Drought: ಬರ ಘೋಷಣೆಗೆ ಹಾಲಿ ನಿಯಮವೇ ಗತಿ
Team Udayavani, Aug 18, 2023, 6:08 AM IST
ಬೆಂಗಳೂರು: ಬರ ಘೋಷಣೆಗೆ ಈಗಿರುವ ಎನ್‌ಡಿಆರ್‌ಎಫ್ ಮಾನದಂಡಗಳು ರಾಜ್ಯ ಸರಕಾರದ ಕೈಗಳನ್ನು ಕಟ್ಟಿ ಹಾಕಿದ್ದು, ಬರ ನಿರ್ವಹಣೆ ಕೈಪಿಡಿಯ ಮಾರ್ಗಸೂಚಿಗಳನ್ನು ಬದಲಿಸಲು ಕೇಂದ್ರವನ್ನು ಕೋರಿದ್ದರೂ ತತ್‌ಕ್ಷಣಕ್ಕೆ ಅದು ಸಾಧ್ಯವಿಲ್ಲ.
ಇಡೀ ದೇಶಕ್ಕೆ ಅನ್ವಯ ಆಗುವ ರೀತಿಯಲ್ಲಿ ಜಾರಿಯಲ್ಲಿರುವ ಮಾರ್ಗಸೂಚಿಯನ್ನು ಕರ್ನಾಟಕಕ್ಕೆ ಸೀಮಿತವಾಗಿ ಬದಲಿಸಲು ನಿಯಮಗಳಲ್ಲಿ ಅವಕಾಶಗಳಿಲ್ಲ. ಹಾಗೊಂದು ವೇಳೆ ಪರಿಷ್ಕರಿಸಿದರೂ ಪ್ರಸಕ್ತ ಮುಂಗಾರು ಹಂಗಾಮಿನಿಂದಲೇ ಪರಿಷ್ಕೃತ ಮಾರ್ಗಸೂಚಿ ಜಾರಿಯಾಗುವುದೂ ಇಲ್ಲ. ಹೀಗಾಗಿ ಈಗಿರುವ ಮಾನದಂಡಗಳನ್ನು ಅನುಸರಿಸಿಯೇ ತೀರ್ಮಾನ ಕೈಗೊಳ್ಳುವ ಅನಿವಾರ್ಯ ಎದುರಾಗಿದೆ.
2009ರ ನವೆಂಬರ್‌ನಲ್ಲಿ ಬರ ನಿರ್ವಹಣ ಕೈಪಿಡಿ ಸಿದ್ಧವಾಗಿತ್ತು. 2016ರಲ್ಲಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಲಾಗಿತ್ತು. ಅದಾದ ಅನಂತರ ಮಾನದಂಡಗಳ ಪರಿಷ್ಕರಣೆ ಆಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣೆಯ ಕ್ರಿಯಾಯೋಜನೆಯಲ್ಲಿ ಬದಲಾವಣೆಗಳನ್ನು ಮಾಡಬಹುದೇ ವಿನಾ ಬರ ನಿರ್ವಹಣ ಕೈಪಿಡಿಯ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಅದರದ್ದೇ ಆದ ಮಾನದಂಡಗಳಿವೆ.
ಎನ್‌ಡಿಆರ್‌ಎಫ್ ನೆರವು
ಪ್ರಸ್ತುತ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳದಲ್ಲೂ ಮಳೆ ಕೈಕೊಟ್ಟಿದೆ. ಮುಂಗಾರು ಅವಧಿ ಮುಗಿಯುವ ವೇಳೆಗೆ ಬರಪೀಡಿತ ರಾಜ್ಯಗಳ ಸಂಖ್ಯೆ ಇನ್ನಷ್ಟು ಏರಲಿದೆ. ಕೇಂದ್ರ ಸರಕಾರವು ತನ್ನ ಖಜಾನೆಯಲ್ಲಿರುವ ಸಂಪನ್ಮೂಲವನ್ನು ಒಂದೇ ರಾಜ್ಯಕ್ಕೆ ಹಂಚಿಕೆ ಮಾಡಲು ಸಾಧ್ಯವಿಲ್ಲ. ಎನ್‌ಡಿಆರ್‌ಎಫ್ ಮೂಲಕ ತನ್ನ ಪಾಲಿನ ಪರಿಹಾರ ಕೂಡ ನೀಡಬೇಕಾಗುತ್ತದೆ. ಇದನ್ನೆಲ್ಲ ಗಮನದಲ್ಲಿ ಇರಿಸಿಕೊಂಡು ಇಡೀ ದೇಶಕ್ಕೆ ಅನ್ವಯ ಆಗುವ ರೀತಿಯಲ್ಲಿ ಮಾನದಂಡಗಳನ್ನು ನಿಗದಿಪಡಿಸುತ್ತದೆ. ಹವಾಮಾನ ಆಧಾರಿತ ಕೃಷಿ ವಲಯ ಅಥವಾ ಒಂದೊಂದು ರಾಜ್ಯಕ್ಕೆ ಒಂದೊಂದು ರೀತಿಯ ಮಾನದಂಡ ಮಾಡಲು ಸಾಧ್ಯವಿಲ್ಲ. ಬರಪೀಡಿತ ಪ್ರದೇಶಗಳನ್ನಾಗಲೀ, ನೆರೆಪೀಡಿತ ಪ್ರದೇಶಗಳನ್ನಾಗಲೀ ರಾಜ್ಯ ಸರಕಾರ ಘೋಷಣೆ ಮಾಡುವುದಾದರೂ ಕೇಂದ್ರ ಸರಕಾರದ ಮಾರ್ಗಸೂಚಿ ಅನುಸರಿಸಿಯೇ ಮಾಡಬೇಕು. ಅದನ್ನು ಮೀರಿ ಘೋಷಿಸಲು ನಿಯಮಗಳು ಒಪ್ಪುವುದಿಲ್ಲ.
