Cauvery issue; ಹೋರಾಟದ ನಡುವೆ ರಾಜ್ಯಕ್ಕೆ ಹಿನ್ನಡೆ; ಮತ್ತೆ 18 ದಿನ ನೀರು ಹರಿಸಲು ಸೂಚನೆ
Team Udayavani, Sep 26, 2023, 3:37 PM IST
ನವದೆಹಲಿ: ಕಾವೇರಿ ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಿತು. ಈ ಸಭೆಯ ಬಳಿಕ ಮತ್ತೆ 18 ದಿನ ತಮಿಳುನಾಡಿಗೆ ನೀರು ಹರಿಸಲು ಆದೇಶಿಸಲಾಗಿದೆ.
ವರ್ಚುವಲ್ ಮೂಲಕ ನಡೆದ ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿ, ವಾಸ್ತವ ಸ್ಥಿತಿಯನ್ನು ತಿಳಿಸಿದರು. ಎರಡು ಕಡೆಯ ವಾದವನ್ನು ಆಲಿಸಿದ ಸಮಿತಿ ತಮಿಳುನಾಡಿಗೆ ಮುಂದಿನ 18 ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ್ಕೆ ಆದೇಶ ನೀಡಿದೆ.
ಬಿಳಿಗುಂಡ್ಲುವಿನಲ್ಲಿ ಸೆ.28ರಿಂದ ಅ.15 ರವರೆಗೆ 3000 ಕ್ಯೂಸೆಕ್ಸ್ ನೀರನ್ನು ಹೊರ ಬಿಡುವಂತೆ ಶಿಫಾರಸ್ಸು ಮಾಡಿದೆ.
ರಾಜ್ಯದ ವಾದವೇನು?
ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಅಂಶವನ್ನು ಸಮಿತಿ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ರಾಜ್ಯದ ತಜ್ಞರು ಹೇಳಿದರು. ಅಲ್ಲದೆ ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಅಥವಾ ಅದರ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಬೇಕಾದ ಹರಿವುಗಳಿಗೆ ಕೊಡುಗೆ ನೀಡುವುದಿಲ್ಲ ಎಂದು ಹೇಳಿದರು.
ತಮಿಳುನಾಡು ಕೂಡಾ ತನ್ನದೇ ವಾದ ಮಂಡಿಸಿದ್ದು, ಕರ್ನಾಟಕವೂ ಸಹ ಸಂಕಷ್ಟದ ಅನುಪಾತದ ಆಧಾರದ ಮೇಲೆ ನೀರಾವರಿ ಪೂರೈಕೆಯನ್ನು ಕಡಿಮೆ ಮಾಡಬೇಕು. ಕರ್ನಾಟಕವು ತಕ್ಷಣವೇ ಕೊರತೆಯ ಪ್ರಮಾಣವನ್ನು ಬಿಡುಗಡೆ ಮಾಡಬೇಕು ಮತ್ತು ಸಂಕಷ್ಟದ ಅನುಪಾತಕ್ಕೆ ಅನುಗುಣವಾಗಿ ಮತ್ತಷ್ಟು ಹರಿವುಗಳನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.