ಮುಂದುವರಿದ ‘ಮಹಾ’ ಸಂಪರ್ಕ ಸೋಂಕು: ರಾಜ್ಯದಲ್ಲಿ ಮತ್ತೆ 69 ಮಂದಿಗೆ ಸೋಂಕು ಪತ್ತೆ
Team Udayavani, May 25, 2020, 1:12 PM IST
ಬೆಂಗಳೂರು: ರಾಜ್ಯದಲ್ಲಿ ಇಂದು 69 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಓರ್ವ ಮಹಿಳೆ ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ.
ಇಂದು ಉಡುಪಿಯಲ್ಲಿ 16, ಯಾದಗಿರಿಯಲ್ಲಿ 15, ಕಲಬುರಗಿಯಲ್ಲಿ 14 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ ಮೂರು ಪ್ರಕರಣಗಳು, ಬಳ್ಳಾರಿಯಲ್ಲಿ ಮೂರು, ಬೆಂಗಳೂರು ನಗರದಲ್ಲಿ ಆರು ಪ್ರಕರಣಗಳು ದೃಢವಾಗಿದೆ. ಈವರೆಗೆ ಯಾವುದೇ ಪ್ರಕರಣವಿಲ್ಲದೆ ಇದ್ದ ರಾಮನಗರದಲ್ಲಿ ಮೊದಲ ಸೋಂಕು ಪ್ರಕರಣ ಪತ್ತೆಯಾಗಿದೆ.
ಬೆಂಗಳೂರು ಗ್ರಾಮಾಂತರದ 55 ವರ್ಷದ ಮಹಿಳೆಯು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ಕೋವಿಡ್ -19 ಸೋಂಕು ದೃಢವಾಗಿದ್ದು, ರವಿವಾರ ರಾತ್ರಿ ಅಸುನೀಗಿದ್ದಾರೆ.
ಇಂದಿನ 69 ಸೋಂಕಿತರ ಕಾರಣ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ. ಇದರಲ್ಲಿ ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಜನ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.