ಒಂದು ಕೋಟಿ ಡೋಸ್ ಲಸಿಕೆ ಹಂಚಿಕೆ: 83.6 ಲಕ್ಷ ಮಂದಿ ಭಾಗಿ; ಮಹಿಳೆಯರೇ ಹೆಚ್ಚು
Team Udayavani, May 7, 2021, 7:20 AM IST
ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಂದು ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ. ಅಭಿಯಾನದಲ್ಲಿ ಒಟ್ಟು 84.6 ಲಕ್ಷ ಮಂದಿ ಲಸಿಕೆ ಪಡೆದಿದ್ದು, 18.5 ಲಕ್ಷ ಮಂದಿ ಎರಡೂ ಡೋಸ್ ಪೂರ್ಣಗೊಳಿಸಿದ್ದಾರೆ.
ಲಸಿಕೆ ಅಭಿಯಾನ ಆರಂಭವಾಗಿ 110 ದಿನಗಳಾಗಿವೆ. ಗುರುವಾರದ ಅಂತ್ಯಕ್ಕೆ ಒಟ್ಟು 84.6 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಈ ಪೈಕಿ 18.5 ಲಕ್ಷ ಮಂದಿ 2ನೇ ಡೋಸ್ ಪೂರ್ಣಗೊಳಿಸಿದ್ದಾರೆ. ಒಟ್ಟು 1,03,01,805 ಡೋಸ್ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೇಂದ್ರದಿಂದ ಕಳೆದ 4 ದಿನಗಳಲ್ಲಿ 8 ಲಕ್ಷ ಡೋಸ್ ಬಂದಿರುವ ಹಿನ್ನೆಲೆಯಲ್ಲಿ 45 ವರ್ಷ ಮೇಲ್ಪಟ್ಟವರ ಲಸಿಕೆ ಅಭಿಯಾನ ಮತ್ತೆ ಚುರುಕಾಗಿದೆ.
ಮಹಿಳೆಯರೇ ಹೆಚ್ಚು :
ಪುರುಷರಿಗಿಂತ 3.4 ಲಕ್ಷ ಅಧಿಕ ಮಹಿಳೆಯರು ಲಸಿಕೆ ಪಡೆದಿದ್ದಾರೆ. 43.9 ಲಕ್ಷ ಮಹಿಳೆಯರು, 40.6 ಲಕ್ಷ ಪುರುಷರು, 1,104 ತೃತೀಯ ಲಿಂಗಿಗಳಿಗೆ ಲಸಿಕೆ ಹಾಕಲಾಗಿದೆ. ಬುಧವಾರ 75 ಸಾವಿರ ಕೊವ್ಯಾಕ್ಸಿನ್ ಮತ್ತು 2 ಲಕ್ಷ ಕೊವಿಶೀಲ್ಡ್ ಲಸಿಕೆ ಬಂದಿವೆ. ಮೇ 20ರೊಳಗೆ ಇನ್ನೂ ಏಳು ಲಕ್ಷದಷ್ಟು ಬರಲಿದೆ.
ಶೇ. 91ರಷ್ಟು ಕೊವಿಶೀಲ್ಡ್ :
ಒಂದು ಕೋಟಿ ಡೋಸ್‌ನಲ್ಲಿ 93.4 ಲಕ್ಷ ಡೋಸ್ ಕೊವಿಶೀಲ್ಡ್, 9.6 ಲಕ್ಷ ಡೋಸ್ ಕೊವ್ಯಾಕ್ಸಿನ್ ಹಾಕಲಾಗಿದೆ. ಕೆಲವೆಡೆ ಕೊವ್ಯಾಕ್ಸಿನ್ ಲಸಿಕೆಯೇ ಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ. ಎರಡು ಲಸಿಕೆಗಳೂ ಒಂದೇ ಪರಿಣಾಮ ಬೀರುತ್ತವೆ. ಜನರು ಲಭ್ಯವಿರುವ ಲಸಿಕೆ ಸ್ವೀಕರಿಸಿ ಕೊರೊನಾದಿಂದ ರಕ್ಷಣೆ ಪಡೆಯಬೇಕು ಎಂದು ಲಸಿಕೆ ವಿಭಾಗದ ಉಪನಿರ್ದೇಶಕಿ ಡಾ| ಬಿ.ಎನ್. ರಜನಿ ಮನವಿ ಮಾಡಿದ್ದಾರೆ.
ಟಾಪ್ 5 ಜಿಲ್ಲೆಗಳು :
ಜಿಲ್ಲೆ ಲಸಿಕೆ ಪಡೆದವರು (ಮೊದಲ ಡೋಸ್)
ಬೆಂಗಳೂರು 16.9 ಲಕ್ಷ
ಮೈಸೂರು 6.48 ಲಕ್ಷ
ಬೆಳಗಾವಿ 5.36 ಲಕ್ಷ
ಬಳ್ಳಾರಿ 3.57 ಲಕ್ಷ
ತುಮಕೂರು 3.38 ಲಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.