ಮೇ 1ರಿಂದ ಲಸಿಕೆ ಕಷ್ಟ


Team Udayavani, Apr 30, 2021, 6:40 AM IST

ಮೇ 1ರಿಂದ ಲಸಿಕೆ ಕಷ್ಟ

ಬೆಂಗಳೂರು/ಹೊಸದಿಲ್ಲಿ: ಲಸಿಕೆ ಕೊರತೆ ಯಿಂದಾಗಿ 18 ವರ್ಷ ತುಂಬಿದ ಎಲ್ಲರಿಗೂ ಮೇ 1ರಿಂದ ಲಸಿಕೆ ನೀಡುವ ಅಭಿಯಾನ ಆರಂಭವಾಗುವುದಿಲ್ಲ. ಮೇ 3ನೇ ವಾರದಲ್ಲಷ್ಟೇ ಆರಂಭವಾಗುವ ಸಾಧ್ಯತೆಗಳಿವೆ.

ಮೇ 1ರಿಂದ ದೇಶಾದ್ಯಂತ 18ರಿಂದ 45 ವರ್ಷದೊಳಗಿನ ಎಲ್ಲರಿಗೂ ಲಸಿಕೆ ವಿತರಣೆ ಆರಂಭವಾಗಬೇಕಾಗಿತ್ತು. ಆದರೆ ಕರ್ನಾಟಕದಲ್ಲಿ ಲಸಿಕೆ ದಾಸ್ತಾನು ಇಲ್ಲದಿರುವುದರಿಂದ ಇದು ಕಷ್ಟಸಾಧ್ಯ. ಹೀಗಾಗಿ ಕೋವಿನ್‌ ಪೋರ್ಟಲ್‌ನಲ್ಲೂ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೋಂದಣಿಗೆ ಅವಕಾಶ ನೀಡಲಾಗಿದೆ.

ಕರ್ನಾಟಕದ ಆರೋಗ್ಯ ಇಲಾಖೆ ಮೂಲಗಳ ಪ್ರಕಾರ ಸೋಂಕು ಹೆಚ್ಚಳವಾಗಿರುವುದರಿಂದ 45 ವರ್ಷ ಮೇಲ್ಪಟ್ಟವರು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಇವರಿಗೂ ಲಸಿಕೆಯ ಕೊರತೆ ಆಗಿದೆ. ಸದ್ಯ ರಾಜ್ಯದಲ್ಲಿ 8 ಲಕ್ಷ ಡೋಸ್‌ ದಾಸ್ತಾನು ಇದ್ದು, ಇದನ್ನು 45 ವರ್ಷ ಮೀರಿದವರಿಗೆ ಮಾತ್ರ ಕೊಡಬೇಕು ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ.

ಕನಿಷ್ಠ 30 ಲಕ್ಷ ಲಸಿಕೆ ದಾಸ್ತಾನು :

ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಿದರೆ ನಿತ್ಯ 4-5 ಲಕ್ಷ ಡೋಸ್‌ ಬೇಕಾಗುತ್ತದೆ. ಹೀಗಾಗಿ ಕನಿಷ್ಠ 30 ಲಕ್ಷ ದಾಸ್ತಾನು ಇದ್ದರೆ ಮಾತ್ರವೇ ಸುಗಮವಾಗಿ ಲಸಿಕೆ ಅಭಿಯಾನ ನಡೆಯಲು ಸಾಧ್ಯ ಎಂದು ಲಸಿಕೆ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ.

ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಿಗೆ ಆದ್ಯತೆ :

ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿರುವ ಜಿಲ್ಲೆಗಳಿಗೆ ಆದ್ಯತೆಯಲ್ಲಿ ಸರಬರಾಜು ಮಾಡಲಾಗುತ್ತಿದೆ. ಈ ಜಿಲ್ಲೆಗಳಿಗೆ ತುರ್ತಾಗಿ ಲಸಿಕೆ ನೀಡಿ ಹೆಚ್ಚು ಜನರಿಗೆ ಲಸಿಕೆ ಹಾಕಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ಲಸಿಕೆ ವಿಭಾಗದ ಉಪ ನಿರ್ದೇಶಕಿ ಡಾ| ಬಿ.ಎನ್‌. ರಜನಿ ತಿಳಿಸಿದ್ದಾರೆ.

ಸಿದ್ದರಾಮಯ್ಯಗೆ ಮಾಹಿತಿ? :

ದಾಸ್ತಾನು ಕೊರತೆ ಹಿನ್ನೆಲೆಯಲ್ಲಿ ಮೇ 1ರಿಂದ 18-44 ವರ್ಷದವರಿಗೆ ಲಸಿಕೆ ನೀಡಲು ಕಷ್ಟ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಹಂತ ಹಂತವಾಗಿ ಲಸಿಕೆ: ಸಿಎಂ  :

ಮೇ 1ರಿಂದ ಲಸಿಕೆ ಅಭಿಯಾನ ಆರಂಭವಾಗುವುದಿಲ್ಲ ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ಹಂತ ಹಂತವಾಗಿ ಲಸಿಕೆ ಹಾಕಲಾಗುತ್ತದೆ ಎಂದಿರುವ ಅವರು, ಅಭಿಯಾನ ಆರಂಭವಾಗುವ ದಿನಾಂಕದ ಬಗ್ಗೆ ಏನನ್ನೂ ಹೇಳಿಲ್ಲ.

