D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ
ಮುಖಭಂಗ ತಪ್ಪಿಸಲು ಬಿಜೆಪಿಯಿಂದ ಹೊಸ ತಂತ್ರ ಎಂದ ಉಪಮುಖ್ಯಮಂತ್ರಿ
Team Udayavani, May 7, 2024, 6:45 AM IST
ಬೆಂಗಳೂರು: “ನನಗೂ ಹಾಸನದ ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ದೇವರಾಜೇ ಗೌಡರ ಪತ್ರಿಕಾಗೋಷ್ಠಿಗೆ ಸ್ಪಷ್ಟನೆ ನೀಡಿದ ಅವರು, ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ.
ಈಗ ಆಗಿರುವ ಹಾನಿ ಸರಿಪಡಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಆಪಾದಿಸಿದ್ದಾರೆ.
ದೇವರಾಜೇಗೌಡ ಈ ಹಿಂದೆಯೇ ತಮ್ಮಲ್ಲಿ ಪೆನ್ ಡ್ರೈವ್ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಮಾಡುವುದೆಲ್ಲ ಮಾಡಿ ಈಗ ನನ್ನ ವಿರುದ್ಧ ಆಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ನಾನೀಗ ಬೆಂಗಳೂರಿನಿಂದ ಹೊರಗೆ ಇದ್ದು, ಬಂದ ಅನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.