ಬಾಲಕನ ಅಪಹರಣ: ನೇಪಾಲ ಮೂಲದ ಆರೋಪಿ ಸೆರೆ
Team Udayavani, Jun 9, 2022, 12:40 AM IST
ಬೆಂಗಳೂರು: ಹೊರ ಮಾವು ನಿವಾಸಿ, ಬಿಎಂಟಿಸಿ ಚಾಲಕ ಸುಭಾಷ್ ಅವರ ಪುತ್ರ ಮನದೀಪ್(11)ನನ್ನು ಅಪಹರಿಸಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದು, ಬಾಲಕನನ್ನು ರಕ್ಷಿಸಲಾಗಿದೆ.
ನೇಪಾಲ ಮೂಲದ ಗೌರವ್ ಸಿಂಗ್ (50) ಬಂಧಿತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಈತನ ಅತ್ತಿಗೆ (ಸಹೋದರನ ಪತ್ನಿ) ದುರ್ಗಾ ಎಂಬಾಕೆಗಾಗಿ ಶೋಧ ನಡೆಯುತ್ತಿದೆ. ಗೌರವ್ ಸಿಂಗ್ ಜಿಗಣಿಯಲ್ಲಿರುವ ಫಾರಂ ಹೌಸ್ನಲ್ಲಿ ಭದ್ರತಾ ಸಿಬಂದಿಯಾಗಿದ್ದು, ದುರ್ಗಾ ಖಾಸಗಿ ಕಂಪೆನಿಯೊಂದರ ಉದ್ಯೋಗಿಯಾಗಿದ್ದಳು. ಇವರು 20 ವರ್ಷಗಳಿಂದ ಬೆಂಗಳೂರಿನಲ್ಲಿಯೇ ವಾಸವಾಗಿದ್ದಾರೆ ಎಂದು ಪೊಲೀಸರು ಹೇಳಿದರು.
ಮನದೀಪ್ನನ್ನು ಮಂಗಳವಾರ ಸಂಜೆ 5.30ರ ಹೊತ್ತಿಗೆ ಉಪಾಯದಿಂದ ನೆರೆಮನೆಯ ದುರ್ಗಾ ಎಂಬಾಕೆ ಬಸ್ನಲ್ಲಿ ಕರೆತಂದು ಗೌರವ್ ಸಿಂಗ್ಗೆ ಒಪ್ಪಿಸಿದ್ದಳು. ರಾತ್ರಿ 8.30ರ ಸುಮಾರಿಗೆ ಬಾಲಕನ ತಾಯಿಗೆ ದೂರವಾಣಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿತ್ತು.
ಕಾರ್ಯಾಚರಣೆ
ಬಾಲಕನ ತಂದೆಯು ರಾತ್ರಿ ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಸಿಬಿ ನಿಂಗಪ್ಪ ಸಕ್ರಿ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿತ್ತು. ಒಂದು ತಂಡ ಸ್ಥಳೀಯ ಸಿಸಿ ಕೆಮರಾ ಪರಿಶೀಲಿಸುತ್ತಿದ್ದರೆ, ಹೆಣ್ಣೂರು ಠಾಣೆ ಪಿಎಸ್ಐ ಲಿಂಗರಾಜು ತಂಡ ಆರೋಪಿಯ ಮೊಬೈಲ್ ಲೊಕೇಷನ್ ಆಧರಿಸಿ ಫಾರ್ಮ್ ಹೌಸ್ನ ಸುಮಾರು 8 ಅಡಿ ಎತ್ತರದ ಕಾಂಪೌಂಡ್ ಗೋಡೆಯನ್ನು ಹಾರಿ ಆರೋಪಿಯನ್ನು ಬಂಧಿಸಿ ಬಾಲಕನನ್ನು ರಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.