ಖಾಸಗಿಯಲ್ಲಿಯೂ ಇಲ್ಲ :

ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಅರ್ಧಕ್ಕರ್ಧ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಲಸಿಕೆ ಅಭಿಯಾನ ನಡೆಯುತ್ತಿಲ್ಲ. ಸರಕಾರಿ ಆರೋಗ್ಯ ಕೇಂದ್ರಗಳಿಗೆ ಪೂರೈಸಲು ಸಾಧ್ಯವಾಗದ್ದರಿಂದ ಖಾಸಗಿಯವರಿಗೆ ಪೂರೈಕೆ ಇನ್ನಷ್ಟು ತಡವಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕುಪೀಡಿತರ ಆರೈಕೆಯೂ ನಡೆಯುತ್ತಿದೆ.

ಇತರ ರಾಜ್ಯಗಳಲ್ಲಿ  ಹೇಗೆ? :

ದಾಸ್ತಾನು ಕೊರತೆಯಿಂದಾಗಿ ದಿಲ್ಲಿ, ರಾಜಸ್ಥಾನ, ಪಂಜಾಬ್‌, ಮಹಾರಾಷ್ಟ್ರ, ತಮಿಳುನಾಡು, ಗುಜರಾತ್‌ ರಾಜ್ಯಗಳಲ್ಲಿ ಕೂಡ ಮೇ 15ರ ಬಳಿಕವೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಅಭಿಯಾನ ಆರಂಭವಾಗುವ ಸಾಧ್ಯತೆಗಳಿವೆ.

ಲಕ್ಷಣ ಇಲ್ಲದವರೂ ಆಸ್ಪತ್ರೆಗೆ :

ಸೋಂಕಿನ ಲಕ್ಷಣಗಳು ಇದ್ದು, ಪರೀಕ್ಷೆಯಲ್ಲಿ ನೆಗೆಟಿವ್‌ ಬಂದರೆ ಅಂಥವರನ್ನೂ ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ| ಸುಧಾಕರ್‌ ಹೇಳಿದ್ದಾರೆ. ಅಲ್ಲಿ ಅವರಿಗೆ ಸಿಂಡ್ರೋಮಿಕ್‌ ಚಿಕಿತ್ಸೆ ವಿಧಾನ ಅನುಸರಿಸಲಾಗುತ್ತದೆ. ಹಲವು ಪ್ರಕರಣಗಳಲ್ಲಿ ಪರೀಕ್ಷೆ ಮಾಡಿಸಿದರೂ ನೆಗೆಟಿವ್‌ ವರದಿ ಬರುತ್ತಿದೆ. ವ್ಯಕ್ತಿಗೆ ರೋಗ ಲಕ್ಷಣ ಇದ್ದರೂ ವರದಿಯಲ್ಲಿ ನೆಗೆಟಿವ್‌ ಬರುವುದರಿಂದ, ರೋಗ ತೀವ್ರತೆ ಹೆಚ್ಚಾದಾಗ ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ. ಇದಕ್ಕಾಗಿ ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಡ್ರೋಮಿಕ್‌ ವಿಧಾನ ಅನುಸರಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. ಈ ವಿಧಾನದಲ್ಲಿ ಸಂಬಂಧಪಟ್ಟ ವೈದ್ಯರು ರೋಗಿಗಳ ಸ್ಥಿತಿಯನ್ನು ಪ್ರಮಾಣೀ ಕರಿಸುತ್ತಾರೆ. ಬಳಿಕ ರೋಗಿಗೆ ಪ್ರತ್ಯೇಕ ಸಂಖ್ಯೆ ನೀಡಿ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ.

ಒಂದು ಕೋಟಿ ಡೋಸ್‌ ಲಸಿಕೆಗೆ ಬೇಡಿಕೆ ಸಲ್ಲಿಸಿದ್ದೇವೆ. ಪೂರೈಕೆಯನ್ನು ಆಧರಿಸಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ದಿನಾಂಕ ತಿಳಿಸುತ್ತೇವೆ. ಆದಷ್ಟು  ಶೀಘ್ರ ಲಸಿಕೆ ಹಾಕಲು ಕ್ರಮ ಕೈಗೊಳ್ಳುತ್ತೇವೆ. -ಪಿ. ರವಿಕುಮಾರ್‌, ಮುಖ್ಯ ಕಾರ್ಯದರ್ಶಿ

ಟಾಪ್ ನ್ಯೂಸ್

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.