ಉಳಿದ ರಾಜ್ಯಗಳೂ ಬರ ನಿರ್ವಹಣ ಕೈಪಿಡಿಯ ಮಾನದಂಡಗಳ ಪರಿಷ್ಕರಣೆಗೆ ಒತ್ತಡ ಹಾಕಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣ ಸಂಸ್ಥೆಯಿಂದ ಅಧ್ಯಯನ ನಡೆಸಿ ಶಿಫಾರಸುಗೊಳ್ಳಬೇಕು. ಅದನ್ನು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಸಹಕಾರ ಇಲಾಖೆಗಳು ಪರಿಶೀಲಿಸಿ ಸಂಪುಟ ಉಪಸಮಿತಿ ಮುಂದಿಟ್ಟು ಚರ್ಚಿಸಬೇಕು. ಬಳಿಕ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಈ ಪ್ರಕ್ರಿಯೆಗಳಿಗೆ ಸಮಯಾವಕಾಶ ಬೇಕಾಗುತ್ತದೆ. ಹೀಗಾಗಿ ಮಾನದಂಡ ಬದಲಿಸಲು ತತ್‌ಕ್ಷಣಕ್ಕಂತೂ ಸಾಧ್ಯವಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.
ಅಕ್ಟೋಬರ್ ಆರಂಭದವರೆಗೂ ಮುಂಗಾರು ಅವಧಿ ಇರಲಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿ ಕಾಲಕಾಲಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮಾಹಿತಿ ರವಾನಿಸಲಾಗುತ್ತಿದೆ. ಹವಾಮಾನ ವೀಕ್ಷಣ ಸಮಿತಿಗಳು ನಿಗಾ ಇಟ್ಟಿವೆ. ರಾಜ್ಯ ಕಾರ್ಯಕಾರಿ ಸಮಿತಿಯೂ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ.
– ರಶ್ಮಿ ಮಹೇಶ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ
ರಾಜ್ಯದಲ್ಲಿ ಮಳೆ ಕೊರತೆ ಆಗಿದ್ದರೂ ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರವೇ ಬರಪೀಡಿತ ಪ್ರದೇಶಗಳನ್ನು ಘೋಷಿಸಬೇಕಾಗುತ್ತದೆ. ಮುಂಗಾರು ಅವಧಿಯ ವಾಡಿಕೆ ಮಳೆ, ಸರಾಸರಿ ಮಳೆ ಹಾಗೂ ಕೊರತೆ, ಅಂತರ್ಜಲ ಮಟ್ಟ, ಒಣಹವೆ, ತೇವಾಂಶ, ಬೆಳೆನಷ್ಟ ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಎಲ್ಲದರ ಪ್ರಕ್ರಿಯೆ ನಡೆಯುತ್ತಿದ್ದು, ತಿಂಗಳಾಂತ್ಯಕ್ಕೆ ರಾಜ್ಯ ಸರಕಾರವು ಬರಪೀಡಿತ ಪ್ರದೇಶಗಳ ಘೋಷಣೆ ಮಾಡಬಹುದು.
– ಶ್ರೀನಿವಾಸ ರೆಡ್ಡಿ, ಕೆಎಸ್‌ಎನ್‌ಡಿಎಂಸಿ ಹಿರಿಯ ಸಲಹೆಗಾರ
ಶೇಷಾದ್ರಿ ಸಾಮಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.