Covid ಅಕ್ರಮ ಎಸಗಿದವರ ಮೇಲೆ ಕ್ರಿಮಿನಲ್‌ ಕೇಸ್‌:ಡಿ.ಕೆ. ಶಿವಕುಮಾರ್‌

ನ್ಯಾ| ಜಾನ್‌ ಕುನ್ಹಾ ವರದಿ ಅನುಸಾರ ಅಧಿಕಾರಿಗಳ ವಿರುದ್ಧ ಕ್ರಮ... ಚಾಮರಾಜನಗರ ಆಮ್ಲಜನಕ ದುರಂತ ಪ್ರಕರಣ ಮರು ತನಿಖೆ

Team Udayavani, Dec 8, 2024, 6:45 AM IST

DK SHI NEW

ಬೆಂಗಳೂರು: ಕೋವಿಡ್‌ ಅವಧಿಯ ಅಕ್ರಮ ಕುರಿತ ನ್ಯಾ| ಜಾನ್‌ ಮೈಕಲ್‌ ಕುನ್ಹಾ ಅವರ ವರದಿಯನ್ನು ನಮ್ಮ ಸರಕಾರ ಸ್ವೀಕರಿಸಿದೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ. ಉಳಿದಂತೆ ವರದಿಯ ಶಿಫಾರಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲು ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ನ್ಯಾ| ಕುನ್ಹಾ ಆಯೋಗದ ಶಿಫಾರಸು ಬಗ್ಗೆ ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿಯ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಯಲಿದೆ. ಕೆಲವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಹೀಗಾಗಿ ಎಷ್ಟು ಪ್ರಕರಣ ದಾಖಲಾಗುತ್ತವೋ ಗೊತ್ತಿಲ್ಲ. ಈ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ನಡೆಸಿ ಪರಿಶೀಲಿಸುತ್ತೇವೆ. ಈ ಸಮಿತಿಯು ಅಧಿಕಾರಿಗಳ ವಿಚಾರಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷವಾಗಿ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದರು.

ಆಮ್ಲಜನಕ ದುರಂತ ಮರು ತನಿಖೆ
ಚಾಮರಾಜನಗರ ಆಮ್ಲಜನಕ ದುರಂತ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಸ್ವತಃ ಆ ಆಸ್ಪತ್ರೆಗೆ ಹೋಗಿ ಪರಿಸ್ಥಿತಿ ಅವಲೋಕನ ಮಾಡಿದ್ದೆವು. 36 ಜನ ಮೃತಪಟ್ಟಿದ್ದರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ಮೃತಪಟ್ಟ 36 ಮಂದಿಯ ಮನೆಗಳಿಗೆ ನಾನು ಭೇಟಿ ನೀಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ ಅಕ್ರಮಗಳ ವರದಿ ಪರಿಶೀಲನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ 84 ಲಕ್ಷ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿ 502 ಕೋಟಿ ರೂ. ಬಿಲ್‌ ಮಾಡಿದ್ದು, ಈ ಪೈಕಿ 400 ಕೋಟಿ ರೂ. ಪಾವತಿ ಮಾಡಲಾಗಿದೆ. 84 ಲಕ್ಷ ರೂ. ಎಂದರೆ ಬೆಂಗಳೂರಿನಲ್ಲಿರುವ ಪ್ರತೀ ಮನೆಗೆ ಇಬ್ಬರಂತೆ ಪರೀಕ್ಷೆ ಮಾಡಿರಬೇಕು. ಕಿದ್ವಾಯಿ ಸಂಸ್ಥೆಯೊಂದರಲ್ಲೇ 24 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿ¨ªಾರೆ. ತಾಂತ್ರಿಕವಾಗಿ ಸಮರ್ಥವಾಗಿಲ್ಲದೆ, ಐಸಿಎಂಆರ್‌ ಅನುಮತಿ ಇಲ್ಲದೆ ಪರೀಕ್ಷೆ ನಡೆಸಲಾಗಿದೆ. 146 ಕೋಟಿ ರೂ. ಬಿಲ್‌ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 24 ಲಕ್ಷ ಜನರಿಗೆ ಒಂದೇ ಕಡೆ ಪರೀಕ್ಷೆ ಎಂದರೆ ಅಲ್ಲಿ ಎಷ್ಟು ಜನದಟ್ಟನೆ, ಸರದಿ ಸಾಲು ಇರಬೇಕು. ಈ ವಿಷಯದಲ್ಲಿ ಕಾನೂನು ಚೌಕಟ್ಟು ಮೀರಿ ಏನೆಲ್ಲ ತೀರ್ಮಾನ ಮಾಡಿದ್ದಾರೆ ಎಂಬ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದಾರೆ. ಈ ವರದಿಯನ್ನು ನಾವು ಪರಿಶೀಲನೆ ಮಾಡುತ್ತೇವೆ ಎಂದರು.

