ಬೆಳೆ ಪರಿಹಾರ 2435 ಕೋಟಿ ರೈತರ ಖಾತೆಗೆ: ಸಚಿವ ಆರ್ ಅಶೋಕ್


Team Udayavani, Sep 14, 2022, 8:30 PM IST

ಬೆಳೆ ಪರಿಹಾರ 2435 ಕೋಟಿ ರೈತರ ಖಾತೆಗೆ: ಸಚಿವ ಆರ್ ಅಶೋಕ್

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಹಾರ ಮಧ್ಯವರ್ತಿಗಳ ಪಾಲಾಗಬಾರದು. ಹಾಗಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಣವನ್ನು ಪರಿಷ್ಕೃತ ಮಾರ್ಗಸೂಚಿಯಂತೆ ವರ್ಗಾಯಿಲಾಗಿದೆ.

ಜುಲೈನಿಂದ ಈವರೆಗೆ ಸುರಿದ ಮಳೆಯಿಂದ ಆದ ಬೆಳೆಹಾನಿಗೆ 2435.57 ಕೋಟಿ ಹಣವನ್ನು ರೈತರಿಗೆ ನೀಡಿದ್ದೇವೆ. ಮಳೆಯಾಶ್ರಿತ ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಇದ್ದ 6800 ರೂಪಾಯಿಯನ್ನು ಪ್ರತಿ ಹೆಕ್ಟೇರ್‌ಗೆ 13600 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ನೀರಾವರಿ ಜಮೀನಿಗೆ 13,500 ರೂ.ಗಳಿಂದ 25 ರೂ.ಗಳಿಗೆ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ ನೀಡುವ 18 ಸಾವಿರ ರೂ. ಪರಿಹಾರವನ್ನು 28 ಸಾವಿರ ರೂ ಗಳಿಗೆ ಹೆಚ್ಚಿಸಲಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ರಾಷ್ಟ್ರೀಯ ವಿಪತ್ತು ನಿಧಿ ಮಾರ್ಗಸೂಚಿಯ ಎರಡರಷ್ಟು ಪರಿಹಾರ ನೀಡಲಾಗಿದೆ.ಕೃಷಿ, ತೋಟಗಾರಿಕೆ, ಕಾಫಿ ಬೆಳೆಗಳಿಗೆ ಸಂಬಂಧಿಸಿದಂತೆ ಪರಿಹಾರ ನೀಡಲಾಗಿದೆ.

ಹಾನಿಯಾದ ಮನೆಗಳ ಪೈಕಿ ಪರಿಹಾರಕ್ಕೆ ಅರ್ಹ ಇರುವ ಪ್ರಕರಣಗಳನ್ನು ರಾಜೀವ್‌ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಿ ಪರಿಹಾರ ನೀಡುವ ಕೆಲಸ ಮಾಡಲಾಗುತ್ತಿದೆ. ರಾಜ್ಯದ ರೈತರ ಪರವಾಗಿ ಬೊಮ್ಮಾಯಿ ಸರ್ಕಾರ ಕೆಲಸ ಮಾಡಲಿದೆ. ರೈತರ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹಿಂದೆಲ್ಲ 6 ತಿಂಗಳು, 1 ವರ್ಷ ಆದರೂ ಪರಿಹಾರ ಬರುತ್ತಿರಲಿಲ್ಲ. ಈಗ ತ್ವರಿತವಾಗಿ ನಾವು ನೀಡುತ್ತಿದ್ದೇವೆ ಎಂದು ಅಶೋಕ ಹೇಳಿದರು.

ಸಾರ್ವಜನಿಕ ಉದ್ದೇಶಕ್ಕೆ 3 ಸಾವಿರ ಎಕ್ರೆ ಜಾಗ: ಅಶೋಕ್‌
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,123 ಎಕ್ರೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1,181 ಎಕ್ರೆ ಸರಕಾರಿ ಭೂಮಿಯನ್ನು ಸಾರ್ವಜನಿಕ ಉದ್ದೇಶಗಳಿಗೆ ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ ಸದಸ್ಯ ಮಂಜುನಾಥ ಭಂಡಾರಿ ಅವರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಉದ್ದೇಶಗಳಾದ ಮನೆ, ನಿವೇಶನ, ಸಾರ್ವಜನಿಕ ಕಟ್ಟಡ, ಘನ/ದ್ರವ ತ್ಯಾಜ್ಯ ನಿರ್ವಹಣೆ, ಶ್ಮಶಾನ ಇತ್ಯಾದಿಗಳಿಗೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡುವ ಎಷ್ಟು ಪ್ರಸ್ತಾವನೆಗಳು ಕಂದಾಯ ಇಲಾಖೆ ಮುಂದಿವೆ ಎಂದು ಪ್ರಶ್ನಿಸಿದರು.

ಅದಕ್ಕೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,123 ಎಕ್ರೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1,181 ಎಕ್ರೆ ಸರಕಾರಿ ಭೂಮಿಯನ್ನು ಸಾರ್ವಜನಿಕ ಉದ್ದೇಶಗಳಿಗೆ ಮಂಜೂರು ಮಾಡಲಾಗಿದೆ. ಜತೆಗೆ ಘನತ್ಯಾಜ್ಯ ಉದ್ದೇಶಕ್ಕೆ ಜಮೀನು ಕಾದಿರಿಸುವ 11 ಪ್ರಕರಣ ಉಡುಪಿಯಲ್ಲಿ ಹಾಗೂ 15 ಪ್ರಕರಣಗಳು ದಕ್ಷಿಣ ಕನ್ನಡದಲ್ಲಿ ಬಾಕಿ ಇವೆ. ಅದೇ ರೀತಿ ಮನೆ ನಿವೇಶನಕ್ಕೆ ಕ್ರಮವಾಗಿ 18 ಮತ್ತು 52, ಸಾರ್ವಜನಿಕ ಕಟ್ಟಡಕ್ಕೆ ಕ್ರಮವಾಗಿ 15 ಮತ್ತು 4 ಪ್ರಕರಣಗಳು ಬಾಕಿ ಇವೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 44 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 71 ಪ್ರಕರಣಗಳು ಬಾಕಿ ಇವೆ ಎಂದು ತಿಳಿಸಿದರು.

ಸಾರ್ವಜನಿಕ ಉದ್ದೇಶಗಳಿಗೆ ಜಮೀನು ಕಾದಿರಿಸುವ ವಿಚಾರದಲ್ಲಿ ಎರಡೂ ಜಿಲ್ಲೆಗಳಲ್ಲಿ ಯಾವುದೇ ವಿಳಂಬವಾಗುತ್ತಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.