ಶಿಕ್ಷಣ ರಂಗಕ್ಕೆ CSR ನಿಧಿ?
Team Udayavani, Aug 16, 2023, 11:44 PM IST
ಬೆಂಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಸುಮಾರು 2,800 ಕೋಟಿ ರೂ ಕಾರ್ಪೊರೇಟ್ ಸಾಮಾಜಿಕ ಹೊಣೆ (ಸಿಎಸ್‌ಆರ್) ನಿಧಿಯನ್ನು ಸೆಳೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕಾರ್ಯಪ್ರವೃತ್ತವಾಗಿದ್ದು ಈ ಬಗ್ಗೆ ಬುಧವಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು.
ಸಮಗ್ರ ಶಿಕ್ಷಣ ಕರ್ನಾಟಕದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಸಂಸ್ಥೆಗಳ ಸಿಎಸ್‌ಆರ್ ನಿಧಿಯನ್ನು ಗರಿಷ್ಠ ಪ್ರಮಾಣದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸೆಳೆಯುವ ಬಗ್ಗೆ ಚರ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಐಟಿಬಿಟಿ, ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಹಾಗೂ ಕೌಶಲಾಭಿವೃದ್ಧಿ ಇಲಾಖೆ ಒಳಗೊಂಡಂತೆ ಒಂದು ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಸಿಎಸ್‌ಆರ್ ನಿಧಿಯ ಸದ್ಬಳಕೆಯ ಬಗ್ಗೆ ಶಿಕ್ಷಣ ಇಲಾಖೆ ತತ್‌ಕ್ಷಣವೇ ಒಂದು ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಲಾಗಿದೆ.
ಸಭೆಯಲ್ಲಿ ಮಾತನಾಡಿದ ಡಿ. ಕೆ. ಶಿವಕುಮಾರ್, ಗ್ರಾಮದಿಂದ ನಗರಕ್ಕೆ ವಲಸೆ ತಡೆಗೆ ಗ್ರಾಮ ಮಟ್ಟದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಪ್ರತಿ ಎರಡು ಅಥವಾ ಮೂರು ಗ್ರಾಪಂನಲ್ಲಿ ಎರಡು ಅಥವಾ ಮೂರು ಎಕ್ರೆಗಿಂತ ಹೆಚ್ಚು ಜಾಗವಿರುವ ಶಾಲೆಯೊಂದನ್ನು ಗುರುತಿಸಿ ಖಾಸಗಿ ಕಂಪೆನಿಗಳ ನೆರವಿನಿಂದ ಒಂದೇ ಮಾದರಿಯ ಕಟ್ಟಡ ನಿರ್ಮಾಣ ಮಾಡುವ ಚಿಂತನೆ ನಡೆಸಿದ್ದೇವೆ. ಹಾಗೆಯೇ ಶಾಲೆಗಳಿಗೆ ಕಂಪ್ಯೂಟರ್ ಪ್ರಯೋಗಾಲಯ, ಟಿಂಕರಿಂಗ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಹೆಚ್ಚುವರಿ ಕಟ್ಟಡ, ಅಂಗನವಾಡಿ ಕೇಂದ್ರ ಸ್ಥಾಪನೆ, ಶಿಕ್ಷಕರು, ವೃತ್ತಿಪರ ಶಿಕ್ಷಣ ನೀಡಲು ಸಿಎಸ್‌ಆರ್ ನಿಧಿಯನ್ನು ಬಳಕೆ ಮಾಡಲು ಚಿಂತಿಸಿದ್ದೇವೆ ಎಂದು ಹೇಳಿದರು.
ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ. ಕೆ. ಶಿವಕುಮಾರ್, ಸಿಎಸ್‌ಆರ್ ಹಣದ ಮೂಲಕ ನೂತನ ಶಾಲೆಗಳನ್ನು ನಿರ್ಮಾಣ ಮಾಡಬೇಕು ಹಾಗೂ ಸದ್ಬಳಕೆ ಹೇಗೆ ಮಾಡಬೇಕು ಎಂಬುದಾಗಿ ಸರಕಾರ ಯೋಜನೆ ರೂಪಿಸುತ್ತಿದೆ. ನನ್ನದೂ 3 ಶಿಕ್ಷಣ ಸಂಸ್ಥೆಗಳಿದ್ದು ಪಂಚಾಯತ್ ಮಟ್ಟದಲ್ಲಿ 3 ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.