D.K. Shivakumar ಪ್ರಕರಣ ಹಿಂಪಡೆದಿದ್ದನ್ನು ನ್ಯಾಯಾಲಯ ತಿರಸ್ಕರಿಸಲಿದೆ: ಜೋಶಿ ವಿಶ್ವಾಸ
ಕೀಳುಮಟ್ಟಕ್ಕೆ ಇಳಿದಿರುವುದಕ್ಕೆ ರಾಹುಲ್ ಗಾಂಧಿ ಹೇಳಿಕೆಯೇ ಸಾಕ್ಷಿ
Team Udayavani, Nov 24, 2023, 3:59 PM IST
ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬಂಧಿಸಿ ಸಿಬಿಐನಲ್ಲಿ ಸಲ್ಲಿಕೆಯಾಗಿದ್ದ ಪ್ರಕರಣವನ್ನು ರಾಜ್ಯ ಸಚಿವ ಸಂಪುಟ ಸಭೆಯು ಹಿಂಪಡೆದಿರುವುದು ನೈತಿಕವಾಗಿ ಮತ್ತು ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ತಿಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಇದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿವೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ದೋಷಾರೋಪಣ ಪಟ್ಟಿ ಸಲ್ಲಿಸುವ ಹಂತದಲ್ಲಿ ಪ್ರಕರಣ ವಾಪಸ್ ಪಡೆದಿರುವುದು ಸರಿಯಲ್ಲ. ಸಂಬಂಧಿಸಿದ ಏಜೆನ್ಸಿಗಳು ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.ಸಚಿವ ಸಂಪುಟದ ಈ ನಿರ್ಧಾರವನ್ನು ನ್ಯಾಯಾಲಯ ತಿರಸ್ಕರಿಸಲಿದೆ ಎನ್ನುವ ವಿಶ್ವಾಸವಿದೆ ಎಂದರು.
ಡಿಸಿಎಂ ಡಿ.ಕೆ. ಶಿವಕುಮಾರ ವಿರುದ್ಧ ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತದೆ. ಈಗಾಗಲೇ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ಕೊಟ್ಟಿದೆ. ದೋಷಾರೋಪ ಪಟ್ಟಿ ಸಲ್ಲಿಕೆಯ ಹಂತದಲ್ಲಿರುವುದರಿಂದ ತಾಂತ್ರಿಕ ಆಧಾರ ಮೇಲೆ ಹೋಗುವುದಿಲ್ಲ. ಒಂದು ವೇಳೆ ಅದು ತಪ್ಪಾಗಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ಆದರೆ ರಾಜಕೀಯ ಅಧಿಕಾರ ನಡೆಸುವುದು ಸರಿಯಲ್ಲ. ಯಾವ ಸಂಪುಟದಲ್ಲಿ ಡಿಕೆಶಿ ಉಪಮುಖ್ಯಮಂತ್ರಿ ಆಗಿದ್ದಾರೆ
ಆ ಸಂಪುಟದಿಂದ ಅವರನ್ನು ನಾಮಕಾವಾಸ್ತೇ ಒಂದುದಿನ ಹೊರಗೆ ಇಟ್ಟು ಶಿಫಾರಸ್ಸು ವಾಪಸ್ ಪಡೆಯುವುದರ ಅರ್ಥವೇನು? ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ ಅನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.
ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದಲ್ಲೇ ದೊಡ್ಡ ಪ್ರಮಾಣದ ಗೊಂದಲ ಸೃಷ್ಟಿಯಾಗುತ್ತಿದೆ. ಇದು ಆಡಳಿತ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ಜಾತಿ ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಅದನ್ನು ಮಾಡಬೇಕಿರುವುದು ಕೇಂದ್ರ ಸರ್ಕಾರ. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ ಎಂದರು.