ಈ ವರದಿಗಳನ್ನು ಪರಿಶೀಲಿಸಿ, ನಮಗೆ ಮಾರ್ಗದರ್ಶನ ನೀಡಲು ನಿವೃತ್ತ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಮಟ್ಟದ ಸಮಿತಿ ರಚಿಸಲಾಗುವುದು. ಈ ಪ್ರಕರಣದಲ್ಲಿ ನಾವು ಯಾರಿಗೂ ಅನಗತ್ಯವಾಗಿ ತೊಂದರೆ ಮಾಡಬಾರದು ಎಂದು ಈ ನಿರ್ಧಾರ ಮಾಡಿದ್ದೇವೆ ಎಂದರು.

ಪ್ರಮುಖ ಅಂಶವನ್ನಷ್ಟೇ ಹೇಳಿದ್ದೇನೆ

ಕೋವಿಡ್‌ ತನಿಖೆ ರಾಜಕೀಯ ಪಿತೂರಿ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಶಿವಕುಮಾರ್‌, ನಾನು ವರದಿಯ ಪ್ರಮುಖ ಅಂಶಗಳನ್ನು ಮಾಧ್ಯಮಗಳ ಮುಂದೆ ಪ್ರಸ್ತಾವ ಮಾಡಿದ್ದೇನೆ ಅಷ್ಟೇ ಎಂದರು. ಕುನ್ಹಾ ವರದಿ ಆಧಾರದ ಮೇಲೆ ಎಸ್‌ಐಟಿ ರಚನೆಯಾಗಿದೆಯೇ ಎಂಬ ಪ್ರಶ್ನೆಗೆ ಪತ್ರಿಕ್ರಿಯಿಸಿ, ಈ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲವೂ ಅಂತಿಮವಾದ ಬಳಿಕ ಮಾಹಿತಿ ನೀಡುತ್ತೇವೆ ಎಂದರು.

ಒಪ್ಪಂದ ಸೂತ್ರದ ಬಗ್ಗೆ ಚರ್ಚೆ ಬೇಡ
ಮುಖ್ಯಮಂತ್ರಿ ವಿಚಾರವಾಗಿ ಒಪ್ಪಂದ ಆಗಿರು ವುದು ನಿಜ ಎಂಬ ಸಚಿವ ಮುನಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಒಪ್ಪಂದದ ವಿಷಯವಾಗಿ ಯಾರೂಚರ್ಚೆ ಮಾಡಬಾರದು. ನಾವು ಮತ್ತು ಅವರು ರಾಜ ಕೀಯವಾಗಿ ಸಹಕಾರದಿಂದ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳಿಗೆ ಕೆಲವು ಜವಾಬ್ದಾರಿ ವಹಿಸಿದ್ದು, ನನಗೆ ಕೆಲವು ಜವಾಬ್ದಾರಿ ವಹಿಸಿ¨ªಾರೆ. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಹೇಳಿದ್ದೇ ಅಂತಿಮ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.