ಫೋನ್ ಕದ್ದಾಲಿಕೆಯನ್ನು ಬಿಜೆಪಿ ಮಾಡುವುದಿಲ್ಲ, ಕಾಂಗ್ರೆಸ್ ಮಾಡುತ್ತದೆ : ಅಶ್ವತ್ಥ್ ನಾರಾಯಣ
Team Udayavani, Jul 20, 2021, 5:35 PM IST
ಬೆಂಗಳೂರು : ಕಾಂಗ್ರೆಸ್ ಹಾಗೂ ಇತರ ಪ್ರತಿಪಕ್ಷಗಳು ಫೋನ್ ಕದ್ದಾಲಿಕೆ ಆಗಿದೆ ಎಂದು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಆರೊಪ ಮಾಡಿದವರು ಯಾವುದೇ ಸಾಕ್ಷಿ ನೀಡಿಲ್ಲ. ಈ ಬಗ್ಗೆ ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ಧವಿದೆ ಎಂದು ಮಂಗಳವಾರ ಡಾ. ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ
ನಮ್ಮ ಪಕ್ಷ ಈ ರೀತಿಯ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಆ ಕೆಲಸ ಮಾಡುತ್ತದೆ. ಯುಪಿಎ ಸರ್ಕಾರದಲ್ಲಿ ಫೋನ್ ಕದ್ದಾಲಿಕೆಗೆ ಸಾವಿರಾರು ರೂ..ಖರ್ಚು ಮಾಡುತ್ತಿರುವುದಾಗಿ ಅಂದಿನ ಸರ್ಕಾರದಲ್ಲಿ ಮಂತ್ರಿಗಳಾದವರೇ ಹೇಳಿದ್ದರು. ಡಾಟಾ ಲೀಕ್ ಆಗಿದ್ದರೆ ಅದಕ್ಕೆ ಕೇಂದ್ರ ಸರ್ಕಾರ ಹೇಗೆ ಹೊಣೆಯಾಗುತ್ತದೆ ಎಂದು ಕಿಡಿ ಕಾರಿದ್ದಾರೆ.
ವಾಟ್ಸ್ ಆಪ್ ನಿಂದ ಕದ್ದಾಲಿಸಲು ಸಾಧ್ಯವಿಲ್ಲ ಎಂದು ಕಪಿಲ್ ಸಿಬಲ್ ಅವರೇ ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ. ಪೆಗಾಸಿಸ್ ಸಂಸ್ಥೆ ಹೊರದೇಶಗಳಲ್ಲಿ ಈ ರೀತಿ ಚಟುವಟಿಕೆಗಳನ್ನು ನಡೆಸುತ್ತದೆ. ದೇಶದ್ರೋಹಿಗಳು ನಮ್ಮ ಸರ್ಕಾರದ ವಿರುದ್ಧ ಅಪ ಪ್ರಚಾರ ಮಾಡುವುದನ್ನು ಖಂಡಿಸುತ್ತೇವೆ ಎಂದು ಡಾ. ಅಶ್ವತ್ಥ್ ನಾರಾಯಣ ಹೇಳಿದರು.
ಪೆಗಾಸಿಸ್ ಮತ್ತು ಅಮ್ನೆಸ್ಟಿ ಸಂಸ್ಥೆಗಳು ನಮ್ಮ ದೇಶದ ಆಂತರಿಕ ವಿಚಾರಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್, ಎಡ ಪಕ್ಷಗಳು ಸದನ ನಡೆಯದಂತೆ ನಡೆದುಕೊಂಡಿರುವುದು ಖಂಡನೀಯ. ಯುಪಿಎ ಅವಧಿಯಲ್ಲಿ ಪ್ರತಿ ತಿಂಗಳು 9000, ಫೋನ್ ಹಾಗೂ 500 ಇಮೇಲ್ ಕದ್ದಾಲಿಕೆ ನಡೆಸಿರುವ ದಾಖಲೆ ಇದೆ.
ಕೇಂದ್ರ ಸರ್ಕಾರ ಕದ್ದಾಲಿಕೆ ಮಾಡಿರುವ ದಾಖಲೆ ಇಲ್ಲ. ಮಹತ್ವದ ಬಿಲ್ ಗಳು ಬರುತ್ತಿರುವ. ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆ ನಡೆದಿರುವುದು ಸರಿಯಲ್ಲ. ಕೊವಿಡ್ ಸಂದರ್ಭವನ್ನು ಯಶಸ್ವಿಯಾಗಿ ನಿಭಾಯಿಸಿರುವುದನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.