ಕರಾವಳಿ ರೈತರಿಗೆ ಸಾಗುವಳಿ ಚೀಟಿ: ಅಶೋಕ್ ಕುಮಾರ್ ರೈ ಆಗ್ರಹ
Team Udayavani, Feb 19, 2024, 11:02 PM IST
ಬೆಂಗಳೂರು: ಸರಕಾರಿ ಜಾಗದ ಪಕ್ಕದ ಕುಮ್ಕಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಅಕ್ರಮ-ಸಕ್ರಮ ಅನ್ವಯಿಸಿ, ಸಾಗುವಳಿ ಚೀಟಿ ನೀಡಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಗ್ರಹಿಸಿದರು.
ಗಮನ ಸೆಳೆಯುವ ಸೂಚನೆ ವೇಳೆ ವಿಷಯ ಪ್ರಸ್ತಾವಿಸಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಹಳ ರೈತರು ಈ ರೀತಿ ಸಾಗುವಳಿ ಮಾಡುತ್ತಿದ್ದು, ಕುಮ್ಕಿ ಜಮೀನಿನ ವಿಚಾರವು ಸುಪ್ರೀಂ ಕೋರ್ಟ್‌ನಲ್ಲಿದೆ. ಇದನ್ನೇ ನೆಪ ಮಾಡಿಕೊಂಡು ಅಕ್ರಮ-ಸಕ್ರಮ ಕಡತಗಳು ಬಾಕಿ ಉಳಿಯುತ್ತಿವೆ. ಪಹಣಿಯಲ್ಲಿ ಸರಕಾರಿ ಜಾಗ ಎಂದು ಇರುತ್ತದೆಯೇ ಹೊರತು ಕುಮ್ಕಿ ಎಂದು ಇರುವುದಿಲ್ಲ. ಇಂತಹ ಜಾಗಗಳಿಗೆ ಸಾಗುವಳಿ ಚೀಟಿ ಕೊಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಬಿಜೆಪಿಯ ಶಿವರಾಂ ಹೆಬ್ಬಾರ್ ಕೂಡ ಧ್ವನಿಗೂಡಿಸಿದರು.
ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.