ಸರ್ಕಾರದಲ್ಲಿ ಗೊಂದಲ
ಜಾತಿ ಜನಗಣತಿ ವರದಿಯ ಮಾಯವಾಗಿದೆ ಎಂದು ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರೇ ಪತ್ರ ಬರೆದಿದ್ದಾರೆ. ಈ ವಿಚಾರದ ಬಗ್ಗೆ ಸರ್ಕಾರದಲ್ಲೇ ಸಹಮತವಿಲ್ಲ. ಡಿ.ಕೆ. ಶಿವಕುಮಾರ, ಶ್ಯಾಮನೂರು ಶಿವಶಂಕರಪ್ಪ ಮೊದಲಾದವರಿಂದ ಇದರ ಬಗ್ಗೆ ವಿರೋಧವಿದೆ. ಈ ಕುರಿತು ವರದಿ ಜಾರಿಯಾಗಬಾರದೆಂದು ಅವರಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರದಲ್ಲಿ ಗೊಂದಲ, ಭಿನ್ನಾಭಿಪ್ರಾಯ ಇರುವಾಗ ವರದಿ ಹೇಗೆ ಸಲ್ಲಿಸುತ್ತಾರೆ?. ಕೆಲ ಶಾಸಕರನ್ನು ಎತ್ತಿಕಟ್ಟಿ ಸಿಎಂ ಸಿದ್ಧರಾಮಯ್ಯ ತಮ್ಮ ಪಾರುಪತ್ಯ ಮೆರೆಯುತ್ತಿದ್ದಾರೆ. ಜನರ ಹಿತದೃಷ್ಟಿಯಿಂದ ಸರ್ಕಾರ ಸರಿಯಾಗಿ ನಡೆಸಬೇಕು. ಆದರೆ ಸಿದ್ಧರಾಮಯ್ಯ 20 ಶಾಸಕರನ್ನು ಮೈಸೂರಿಗೆ ಕಳಿಸುವ ಪ್ರಯತ್ನ ಮಾಡಿದರು. ಈಗ ಇನ್ನೂ ಹಲವು ಶಾಸಕರು ವಿದೇಶ ಪ್ರವಾಸದಲ್ಲಿದ್ದಾರೆ. ಈ ರೀತಿ ಗೊಂದಲ ಸೃಷ್ಟಿಸಿದ್ದಾರೆ. ಇದು ಸರಿಯಲ್ಲ. ಗೊಂದಲಗಳಿಲ್ಲದೆ ಗೊಂದಗಳಿಂದಾಗಿ ಕಾಂಗ್ರೆಸ್ ಸರ್ಕಾರದಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮಗಳು ನಿಂತು ಹೋಗಿವೆ. ಬಹಳಷ್ಟು ಭಾಗದಲ್ಲಿ ಸಚಿವರು ತಮ್ಮ ಕ್ಷೇತ್ರಗಳಿಗೆ ಸೀಮಿತವಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿತ ಕಂಡಿದೆ. ಸರ್ಕಾರ ಈ ನ್ಯೂನತೆಗಳನ್ನು ಸರಿಪಡಿಸಬೇಕು ಎಂದರು.
ರಾಹುಲ್ ಕೀಳುಮಟ್ಟಕ್ಕೆ
ಪ್ರಧಾನಿ ಮೋದಿ ಅವರನ್ನು ಅಪಶಕುನ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪ್ರತಿಕ್ರಿಯಿಸದಿರುವುದೆ ಉತ್ತಮ. ಅವರು ಯಾವ ಕೀಳುಮಟ್ಟಕ್ಕೆ ಇಳಿಯುತ್ತಾರೆ ಅನ್ನುವುದಕ್ಕೆ ಈ ಹೇಳಿಕೆಯೇ ಸಾಕ್ಷಿ. ರಾಹುಲ್ ಗೆ ಹೊಸ ವಿಷಯ ಬರೆದುಕೊಡುವವರೆಗೂ ಅವರು ಏನೇನೋ ಮಾತನಾಡುತ್ತಾರೆ. ದೇಶದಲ್ಲಷ್ಟೇ ಅಲ್ಲದೆ ಇಡೀ ವಿಶ್ವದಲ್ಲಿ ಮೋದಿ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಅವರ ವಿರುದ್ಧ ಹೇಳಿಕೆ ನೀಡಿದಷ್ಟು ಅವರ ಮೇಲೆ ಜನರ ಆಶೀರ್ವಾದ ಹೆಚ್ಚಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.