ಡಿ.ಜೆ. ಹಳ್ಳಿ ಗಲಭೆ ಪ್ರಕರಣ; ಜಮೀರ್, ರಿಜ್ವಾನ್ ವಿಚಾರಣೆ
Team Udayavani, Oct 14, 2020, 6:10 AM IST
ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ವು ಕಾಂಗ್ರೆಸ್ ಶಾಸಕ ರಾದ ಜಮೀರ್ ಅಹ್ಮದ್ ಖಾನ್ ಮತ್ತು ರಿಜ್ವಾನ್ ಅರ್ಷದ್ ಅವರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರೂ ಶಾಸಕರಿಗೆ ಎನ್‌ಐಎ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಮಂಗಳ ವಾರ ಹಾಜರಾಗಿದ್ದರು. ಅವರನ್ನು ಹಲವು ತಾಸುಗಳ ಕಾಲ ವಿಚಾರಣೆ ಗೊಳಪಡಿಸಿದ ಅಧಿಕಾರಿಗಳು ಹೇಳಿಕೆ ದಾಖಲಿಸಿ ಕೊಂಡಿದ್ದಾರೆ. ಸೋಮವಾರ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ವಿಶ್ವಸನೀಯ ಮೂಲಗಳು ಖಚಿತಪಡಿಸಿವೆ.
ಪ್ರಕರಣ ಸಂಬಂಧ ಎರಡು ದಿನ ಪ್ರತ್ಯೇಕ ಕಡೆ ದಾಳಿ ನಡೆಸಿ ಹಲವು ದಾಖಲೆ ಸಂಗ್ರಹಿಸಿರುವ ಅಧಿಕಾರಿಗಳು, ಎರಡನೇ ಹಂತ ದಲ್ಲಿ ಸಾಕ್ಷಿಗಳು ಮತ್ತು ಕೆಲವು ಸ್ಥಳೀಯರನ್ನು ವಿಚಾರಣೆ ನಡೆಸುವ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವರನ್ನು ವಿಚಾರಣೆ ನಡೆಸಿದ್ದು, ಅದರ ಭಾಗವಾಗಿಯೇ ಶಾಸಕರನ್ನು ಕರೆದು ವಿಚಾರಣೆ ನಡೆಸಿದೆ.
ಸಿಸಿಬಿಯು ಈಗಾಗಲೇ ಮಾಜಿ ಮೇಯರ್ ಸಂಪತ್‌ರಾಜ್, ಅವರ ಆಪ್ತರಾದ ಸಂತೋಷ್‌ಕುಮಾರ್, ಅರುಣ್ ಮನೋರಾಜ್, ಜುನೈದ್‌ರನ್ನು ಆರೋಪಿಗಳನ್ನಾಗಿಸಿದೆ. ಪ್ರಕರಣದಲ್ಲಿ ಈ ಮೂವರು ಪ್ರಮುಖ ಪಾತ್ರ ವಹಿಸಿದ್ದು, ಇವರ ಸಹಿತ ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲು ಎನ್‌ಐಎ ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.
ಸರಣಿ ಪ್ರಶ್ನೆಗಳು
ಗಲಭೆ ಪ್ರಕರಣದ ಬಳಿಕ ನಡೆದ ವಿದ್ಯಮಾನಗಳಲ್ಲಿ ನೀವು ಕಾಣಿಸಿಕೊಂಡಿದ್ದೀರಿ. ಗಲಭೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಯಾವ ಉದ್ದೇಶಕ್ಕೆ ಗಲಭೆ ನಡೆದಿದೆ? ಎರಡೂ ಪ್ರದೇಶಗಳ ಸಂತ್ರಸ್ತರು ನಿಮ್ಮನ್ನು ಸಂಪರ್ಕಿಸಿ ದ್ದರೇ? ಎಂಬುದು ಸೇರಿದಂತೆ ಸರಣಿ ಪ್ರಶ್ನೆಗಳನ್ನು ಜಮೀರ್ ಮತ್ತು ರಿಜ್ವಾನ್ ಅರ್ಷದ್ ಅವರಿಗೆ ತನಿಖಾಧಿಕಾರಿಗಳು ಕೇಳಿ ಲಿಖಿತ ಉತ್ತರ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.