒಟ್ಟು 68 ಮಂದಿಯನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದ್ದು, ಎಲ್ಲರ ಫಲಿತಾಂಶವು ನೆಗೆಟಿವ್ ಬಂದಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ರಾಮನಗರ ಆಸ್ಪತ್ರೆಯಲ್ಲಿ ಪಾದರಾಯನಪುರ ಆರೋಪಿಗಳ ನೇರ ಸಂಪರ್ಕಕ್ಕೆ ಬಂದಿದ್ದ ಜೈಲು ಸಿಬ್ಬಂದಿ, ಪೊಲೀಸರು, ಅಧಿಕಾರಿಗಳು, ನಗರಸಭೆ ಸಿಬ್ಬಂದಿ, ಚಾಲಕರು ಸೇರಿದಂತೆ ಒಟ್ಟು 68 ಮಂದಿಗೆ ಹಾಗೂ ಅವರ ಮೊದಲ ಸಂಪರ್ಕಕ್ಕೆ ಬಂದ್ದಿದ್ದ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಎಲ್ಲರಿಗೆ ನೆಗೆಟಿವ್ ಫಲಿತಾಂಶ ಬಂದಿರುವುದು ನನಗೆ ತುಂಬಾ ಸಮಾಧಾನ ತಂದಿದೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ ಇವರ ಕುಟುಂಬ ಸದಸ್ಯರೂ ತಪಾಸಣೆಗೆ ಒಳಪಟ್ಟಿದ್ದು ಅವರಿಗೂ ಯಾವುದೇ ಸೋಂಕು ತಗುಲಿರುವುದಿಲ್ಲ. ಆರೋಪಿಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡಿದ ನಂತರ ಸರಕಾರವೂ ಎಳ್ಳಷ್ಟ್ಟು ಎಚ್ಚರ ತಪ್ಪದೆ ಪ್ರತಿಯೊಬ್ಬರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಗಂಟಲು ದ್ರವವನ್ನು ಪರೀಕ್ಷೆ ಮಾಡಲಾಗಿದ್ದು, ಫಲಿತಾಂಶವೂ ನೆಗೆಟಿವ್ ಬಂದಿದೆ. ಆದರೂ ಅವರನ್ನು ಇನ್ನು 12 ದಿನ ರಾಮನಗರದ ಹಾಸ್ಟೆಲ್ ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲೇ ಇಡಲಾಗುವುದು ಎಂದು ವಿವರಿಸಿದರು.
ಕ್ವಾರಂಟೈನ್ ಮುಗಿದ ಮೇಲೆ ಮತ್ತೊಮ್ಮೆ ಇವರೆಲ್ಲರನ್ನು ತಪಾಸಣೆಗೆ ಒಳಪಡಿಸಲಾಗುವುದು. ಈ ಮೂಲಕ ಹಸಿರು ವಲಯ ಆಗಿದ್ದ ರಾಮನಗರ ಜಿಲ್ಲೆಯನ್ನು ಕೋವಿಡ್ ಅಪಾಯಕ್ಕೆ ತಳ್ಳಾಯಿತು ಎಂಬ ಆತಂಕ ನಿವಾರಣೆ ಆದಂತೆ ಆಗಿದೆ. ಆದರೂ ಜಿಲ್ಲೆಯಲ್ಲಿ ಸರಕಾರ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.