ಶಿಕ್ಷಣ ಸಂಸ್ಥೆಗಳ ಪಕ್ಕದ ಇಂಗುಗುಂಡಿ ಗುರುತು

Team Udayavani, Sep 12, 2019, 5:00 AM IST

e-25

ಸವಣೂರು: ಶಿಕ್ಷಣ ಸಂಸ್ಥೆಗಳ ಸಮೀಪವಿರುವ ಅಪಾಯಕಾರಿ ಇಂಗು ಗುಂಡಿ, ಹೊಂಡ, ತೋಡುಗಳನ್ನು ಗುರುತಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್‌ ನೀಡಿ, ಮಕ್ಕಳ ಸುರಕ್ಷತೆ ಕುರಿತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಾಹಿತಿ ನೀಡುವಂತೆ ಸವಣೂರು ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯು ಗ್ರಾ.ಪಂ. ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ. ಅಧ್ಯ ಕ್ಷತೆಯಲ್ಲಿ ನಡೆಯಿತು.

ವಿಷಯ ಪ್ರಸ್ತಾವಿಸಿದ ಸದಸ್ಯ ಗಿರಿಶಂಕರ ಸುಲಾಯ, ಶಿಕ್ಷಣ ಸಂಸ್ಥೆಗಳಿಗೆ ಬರುವ ದಾರಿಯಲ್ಲಿ ಹಾಗೂ ಸಮೀಪ ಇರುವ ಇಂಗುಗುಂಡಿಗಳಲ್ಲಿ ಮಳೆಗಾಲದಲ್ಲಿ ನೀರು ತುಂಬಿರುವುದರಿಂದ ಅವ ಘಡಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದರು.

ಬಸ್‌ ಬೇ ಬಳಿ ರಸ್ತೆ ಸರಿಪಡಿಸಿ
ಸವಣೂರು ಬಸ್‌ ತಂಗುದಾಣದ ಪಕ್ಕ ಬಸ್‌ ಬೇ ದಾಟಿ ಮುಂದಕ್ಕೆ ಚಲಿಸಿದಾಗ ರಸ್ತೆ ಕಿರಿದಾಗಿದ್ದು, ಅದರ ಬದಿಗಳು ತಗ್ಗಿನಲ್ಲಿವೆ. ಇದರಿಂದ ಸೈಡ್‌ ಕೊಡುವ ಸಂದರ್ಭದಲ್ಲಿ ವಾಹನ ಸವಾರರಿಗೆ ಸಮಸ್ಯೆಯಾಗುತ್ತದೆ. ಹಲವು ಅಪಘಾತಗಳೂ ಸಂಭವಿಸಿವೆ. ಈ ಸಮಸ್ಯೆ ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಬರೆದುಕೊಳ್ಳಬೇಕೆಂದು ಸದಸ್ಯ ಎಂ.ಎ. ರಫೀಕ್‌ ಹೇಳಿದರು.

ಆಧಾರ್‌ ತಿದ್ದುಪಡಿ ಕೇಂದ್ರ ತೆರೆಯಲಿ
ಹಲವರ ಆಧಾರ್‌ ಕಾರ್ಡ್‌ಗಳಲ್ಲಿ ತಿದ್ದುಪಡಿಗಳು ಇರುವುದರಿಂದ ಸರಕಾರದ ಯೋಜನೆಗಳು ಫಲಾ ನುಭವಿಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಆದರಿಂದ ಸವಣೂರು ಸಿಂಡಿಕೇಟ್ ಬ್ಯಾಂಕ್‌ ಮತ್ತು ಕಾಣಿಯೂರು ಅಂಚೆ ಕಚೇರಿಯಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರ ತೆರೆದು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸದಸ್ಯ ಸತೀಶ್‌ ಬಲ್ಯಾಯ ಹೇಳಿದರು. ಈ ಕುರಿತು ಸಂಬಂಧಪಟ್ಟವರಿಗೆ ಬರೆಯುವಂತೆ ನಿರ್ಧರಿಸಲಾಯಿತು.

ಕಿಸಾನ್‌ ಸಮ್ಮಾನ್‌ ಯೋಜನೆ ಹಾಗೂ ಕೊಳೆರೋಗದ ಪರಿಹಾರ ಮೊತ್ತ ಇನ್ನೂ ಹಲವರಿಗೆ ಬಂದಿಲ್ಲ. ಈ ಕುರಿತು ಇಲಾಖೆಗೆ ಬರೆದುಕೊಳ್ಳುವಂತೆ ನಿರ್ಧರಿಸಲಾಯಿತು.

ಗ್ರಾ.ಪಂ. ಸದಸ್ಯೆ ಮೀನಾಕ್ಷಿ ಬಂಬಿಲ ಮಾತನಾಡಿ, ಮಳೆಯಿಂದಾಗಿ ತನ್ನ ವಾಸದ ಮನೆಯ ಒಳಗೆ ನೀರು ಜಿನುಗುತ್ತಿದೆ. ಇದಕ್ಕೆ ಪರಿಹಾರ ಒದಗಿಸುವಂತೆ ಸಭೆಯಲ್ಲಿ ವಿನಂತಿಸಿದರು.

