ಮೇ 14ರ ವರೆಗೆ ರಾಜ್ಯಕ್ಕೆ ಅಸಾನಿ ಮಳೆ; ಹಗುರದಿಂದ ಸಾಮಾನ್ಯ ವರ್ಷಧಾರೆ
Team Udayavani, May 10, 2022, 2:00 AM IST
ಬೆಂಗಳೂರು: ಬಂಗಾಲ ಕೊಲ್ಲಿಯಲ್ಲಿ ಉದ್ಭವಿಸಿರುವ ಅಸಾನಿ ಚಂಡ ಮಾರುತದಿಂದಾಗಿ ರಾಜ್ಯದಲ್ಲಿ ಮುಂದಿನ
ನಾಲ್ಕು ದಿನ, ಮೇ 14ರ ವರೆಗೆ ಮಳೆ ಯಾಗುವ ಸಾಧ್ಯತೆಗಳಿವೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ನೆರೆಯ ರಾಜ್ಯಗಳಂತೆ ಭಾರೀ ಮಳೆಯಾಗದು ಎಂದು ಇಲಾಖೆ ತಿಳಿಸಿದೆ.
ಒಂದು ವಾರದಿಂದ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇದು ಮುಂದಿನ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಚಂಡಮಾರುತದ ಪರಿಣಾಮ ದಿಂದ ಮಳೆಯಾದರೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶದಲ್ಲಿ ಚಂಡಮಾರುತದ ಪ್ರಭಾವ ಇರಲಿದೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ರಾಜ್ಯದಲ್ಲಿ ಮೇ 14ರ ವರೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಗಳಿವೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನಿ ಎ. ಪ್ರಸಾದ್ ತಿಳಿಸಿದ್ದಾರೆ.
ದೊಡ್ಡ ಮಟ್ಟದ ಪರಿಣಾಮವಿಲ್ಲ
ರಾಜ್ಯಕ್ಕೆ ಚಂಡಮಾರುತದ ಪರಿಣಾಮ ದೊಡ್ಡ ಮಟ್ಟದಲ್ಲಿ ಇರುವುದಿಲ್ಲ. ಆದರೆ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣ ಇರಲಿದೆ, ಗರಿಷ್ಠ 5 ಸೆಂ.ಮೀ.ವರೆಗೆ ಮಳೆಯಾಗಬಹುದು ಎಂದು ತಿಳಿಸಿದ್ದಾರೆ.
ಮುಂಗಾರು ಆಗಮನಕ್ಕೆ ಪೂರಕ
ಬೇಸಗೆಯ ಕೊನೆಯ ಅವಧಿಯಲ್ಲಿ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಅದರಿಂದ ಮುಂಗಾರು ಮಾರುತಗಳ ಆಗಮನಕ್ಕೆ ಪೂರಕ ವಾತಾವರಣ ನಿರ್ಮಾಣವಾಗುತ್ತದೆ. ಈಗ ವಾಯುಭಾರ ಕುಸಿತವಾಗಿ ಅಸಾನಿ ಚಂಡಮಾರುತ ಉದ್ಭವಿಸಿರುವುದರಿಂದ ಮುಂಗಾರು ಮಳೆ ತರುವ ಮೋಡಗಳು ಆಗಮಿಸಲು ಉತ್ತಮ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.