Revenue ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ: ಕೃಷ್ಣ ಬೈರೇಗೌಡ
Team Udayavani, Nov 20, 2023, 10:13 PM IST
ಬೆಂಗಳೂರು: ತಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಮತ್ತು ಭ್ರಷ್ಟ ಅಧಿಕಾರಿಗಳಿಗೆ ಕಾನೂನಿನ ರುಚಿಯನ್ನೂ ತೋರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಆರು ತಿಂಗಳಾದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಧಿಕಾರಿಗಳ ಕಾರ್ಯವೈಖರಿಯನ್ನು ಬದಲಿಸಲು ಸಾಕಷ್ಟು ಶ್ರಮಿಸಲಾಗಿದೆ. ಜನರ ನೂರಾರು ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಬಗೆಹರಿಸಲಾಗಿದೆ.ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಸುಮಾರು 62,000 ತಕರಾರು ಅರ್ಜಿಗಳು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ವಿಲೇಯಾಗದೆ ಬಾಕಿ ಉಳಿದಿದ್ದವು. ನಾನು ಸಚಿವನಾದ ಬಳಿಕ ಈ ಸಂಖ್ಯೆಯನ್ನು ಸುಮಾರು 30,000ಕ್ಕೆ ಇಳಿಸಲಾಗಿದೆ.
ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಇದ್ದ ಶೇ.60ರಷ್ಟು ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈ ಮೂಲಕ ರೈತರ ದಶಕಗಳ ಸಮಸ್ಯೆಗೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 6 ತಿಂಗಳಿಂದ ಪ್ರತಿ ತಿಂಗಳು ಜಿಲ್ಲಾಧಿಕಾರಿಗಳ ಸಭೆ ಕರೆದು ಪರಿಶೀಲಿಸಲಾಗಿದೆ. ಇಲಾಖೆಯಲ್ಲಿ ಅಕ್ರಮ ಎಸಗಿದವರು, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದೂ ಕಳೆದ ಐದು ವರ್ಷಗಳಿಂದ ಶಿಕ್ಷೆಗೆ ಒಳಗಾಗದಿದ್ದ, ಸುಮಾರು 350ಕ್ಕೂ ಅಧಿಕ ಭ್ರಷ್ಟ ಅಧಿಕಾರಿಗಳಿಗೆ ಸಂಬಂಧಪಟ್ಟ ಕಡತವನ್ನು 6 ತಿಂಗಳಲ್ಲಿ ವಿಲೇ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹಲವು ತಹಶೀಲ್ದಾರರು, ಉಪ ವಿಭಾಗಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳಿದ್ದು, ಹಲವರಿಗೆ ಕಡ್ಡಾಯ ನಿವೃತ್ತಿ, ಪಿಂಚಣಿಯಲ್ಲಿ ಕಡಿತ ಸಹಿತ ಹಲವು ಶಿಕ್ಷೆಗಳಿಗೆ ಗುರಿಪಡಿಸಲಾಗಿದೆ. ಇನ್ನುಳಿದ ಪ್ರಕರಣಗಳನ್ನೂ ಶೀಘ್ರ ಇತ್ಯರ್ಥ ಮಾಡಲಾಗುವುದು ಎಂದು ಹೇಳಿದ್ದಾರೆ.
ಒತ್ತುವರಿ ತೆರವಿಗೆ ವಿಶೇಷ ಕಾರ್ಯತಂತ್ರ
ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಸರಕಾರಿ ಆಸ್ತಿ ಖಾಸಗಿಯವರ-ಭೂಗಳ್ಳರ ಪಾಲಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಸರಕಾರದ ವಶಕ್ಕೆ ಪಡೆಯುವ ಸಲುವಾಗಿ ಜಿಲ್ಲಾಧಿಕಾರಿಗಳು ಹಾಗೂ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಈ ತಂಡಕ್ಕೆ ಪ್ರತಿ ವಾರಾಂತ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿದೆ. ಈ ತಂಡ ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಕೋಟಿ ರೂ. ಮೌಲ್ಯದ 60 ಎಕ್ರೆಗೂ ಅಧಿಕ ಒತ್ತುವರಿಯನ್ನು ತೆರವುಗೊಳಿಸಿದೆ. ಸರಕಾರಿ ಭೂಮಿಗಳನ್ನು ಗುರುತಿಸಿ ರಕ್ಷಿಸಲು ಅಧಿಕಾರಿಗಳ ಬೀಟ್ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.