ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
Team Udayavani, Nov 30, 2024, 1:20 AM IST
ಬೆಂಗಳೂರು: ಡಿಸೆಂಬರ್ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚು ಕಡಿತಗೊಳಿಸಿ ಆರ್ಥಿಕ ಸಂಕಷ್ಟದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಆರ್ಥಿಕ ನೆರವು ನೀಡಲು ಚಿಂತನೆ ನಡೆಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಂಪಿ ಕನ್ನಡ ವಿ.ವಿ.ಯು ಕನ್ನಡದ ಅಸ್ಮಿತೆಯಾಗಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ಸಂಕಷ್ಟಕ್ಕೊಳಗಾಗಿರುವುದು ನೋವು ತಂದಿದೆ ಎಂದರು.
ಮಂಡ್ಯ ಸಾಹಿತ್ಯ ಸಮ್ಮೇಳನದ ಭೋಜನವನ್ನು ಸರಳವಾಗಿ ಏರ್ಪಡಿಸಲು, ಸಾಧ್ಯವಾದಷ್ಟು ಇನ್ನಿತರ ಖರ್ಚುಗಳನ್ನು ಕಡಿತಗೊಳಿಸಿ ಉಳಿತಾಯ ಮೊತ್ತವನ್ನು ಹಂಪಿ ಕನ್ನಡ ವಿ.ವಿ.ಗೆ ನೀಡುವ ಆಲೋಚನೆ ಇದೆ. ಹಂಪಿ ವಿ.ವಿ.ಗೆ ಆರ್ಥಿಕವಾಗಿ ನೆರವಾಗುವ ವಿಚಾರದಲ್ಲಿ ಸಾಹಿತ್ಯ ಸಮ್ಮೇಳನದ ಕೋಶಾಧಿಕಾರಿಗಳಾದ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಪರಿಷತ್ತಿನ ಪರವಾಗಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ಸಮ್ಮೇಳನದಲ್ಲಿ ಖರ್ಚುಗಳನ್ನು ಕಡಿತಗೊಳಿಸಿ ಹಂಪಿ ವಿ. ವಿ.ಗೆ ಸಹಾಯ ಮಾಡಿದಲ್ಲಿ ಸಮ್ಮೇಳನದ ಆಚರಣೆ ಅರ್ಥಪೂರ್ಣವಾಗಲಿದೆ ಎಂಬ ಭಾವನೆಯಿಂದ ಈ ಸಲಹೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.