D.K.Suresh ರಾಜಕೀಯ ವೈರಾಗ್ಯ ಹೇಳಿಕೆ; ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆ...
Team Udayavani, Jun 19, 2023, 3:25 PM IST
ಬೆಂಗಳೂರು: ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರು ರಾಜಕೀಯ ವೈರಾಗ್ಯದ ಕುರಿತು ಮಾತನಾಡಿರುವ ಬಗ್ಗೆ ಕೇಳಿದಾಗ,ಡಿಸಿಎಂ ಈ ಪ್ರತಿಕ್ರಿಯೆ ನೀಡಿದ್ದಾರೆ.
ಅಶೋಕ್ ಅವರ ಹೇಳಿಕೆ ಕುರಿತು ಕೇಳಿದಾಗ, ‘ಅಶೋಕ್ ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ.ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದರು.
“ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ ಎಂದರು.
ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡಲು, ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ಸರಕಾರವು ತೀರ್ಮಾನಿಸಿದೆ. ಪುಕ್ಕಟೆಯಾಗಿ ಅಕ್ಕಿ ನೀಡಿ ಎಂದು ನಾವು ಅವರಿಗೆ ಕೇಳಿರಲಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ. ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದ್ದು, ಆರಂಭದಲ್ಲಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ನಾಳೆ ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ.” ಎಂದರು.
‘ಪಕ್ಷದ ಪ್ರಣಾಳಿಕೆ ಜಾರಿ, ನಾವು ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಎಚ್ಚರಿಕೆಯಿಂದ ಜನರ ಸೇವೆ, ಸಂಸತ್ ಚುನಾವಣೆಯಲ್ಲಿ ಕಾರ್ಯಕರ್ತರ ಸಂಘಟನೆ ಮಾಡಲು ಜಿಲ್ಲಾ ಉಸ್ತುವಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಮತ್ತೆ ಕೆಲವರಿಗೆ ಜಾಬ್ದಾರಿ ನೀಡಬೇಕಿದೆ. ಉತ್ತಮ ಆಡಳಿತ ನೀಡುವುದು ಸೇರಿದಂತೆ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗುವುದು. ನಮ್ಮ ನಾಯಕರುಗಳು ನಮ್ಮ ಅಧ್ಯಕ್ಷರು ಹಾಗೂ ಹೈಕಮಾಂಡ್ ಭೇಟಿಗೆ ಕಾಲವಕಾಶ ಕೇಳುತ್ತಿದ್ದರು. ಹೀಗಾಗಿ ಎಲ್ಲರನ್ನು ಒಟ್ಟಿಗೆ ಕರೆಸಲು ನಮ್ಮ ನಾಯಕರು ತೀರ್ಮಾನಿಸಿದ್ದಾರೆ. ಅವರು ಒಂದು ದಿನಾಂಕ ನೀಡಿದ್ದು, ಇನ್ನು ಅಂತಿಮವಾಗಿಲ್ಲ. ಇಂದು ಅಂತಿಮ ದಿನಾಂಕದ ಬಗ್ಗೆ ಮಾಹಿತಿ ನೀಡಲಿದ್ದಾರೆ’ ಎಂದರು.
ಪರಿಷತ್ ಸ್ಥಾನಗಳ ಆಯ್ಕೆ ವಿಚಾರವಾಗಿ ‘ನಾಮಪತ್ರ ಸಲ್ಲಿಸಲು ನಾಳೆಯವರೆಗೂ ಕಾಲಾವಕಾಶವಿದೆ. ನಮ್ಮ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದರಂತೆ ಅವಕಾಶ ನೀಡಲಾಗುವುದು. ನಾಮಪತ್ರ ಸಲ್ಲಿಕೆ ಮಾಡುವಾಗ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದು ತಿಳಿಯಲಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.