ದಲಿತರು ಸಿದ್ದರಾಮಯ್ಯ ಋಣ ತೀರಿಸಿ
Team Udayavani, Jan 30, 2018, 9:23 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಏಳ್ಗೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರಿಗೆ ಮತ ಹಾಕುವ ಮೂಲಕ ಸಿದ್ದರಾಮಯ್ಯ ಅವರ ಋಣ ತೀರಿಸಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಉದ್ಯಮಿಗಳ ಸಂಘದ ನೇತೃತ್ವದಲ್ಲಿ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ 50 ಲಕ್ಷದವರೆಗಿನ ಮೀಸಲಾತಿ ಪ್ರಮಾಣವನ್ನು 1 ಕೋಟಿ ರೂ.ಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಡಲಾಗಿದೆ. ಬರುವ ಬಜೆಟ್‌ನಲ್ಲಿ ಈ ಯೋಜನೆ ಘೋಷಣೆಯಾಗುವ ಸಾಧ್ಯತೆಯಿದೆ ಎಂದರು. ಹೊಸ ಉದ್ದಿಮೆ ಸ್ಥಾಪನೆಗೆ ಶೇ.4ರ ದರದಲ್ಲಿ 10 ಕೋಟಿವರೆಗೂ ಸಾಲ ನೀಡಲಾಗುತ್ತಿದೆ. ಕಟ್ಟಡ ನಿರ್ಮಾಣ ಹಾಗೂ ಹಾಸ್ಟೆಲ್ ನಿರ್ಮಾಣಕ್ಕೂ ಶೇ.10 ಸಬ್ಸಿಡಿ
ನೀಡಲಾಗುತ್ತಿದೆ. ದಲಿತರು ಉದ್ಯಮಿಗಳಾಗುವ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರ ವಿವಿಧ ಇಲಾಖೆಗಳಲ್ಲಿ ನಡೆಸುವ
ನೇರ ನೇಮಕಾತಿಯಲ್ಲಿ ಉದ್ಯೋಗ ನೀಡುವಂತೆ ಅನೇಕ ಎಸ್ಸಿ, ಎಸ್ಟಿ ಸಮುದಾಯದ ಯುವಕರು ದುಂಬಾಲು ಬೀಳುತ್ತಾರೆ.
ಅದರ ಬದಲು ಸರ್ಕಾರ ನೀಡುವ ಸಾಲ ಸೌಲಭ್ಯ ಪಡೆದು ಸ್ವಂತ ಉದ್ಯಮ ಸ್ಥಾಪಿಸಬೇಕು ಎಂದರು.
ಜವಳಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಜವಳಿ ಇಲಾಖೆಯಿಂದ ಗಾರ್ಮೆಂಟ್ ಉದ್ಯಮ ಸ್ಥಾಪನೆಗೆ ಶೇ.90 ಸಬ್ಸಿಡಿ ನೀಡಲಾಗುತ್ತಿದೆ. ಅಲ್ಲದೇ ಶೇ.50 ರಿಯಾಯ್ತಿ ದರದಲ್ಲಿ ಜಮೀನು ನೀಡಲಾಗುತ್ತಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು. ಕೈಗಾರಿಕಾ ಅಭಿವೃದ್ಧಿ ಆಯುಕ್ತರಾಗಿ ರುವ ಮನೋಜ್ ಕುಮಾರ್ ಜೈನ್ ಮಾತನಾಡಿ, ದಲಿತರು ನಡೆಸುವ ಉದ್ಯಮ
ಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ರಾಜ್ಯ ಸರ್ಕಾರವೇ ಗೌರವಧನ ನೀಡುವ ಕುರಿತಂತೆ ಯೋಜನೆ ರೂಪಿಸುವ
ಆಲೋಚನೆಯಿದೆ. ಜಾರ್ಖಂಡ್ ಸರ್ಕಾರ 8 ಸಾವಿರ, ಗುಜರಾತ್ 4 ಸಾವಿರ ರೂ. ಗೌರವ ಧನ ನೀಡುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ತಿಪ್ಪೇಶ, ರಾಜ್ಯ ಎಸ್ಸಿ, ಎಸ್ಟಿ ಉದ್ಯಮಿಗಳ ಸಂಘದ ಅಧ್ಯಕ್ಷ ಎಲ್. ಹನುಮಂತಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.