ಸಹಾಯ ಯಾಚಿಸಿ ಮನವಿ
ಮನೆ ನಿರ್ಮಾಣಕ್ಕೆ ಒಂದು ಬಡ ಕುಟುಂಬ ಹಾಗೂ ಮಗಳ ಮದುವೆ ವಿಚಾರವಾಗಿ ಸಹಾಯ ಯಾಚಿಸಿ ಮಹಿಳೆಯೋರ್ವರು ಗ್ರಾಮ ಪಂಚಾಯತ್‌ಗೆ ಮನವಿ ಮಾಡಿದ್ದರು. ಬಳಿಕ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿ – ಸಿಬಂದಿ ವರ್ಗದವರು ವೈಯಕ್ತಿಕವಾಗಿ ಧನಸಹಾಯ ನೀಡಿದರು.ಗ್ರಾಮ ಪಂಚಾಯತ್‌ ವತಿಯಿಂದಲೂ ನೀಡುವ ಕುರಿತು ನಿರ್ಧರಿಸಲಾಯಿತು.

ಗ್ರಾ.ಪಂ. ಉಪಾಧ್ಯಕ್ಷ ರವಿ ಕುಮಾರ್‌ ಬಿ.ಕೆ., ಸದಸ್ಯರಾದ ಗಿರಿಶಂಕರ ಸುಲಾಯ, ಪ್ರಕಾಶ್‌ ಕುದ್ಮನಮಜಲು, ದಿವಾಕರ ಬಂಗೇರ ಬೊಳಿಯಾಲ, ಸತೀಶ್‌ ಬಲ್ಯಾಯ, ಎಂ.ಎ. ರಫೀಕ್‌, ಸತೀಶ್‌ ಅಂಗಡಿಮೂಲೆ, ನಾಗೇಶ್‌ ಓಡಂತರ್ಯ, ರಾಜೀವಿ ಶೆಟ್ಟಿ ಕೆಡೆಂಜಿ, ಗಾಯತ್ರಿ ಬರೆಮೇಲು, ವೇದಾವತಿ ಅಂಜಯ, ಸುಧಾ ನಿಡ್ವಣ್ಣಾಯ, ಚೆನ್ನು ಮಾಂತೂರು, ನಳಿನಾಕ್ಷಿ ಎ., ದೇವಿಕಾ ಶ್ರೀಧರ್‌, ಜಯಂತಿ ಮಡಿವಾಳ, ವಸಂತಿ ಬಸ್ತಿ, ಮೀನಾಕ್ಷಿ ಕಲಾಪದಲ್ಲಿ ಭಾಗವಹಿಸಿದರು.

ಲೆಕ್ಕ ಸಹಾಯಕ ಎ. ಮನ್ಮಥ ಸ್ವಾಗತಿಸಿ, ಸಿಬಂದಿ ಪ್ರಮೋದ್‌ ಕುಮಾರ್‌ ರೈ ವಂದಿಸಿದರು. ದಯಾನಂದ ಮಾಲೆತ್ತಾರು, ಜಯಶ್ರೀ, ಜಯಾ ಕೆ., ಶಾರದಾ ಎಂ. ಸಹಕರಿಸಿದರು.

ಪ್ರಾಕೃತಿಕ ವಿಕೋಪದಿಂದ ಗ್ರಾ.ಪಂ. ವ್ಯಾಪ್ತಿಯ ಹಲವು ರಸ್ತೆಗಳು ಹಾನಿಯಾಗಿವೆ. ಗೌರಿ ಹೊಳೆ ತಟದ ಕೃಷಿಕರ ತೋಟಗಳಿಗೆ ಮಳೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿದೆ. ನಾಡೋಳಿಯಲ್ಲಿ ಗೌರಿಹೊಳೆ ಬದಿಯ ತಡೆಗೋಡೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಕೃಷಿ ಭೂಮಿ, ಕಿಂಡಿ ಅಣೆಕಟ್ಟು ಅಪಾಯದಲ್ಲಿವೆ. ಈ ಕುರಿತು ಸರಕಾರಕ್ಕೆ ಬರೆದುಕೊಳ್ಳುವಂತೆ ನಿರ್ಧರಿಸಲಾ ಯಿತು. ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಪಟ್ಟಿ ಮಾಡಲಾಯಿತು.

ಪ್ರಾಕೃತಿಕ ವಿಕೋಪ: ಹಲವು ರಸ್ತೆಗಳಿಗೆ ಹಾನಿ
ಪ್ರಾಕೃತಿಕ ವಿಕೋಪದಿಂದ ಗ್ರಾ.ಪಂ. ವ್ಯಾಪ್ತಿಯ ಹಲವು ರಸ್ತೆಗಳು ಹಾನಿಯಾಗಿವೆ. ಗೌರಿ ಹೊಳೆ ತಟದ ಕೃಷಿಕರ ತೋಟಗಳಿಗೆ ಮಳೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿದೆ. ನಾಡೋಳಿಯಲ್ಲಿ ಗೌರಿಹೊಳೆ ಬದಿಯ ತಡೆಗೋಡೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಕೃಷಿ ಭೂಮಿ, ಕಿಂಡಿ ಅಣೆಕಟ್ಟು ಅಪಾಯದಲ್ಲಿವೆ. ಈ ಕುರಿತು ಸರಕಾರಕ್ಕೆ ಬರೆದುಕೊಳ್ಳುವಂತೆ ನಿರ್ಧರಿಸಲಾ ಯಿತು. ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಪಟ್ಟಿ ಮಾಡಲಾಯಿತು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.