ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿಗೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್
ಸಿದ್ದರಾಮೋತ್ಸವದ ಬಳಿಕ ಆ್ಯಕ್ಟಿವ್ ಆದ ಮತ್ತೊಂದು ಬಣ
Team Udayavani, Aug 9, 2022, 11:41 AM IST
ಬೆಂಗಳೂರು: ಸಿದ್ದರಾಮಯ್ಯ ಅಮೃತ ಮಹೋತ್ಸವದ ಬೆನ್ನಲ್ಲೇ ಕಾಂಗ್ರೆಸ್ ನ ಇನ್ನೊಂದು ಬಣ ಚುರುಕುಗೊಂಡಿದ್ದು, ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ.
ಆಗಸ್ಟ್ 15 ರಂದು ಸ್ವಾತಂತ್ರ್ಯ ನಡಿಗೆ ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದಾರೆ. ಸುಮಾರು ಒಂದು ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುವಂತೆ ಖುದ್ದು ಡಿ.ಕೆ.ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿಯವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ.
ಇದನ್ನೂ ಓದಿ:40 ದಿನದ ಬಳಿಕ ಸಿಎಂ ಶಿಂಧೆ ಸಂಪುಟ ವಿಸ್ತರಣೆ; 18 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ
ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಉದ್ಘಾಟನೆಗೆ ಪ್ರಿಯಾಂಕಾ ಗಾಂಧಿ ಆಗಮಿಸುವ ವಿಚಾರ ನಾಳೆ ಅಧಿಕೃತಗೊಳ್ಳಲಿದೆ.
ಪಕ್ಷದ ವೇದಿಕೆಯಲ್ಲಿ ಆಯೋಜಿಸಿರುವ ಅಧಿಕೃತ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಆಹ್ವಾನಿಸುವ ಮೂಲಕ ತಮ್ಮದು ಪಕ್ಷಪೂಜೆ ಎಂಬ ಸಂದೇಶ ನೀಡುವುದಕ್ಕೆ ಶಿವಕುಮಾರ್ ಮುಂದಾಗಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.