ಕೋರ್ಟ್ಗೆ ಹಾಜರಾದ ಡಿ.ಕೆ. ಶಿವಕುಮಾರ್
Team Udayavani, Apr 23, 2022, 6:45 AM IST
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದರು.
ಖುದ್ದು ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಶಿವಕುಮಾರ್ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಜೂ. 2ಕ್ಕೆ ಮುಂದೂಡಿತು.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿತ್ತು. ಕೋವಿಡ್ ಹೆಚ್ಚಳವಾಗಿದ್ದ ವೇಳೆ ಪಾದಯಾತ್ರೆ ಕೈಗೊಂಡಿದ್ದರಿಂದ ಕೋವಿಡ್ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.
ರೈತರ ಜತೆ ರಾಜಭವನ ಚಲೋ ಘಟನೆಯಲ್ಲಿಯೂ ಶಿವಕುಮಾರ್ ಅವರಿಗೆ ನ್ಯಾಯಾಲಯ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿಯೂ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
Belagavi: ಪ್ರಭಾಕರ ಕೋರೆಯವರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.