ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಸಿ.ಟಿ.ರವಿ ಮನವಿ
Team Udayavani, Aug 8, 2021, 6:37 AM IST
ಬೆಂಗಳೂರು: ಕೇಂದ್ರ ಸರಕಾರ “ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ’ ಹೆಸರನ್ನು “ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ’ ಎಂದು ಬದಲಿಸಿದಂತೆಯೇ ರಾಜ್ಯದಲ್ಲಿ “ಇಂದಿರಾ ಕ್ಯಾಂಟೀನ್’ ಹೆಸರನ್ನು ಬದಲಾಯಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ.
ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಇಂಥ ಕ್ರಮವು ದ್ವೇಷದ ರಾಜಕಾರಣವಾದೀತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ಗಾಂಧಿ ಕ್ಯಾಂಟೀನ್ ಹೆಸರನ್ನು ಬದಲಿಸಿದರೆ ಅದನ್ನು ನೋಡಿಕೊಂಡು ಕುಳಿತಿರಲು ನಾವ್ಯಾರೂ ಕೈಗೆ ಬಳೆ ತೊಟ್ಟಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದ ಸಿ.ಟಿ.ರವಿ, ಇಂದಿರಾ ಕ್ಯಾಂಟಿನ್ ಹೆಸರನ್ನು “ಅನ್ನಪೂರ್ಣೇಶ್ವರಿ ಕ್ಯಾಂಟೀನ್’ ಎಂದು ಬದಲಾಯಿಸಬೇಕು. ಕನ್ನಡಿಗರು ಊಟ ಮಾಡುವಾಗ ಯಾಕೆ ಇಂದಿರಾ ಗಾಂಧಿ ಮೂಲಕ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.